ಆದಿಕಾಂಡ 4:8 - ಪರಿಶುದ್ದ ಬೈಬಲ್8 ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ, “ನಾವು ಹೊಲಕ್ಕೆ ಹೋಗೋಣ ಬಾ” ಎಂದು ಹೇಳಿದನು. ಅಂತೆಯೇ ಕಾಯಿನನು ಮತ್ತು ಹೇಬೆಲನು ಹೊಲಕ್ಕೆ ಹೋದರು. ಅಲ್ಲಿ ಕಾಯಿನನು ತನ್ನ ತಮ್ಮನ ಮೇಲೆರಗಿ ಅವನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನ ಸಂಗಡ ಮಾತನಾಡಿದನು. ಅವರು ಹೊಲದಲ್ಲಿದ್ದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಬಳಿಕ ಕಾಯಿನನು ತಮ್ಮ ಹೇಬೆಲನಿಗೆ, “ಹೊಲಕ್ಕೆ ಹೋಗೋಣ ಬಾ”, ಎಂದು ಕರೆದನು. ಅವರಿಬ್ಬರೂ ಅಲ್ಲಿಗೆ ಬಂದಾಗ ಕಾಯಿನನು ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ತರುವಾಯ ಕಾಯಿನನು ತನ್ನ ತಮ್ಮನಾದ ಹೇಬೆಲನಿಗೆ - ಅಡವಿಗೆ ಹೋಗೋಣ ಬಾ ಎಂದನು. ಅಡವಿಗೆ ಬಂದಾಗ ಕಾಯಿನನು ತನ್ನ ತಮ್ಮನ ಮೇಲೆ ಬಿದ್ದು ಅವನನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಅನಂತರ ಕಾಯಿನನು, “ಅಡವಿಗೆ ಹೋಗೋಣ ಬಾ,” ಎಂದು ತನ್ನ ತಮ್ಮನಿಗೆ ಹೇಳಿದನು. ಅವರು ಅಲ್ಲಿ ಬಂದಾಗ ಕಾಯಿನನು ತನ್ನ ತಮ್ಮ ಹೇಬೆಲನ ಮೇಲೆ ದಾಳಿಮಾಡಿ, ಅವನನ್ನು ಕೊಂದುಹಾಕಿದನು. ಅಧ್ಯಾಯವನ್ನು ನೋಡಿ |
ಕಾಯಿನ ಮತ್ತು ಹೇಬೆಲರಿಬ್ಬರೂ ದೇವರಿಗೆ ಯಜ್ಞಗಳನ್ನು ಅರ್ಪಿಸಿದರು. ಆದರೆ ಹೇಬೆಲನಲ್ಲಿ ನಂಬಿಕೆಯಿದ್ದುದರಿಂದ ಅವನು ದೇವರಿಗೆ ಉತ್ತಮವಾದ ಯಜ್ಞವನ್ನು ಅರ್ಪಿಸಿದನು. ಅವನು ಅರ್ಪಿಸಿದ ವಸ್ತುಗಳಿಂದ ತನಗೆ ಸಂತೋಷವಾಯಿತೆಂದು ದೇವರೇ ಹೇಳಿದನು. ಅವನಲ್ಲಿ ನಂಬಿಕೆಯಿದ್ದುದರಿಂದ ದೇವರು ಅವನನ್ನು ಒಳ್ಳೆಯ ಮನುಷ್ಯನೆಂದು ಕರೆದನು. ಹೇಬೆಲನು ಸತ್ತುಹೋದನು, ಆದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತನಾಡುತ್ತಿದ್ದಾನೆ.