ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”
ಸೊಲೊಮೋನನ ಮೇಜಿನ ಮೇಲೆ ಇಟ್ಟಿರುವ ಆಹಾರವನ್ನು ನೋಡಿದಳು. ಅವನ ಸೇವಕರು ಮಾಡುವ ಸೇವೆಯ ರೀತಿಯನ್ನು ಪರಿಶೀಲಿಸಿದಳು. ಅವರು ಧರಿಸುವ ಉಡುಪು, ಸಮವಸ್ತ್ರಗಳು, ದೇವಾಲಯಕ್ಕೆ ಹೋಗುವಾಗ ಮಾಡುವ ಮೆರವಣಿಗೆಗಳನ್ನು ಮತ್ತು ಯಜ್ಞಗಳನ್ನು ನೋಡಿದಳು. ಪ್ರತಿಯೊಂದು ವಿಷಯವನ್ನು ಆಕೆ ಗಮನಿಸಿದಾಗ ಅಚ್ಚರಿಗೊಂಡಳು.
ರಾಜನ ಮೇಜಿನ ಮೇಲಿದ್ದ ಆಹಾರವನ್ನೂ ಒಟ್ಟಾಗಿ ಸೇರಿಬರುತ್ತಿದ್ದ ಅವನ ಅಧಿಕಾರಿಗಳನ್ನೂ ಅರಮನೆಯಲ್ಲಿದ್ದ ಸೇವಕರನ್ನೂ ಮತ್ತು ಅವರು ಧರಿಸಿದ್ದ ಉತ್ತಮ ಬಟ್ಟೆಗಳನ್ನೂ ಅವಳು ನೋಡಿದಳು. ಅವನ ಔತಣಕೂಟಗಳನ್ನೂ ಅವನು ಆಲಯದಲ್ಲಿ ಅರ್ಪಿಸುತ್ತಿದ್ದ ಯಜ್ಞಗಳನ್ನೂ ಅವಳು ನೋಡಿದಳು. ಇವುಗಳಿಂದ ಅವಳಿಗೆ ನಿಜವಾಗಿಯೂ “ಉಸಿರುಕಟ್ಟಿಸುವಂತಹ” ವಿಸ್ಮಯವಾಯಿತು.
“ನೀನು ಮತ್ತು ನಿನ್ನ ಪುತ್ರರು ದೇವದರ್ಶನದ ಗುಡಾರದೊಳಗೆ ಬರುವಾಗ ದ್ರಾಕ್ಷಾರಸವನ್ನಾಗಲಿ ಮದ್ಯವನ್ನಾಗಲಿ ಕುಡಿಯಬಾರದು. ನೀವು ಅವುಗಳನ್ನು ಕುಡಿದರೆ ಸಾಯುವಿರಿ. ಈ ಕಟ್ಟಳೆಯು ನಿಮ್ಮ ಸಂತತಿಯವರಿಗೆ ಶಾಶ್ವತವಾಗಿದೆ.
ಅವನು ತನ್ನ ಕತ್ತೆಯನ್ನು ದ್ರಾಕ್ಷೆಬಳ್ಳಿಗೆ ಕಟ್ಟುವನು; ತನ್ನ ಪ್ರಾಯದ ಕತ್ತೆಯನ್ನು ಉತ್ತಮವಾದ ದ್ರಾಕ್ಷೆಬಳ್ಳಿಗೆ ಕಟ್ಟುವನು. ಅವನು ಉತ್ತಮವಾದ ದ್ರಾಕ್ಷಾರಸದಿಂದ ತನ್ನ ಬಟ್ಟೆಗಳನ್ನು ತೊಳೆಯುವನು.