13 ಈ ಹೊತ್ತಿಗೆ ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ, ನಿನ್ನ ಉದ್ಯೋಗಕ್ಕೆ ಪುನಃ ನಿನ್ನನ್ನು ನೇಮಿಸುವನು. ನೀನು ಮೊದಲು ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
13 ಇನ್ನು ಮೂರು ದಿನಗಳೊಳಗೆ ನೀನು ತಲೆಯೆತ್ತುವಂತೆ ಫರೋಹನು ಮಾಡುವನು; ನಿನ್ನನ್ನು ಮರಳಿ ನೌಕರಿಗೆ ಸೇರಿಸಿಕೊಳ್ಳುವನು; ನೀನು ಮುಂದಿನಂತೆಯೇ ಫರೋಹನಿಗೆ ಪಾನಸೇವಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುವೆ.
13 ಆ ಮೂರು ಕೊಂಬೆಗಳೇ ಮೂರು ದಿನಗಳು; ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನನ್ನು ಮೇಲಕ್ಕೆ ಎತ್ತಿ ನಿನ್ನ ಉದ್ಯೋಗಕ್ಕೆ ತಿರಿಗಿ ನೇವಿುಸುವನು. ನೀನು ಮುಂಚೆ ಫರೋಹನ ಪಾನದಾಯಕನಾಗಿದ್ದು ಅವನ ಕೈಗೆ ಪಾನಪಾತ್ರೆಯನ್ನು ಒಪ್ಪಿಸುತ್ತಿದ್ದಂತೆಯೇ ಮುಂದೆಯೂ ಒಪ್ಪಿಸುವಿ.
13 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನನ್ನು ಗೌರವಿಸಿ, ತಿರುಗಿ ನಿನ್ನ ಕೆಲಸದಲ್ಲಿ ಇಡುವನು. ನೀನು ಮೊದಲು ಅವನ ಪಾನದಾಯಕನಾಗಿದ್ದ ಹಾಗೆ ಫರೋಹನ ಪಾತ್ರೆಯನ್ನು ಅವನ ಕೈಗೆ ಕೊಡುವೆ.
ಯೆಹೂದದ ರಾಜನಾಗಿದ್ದ ಯೆಹೋಯಾಖೀನನು ಮೂವತ್ತೇಳು ವರ್ಷ ಬಾಬಿಲೋನಿನ ಸೆರೆಮನೆಯಲ್ಲಿದ್ದನು. ಆತನ ಕಾರಾಗೃಹವಾಸದ ಮೂವತ್ತೇಳನೇ ವರ್ಷದಲ್ಲಿ ಬಾಬಿಲೋನಿನ ರಾಜನಾದ ಎವೀಲ್ಮೆರೋದಕನು ಯೆಹೋಯಾಖೀನನ ಮೇಲೆ ದಯೆತೋರಿದನು. ಆ ವರ್ಷ ಅವನು ಯೆಹೋಯಾಖೀನನನ್ನು ಸೆರೆಮನೆಯಿಂದ ಬಿಡುಗಡೆ ಮಾಡಿದನು. ಇದೇ ವರ್ಷ ಎವೀಲ್ಮೆರೋದಕನು ಯೆಹೋಯಾಖೀನನನ್ನು ಆ ವರ್ಷದ ಹನ್ನೆರಡನೆ ತಿಂಗಳಿನ ಇಪ್ಪತ್ತೈದನೆ ದಿನ ಬಿಡುಗಡೆ ಮಾಡಿದನು.
ಬಾಬಿಲೋನ್ ರಾಜನಾದ ಎವೀಲ್ಮೆರೋದಕನು, ಯೆಹೂದದ ರಾಜನಾದ ಯೆಹೋಯಾಖೀನನನ್ನು ಸೆರೆಯಿಂದ ಬಿಡುಗಡೆ ಮಾಡಿದನು. ಯೆಹೋಯಾಖೀನನನ್ನು ಸೆರೆಹಿಡಿದ ಮೂವತ್ತೇಳನೆಯ ವರ್ಷದ ನಂತರ ಇದು ಸಂಭವಿಸಿತು. ಎವೀಲ್ಮೆರೋದಕನ ಆಳ್ವಿಕೆಯ ಹನ್ನೆರಡನೆ ತಿಂಗಳಿನ ಇಪ್ಪತ್ತೇಳನೆಯ ದಿನದಂದು ಇದು ಸಂಭವಿಸಿತು.
ಏಳು ದಿನಗಳ ನಂತರ ನಾನು ದೊಡ್ಡ ಮಳೆಯನ್ನು ಭೂಮಿಯ ಮೇಲೆ ಸುರಿಸುವೆನು. ಈ ಮಳೆಯು ನಲವತ್ತು ದಿವಸ ಹಗಲಿರುಳು ಸುರಿಯುವುದು. ನಾನು ನಿರ್ಮಿಸಿದ ಪ್ರತಿಯೊಂದು ಜೀವಿಯನ್ನೂ ನಾನು ಭೂಮಿಯ ಮೇಲಿಂದ ಅಳಿಸಿಬಿಡುವೆನು” ಎಂದು ಹೇಳಿದನು.