ಆದಿಕಾಂಡ 4:7 - ಪರಿಶುದ್ದ ಬೈಬಲ್7 ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಆ ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಆ ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನಿನ್ನ ಮುಖವು ಕಳೆಗುಂದಲು ಕಾರಣವೇನು? ನೀನು ತಲೆ ತಗ್ಗಿಸಲು ಕಾರಣವೇನು? ನೀನು ಒಳ್ಳೆಯ ಕೆಲಸ ಮಾಡಿದ್ದರೆ ನಿನ್ನ ತಲೆಯು ಎತ್ತಲ್ಪಡುವುದಲ್ಲವೇ? ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವುದು, ಅದು ನಿನ್ನನ್ನು ತನ್ನ ಹಿಡಿತದಲ್ಲಿ ಇಟ್ಟುಕೊಳ್ಳುವುದು. ಆದರೆ ನೀನು ಅದನ್ನು ಹಿಡಿತದಲ್ಲಿ ಇರಿಸಿಕೊಳ್ಳಬೇಕು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನೀನು ಒಳಿತನ್ನು ಮಾಡಿದ್ದರೆ ತಲೆ ಎತ್ತುತ್ತಿದ್ದೆ; ಕೆಡುಕನ್ನು ಮಾಡಿದ್ದರಿಂದ ಪಾಪವು ಹೊಸ್ತಿಲಲ್ಲಿ ಹೊಂಚುಹಾಕುತ್ತಿದೆ; ಅದು ನಿನ್ನನ್ನು ಬಯಸುತ್ತಿದೆ. ನೀನು ಅದನ್ನು ಜಯಿಸಬೇಕು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಒಳ್ಳೇ ಕೆಲಸ ಮಾಡಿದರೆ ನಿನ್ನ ತಲೆ ಎತ್ತಲ್ಪಡುವದಲ್ಲವೇ; ಅಲ್ಲದಿದ್ದರೆ ಪಾಪವು ನಿನ್ನನ್ನು ಹಿಡಿಯಬೇಕೆಂದು ಬಾಗಿಲಲ್ಲಿ ಹೊಂಚಿಕೊಂಡಿರುವದು; ಆದರೂ ನೀನು ಅದನ್ನು ವಶಮಾಡಿಕೊಳ್ಳಬೇಕು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ನೀನು ಒಳ್ಳೆಯದನ್ನು ಮಾಡಿದರೆ, ನೀನು ಸ್ವೀಕಾರವಾಗುತ್ತಿದ್ದೆ ಅಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ, ಬಾಗಿಲಲ್ಲಿ ಪಾಪವು ಹೊಂಚಿಕೊಂಡಿರುವುದು ಮತ್ತು ಅದು ನಿನ್ನನ್ನು ನುಂಗಲು ಬಯಸುತ್ತದೆ. ಆದರೂ ನೀನು ಅದರ ಮೇಲೆ ಅಧಿಕಾರ ಮಾಡಬೇಕು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿ |
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.
ನೀವು ಯಾವನಿಗೆ ಗುಲಾಮರಂತೆ ವಿಧೇಯರಾಗುತ್ತೇವೆ ಎಂದು ನಿಮ್ಮನ್ನು ಒಪ್ಪಿಸಿಕೊಡುತ್ತೀರೋ ಆ ವ್ಯಕ್ತಿಗೆ ನೀವು ನಿಜವಾಗಿಯೂ ಗುಲಾಮರಾಗಿದ್ದೀರಿ ಎಂಬುದು ನಿಮಗೆ ಖಂಡಿತವಾಗಿ ತಿಳಿದಿದೆ. ನೀವು ಯಾವನಿಗೆ ವಿಧೇಯರಾಗುತ್ತೀರೋ ಅವನೇ ನಿಮ್ಮ ಒಡೆಯನಾಗಿದ್ದಾನೆ. ನೀವು ಪಾಪವನ್ನಾದರೂ ಅನುಸರಿಸಬಹುದು ಅಥವಾ ದೇವರಿಗಾದರೂ ವಿಧೇಯರಾಗಬಹುದು. ಪಾಪವು ಆತ್ಮಿಕ ಮರಣವನ್ನು ಉಂಟುಮಾಡುತ್ತದೆ. ಆದರೆ ನೀವು ದೇವರಿಗೆ ವಿಧೇಯರಾದರೆ, ಆ ವಿಧೇಯತೆಯು ನಿಮ್ಮನ್ನು ನೀತಿವಂತರನ್ನಾಗಿ ಮಾಡುತ್ತದೆ.
ನೀವು ಕುರುಡು ಪ್ರಾಣಿಗಳನ್ನು ಯಜ್ಞಕ್ಕಾಗಿ ತರುತ್ತೀರಿ. ಅದು ತಪ್ಪಲ್ಲವೇ? ಕುಂಟು, ರೋಗಪೀಡಿತ ಪಶುಗಳನ್ನು ಯಜ್ಞಾರ್ಪಣೆಗಾಗಿ ತರುತ್ತೀರಿ. ಅದು ತಪ್ಪಲ್ಲವೇ? ನಿಮ್ಮ ರಾಜ್ಯಪಾಲನಿಗೆ ನೀವು ಅಂಥಾ ಪ್ರಾಣಿಗಳನ್ನು ಕಾಣಿಕೆಯಾಗಿ ಕೊಟ್ಟರೆ ಅವನು ಅದನ್ನು ಸ್ವೀಕರಿಸುವನೋ? ಇಲ್ಲ, ಅಂಥಾ ಕಾಣಿಕೆಯನ್ನು ಅವನು ಸ್ವೀಕರಿಸುವದೇ ಇಲ್ಲ” ಸರ್ವಶಕ್ತನಾದ ಯೆಹೋವನು ಇದನ್ನು ಹೇಳುತ್ತಿದ್ದಾನೆ.
ಯೆಹೂದ್ಯರಲ್ಲದ ಜನರಿಗೆ ಸಹಾಯ ಮಾಡುವುದಕ್ಕಾಗಿ ದೇವರು ನನ್ನನ್ನು ತನ್ನ ಸೇವಕನನ್ನಾಗಿ ಮಾಡಿಕೊಂಡನು. ದೇವರ ಸುವಾರ್ತೆಯನ್ನು ಉಪದೇಶಿಸುವುದರ ಮೂಲಕ ನಾನು ಆತನ ಸೇವೆ ಮಾಡುವವನಾಗಿದ್ದೇನೆ. ಯೆಹೂದ್ಯರಲ್ಲದ ಜನರು ಸಹ ದೇವರು ಸ್ವೀಕರಿಸಿಕೊಳ್ಳುವ ಕಾಣಿಕೆಯಂತಾಗಬೇಕೆಂದು ನಾನು ಈ ಸೇವೆ ಮಾಡುವವನಾಗಿದ್ದೇನೆ. ಆ ಜನರು ದೇವರಿಗೋಸ್ಕರವಾಗಿ ಪವಿತ್ರಾತ್ಮನ ಮೂಲಕ ಪವಿತ್ರರಾಗಿದ್ದಾರೆ.
ಆದ್ದರಿಂದ, ಈಗ ನೀವು (ಮೂವರು) ಏಳು ಹೋರಿಗಳನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ನನ್ನ ಸೇವಕನಾದ ಯೋಬನ ಬಳಿಗೆ ಹೋಗಿ ಅವುಗಳನ್ನು ನಿಮಗೋಸ್ಕರ ದೋಷಪರಿಹಾರಕಯಜ್ಞ ಮಾಡಿರಿ. ನನ್ನ ಸೇವಕನಾದ ಯೋಬನು ನಿಮಗೋಸ್ಕರ ಪ್ರಾರ್ಥಿಸುವನು. ಆಗ ನಾನು ಅವನ ಪ್ರಾರ್ಥನೆಗೆ ಖಂಡಿತವಾಗಿ ಉತ್ತರಿಸುವೆನು; ನಿಮ್ಮ ಮೂರ್ಖತನಕ್ಕೆ ಬರಬೇಕಾಗಿದ್ದ ದಂಡನೆಯನ್ನು ಮನ್ನಿಸುವೆನು. ನೀವು ನನ್ನ ಬಗ್ಗೆ ಹೇಳಿದವುಗಳು ಸತ್ಯವಲ್ಲ; ಆದರೆ ನನ್ನ ಸೇವಕನಾದ ಯೋಬನು ಹೇಳಿದವುಗಳು ಸತ್ಯವಾಗಿವೆ.” ಎಂದನು.