Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:19 - ಪರಿಶುದ್ದ ಬೈಬಲ್‌

19 ಮೂರುದಿನಗಳೊಳಗಾಗಿ ರಾಜನು ನಿನ್ನನ್ನು ಸೆರೆಮನೆಯಿಂದ ಬಿಡಿಸಿ ನಿನ್ನ ಶಿರಚ್ಛೇದನ ಮಾಡಿಸುವನು; ನಿನ್ನ ದೇಹವನ್ನು ಕಂಬಕ್ಕೆ ನೇತುಹಾಕಿಸುವನು; ಪಕ್ಷಿಗಳು ನಿನ್ನ ದೇಹವನ್ನು ತಿಂದುಬಿಡುತ್ತವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ತೆಗೆಸುವನು, ನಿನ್ನನ್ನು ಮರಕ್ಕೆ ತೂಗು ಹಾಕಿಸುವನು, ಪಕ್ಷಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಇನ್ನು ಮೂರು ದಿನದೊಳಗೆ ಫರೋಹನು ನಿನ್ನ ಕುತ್ತಿಗೆಗೆ ನೇಣುಹಾಕಿಸುವನು; ಮರಕ್ಕೆ ತೂಗುಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಈ ಹೊತ್ತಿಗೆ ಮೂರು ದಿನಗಳೊಳಗೆ ಫರೋಹನು ನಿನ್ನ ತಲೆಯನ್ನು ಎತ್ತಿಸುವನು; ನಿನ್ನನ್ನು ಮರಕ್ಕೆ ತೂಗಹಾಕಿಸುವನು; ಹಕ್ಕಿಗಳು ಬಂದು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:19
17 ತಿಳಿವುಗಳ ಹೋಲಿಕೆ  

ಆದರೆ ಫರೋಹನು ಭಕ್ಷ್ಯಗಾರನನ್ನು ಕೊಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಪ್ರತಿಯೊಂದು ನಡೆಯಿತು.


ಧರ್ಮಶಾಸ್ತ್ರವು ನಮ್ಮ ಮೇಲೆ ಶಾಪವನ್ನು ಬರಮಾಡುತ್ತದೆ. ಆದರೆ ಕ್ರಿಸ್ತನು ಆ ಶಾಪವನ್ನು ತನ್ನ ಮೇಲೆ ತೆಗೆದುಕೊಂಡನು. ಆತನು ನಮ್ಮ ಸ್ಥಾನವನ್ನು ತಾನೇ ತೆಗೆದುಕೊಂಡನು. ಕ್ರಿಸ್ತನು ತನ್ನನ್ನೇ ಶಾಪಕ್ಕೆ ಒಳಪಡಿಸಿಕೊಂಡನು. ಪವಿತ್ರ ಗ್ರಂಥದಲ್ಲಿ ಬರೆದಿರುವಂತೆ, “ಮರಕ್ಕೆ ತೂಗುಹಾಕಲ್ಪಟ್ಟ ವ್ಯಕ್ತಿಯು ಶಾಪಗ್ರಸ್ತನಾಗಿದ್ದಾನೆ.”


ಯಾಕೆಂದರೆ ದೇವರ ಅಪೇಕ್ಷೆಗನುಸಾರವಾಗಿ ನೀವು ತಿಳಿದುಕೊಳ್ಳಬೇಕಾದ ಪ್ರತಿಯೊಂದನ್ನೂ ನಾನು ನಿಮಗೆ ನಿಶ್ಚಯವಾಗಿ ತಿಳಿಸಿದ್ದೇನೆ.


ನೀನು ಇಸ್ರೇಲಿನ ಪರ್ವತದಲ್ಲಿ ಸಾಯುವೆ, ನೀನೂ, ನಿನ್ನ ಎಲ್ಲಾ ಸೈನ್ಯ, ನಿನ್ನೊಂದಿಗೆ ಬಂದಿದ್ದ ಇತರ ದೇಶದವರೆಲ್ಲಾ ರಣರಂಗದಲ್ಲಿ ಸಾಯುವರು. ನಿಮ್ಮ ಹೆಣಗಳನ್ನು ಆಕಾಶದ ಸಕಲ ಮಾಂಸಹಾರಿ ಪಕ್ಷಿಗಳಿಗೂ, ಕಾಡುಪ್ರಾಣಿಗಳಿಗೂ ಆಹಾರವಾಗಿ ಕೊಡುವೆನು.


ತನ್ನ ತಂದೆಯನ್ನು ಗೇಲಿಮಾಡುವವನಾಗಲಿ ವೃದ್ಧ ತಾಯಿಯನ್ನು ಕಡೆಗಣಿಸುವವನಾಗಲಿ ದಂಡನೆ ಹೊಂದುವನು. ಕಾಗೆಗಳೂ ಕ್ರೂರಪಕ್ಷಿಗಳೂ ಅವನ ಕಣ್ಣುಗಳನ್ನು ತಿನ್ನುವಂತಿರುವುದು ಆ ದಂಡನೆ.


ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ.


ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು.


ಇಂದು ನಾನು ನಿನ್ನನ್ನು ಸೋಲಿಸಲು ಯೆಹೋವನು ಸಹಾಯಮಾಡುತ್ತಾನೆ. ನಾನು ನಿನ್ನನ್ನು ಕೊಲ್ಲುತ್ತೇನೆ. ಇಂದು ನಾನು ನಿನ್ನ ತಲೆಯನ್ನು ಕತ್ತರಿಸಿ ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಮೃಗಗಳಿಗೂ ಆಹಾರವನ್ನಾಗಿ ಕೊಡುತ್ತೇನೆ. ಉಳಿದೆಲ್ಲ ಫಿಲಿಷ್ಟಿಯರಿಗೂ ಸಹ ನಾವು ಅದೇ ರೀತಿ ಮಾಡುತ್ತೇವೆ. ಆಗ ಇಸ್ರೇಲಿನಲ್ಲಿ ದೇವರಿದ್ದಾನೆಂಬುದು ಇಡೀ ಜಗತ್ತಿಗೆಲ್ಲ ಗೊತ್ತಾಗುವುದು!


ಗೊಲ್ಯಾತನು ದಾವೀದನಿಗೆ, “ಬಾ ಇಲ್ಲಿಗೆ, ನಿನ್ನ ದೇಹವನ್ನು ಪಕ್ಷಿಗಳಿಗೂ ಕ್ರೂರಪ್ರಾಣಿಗಳಿಗೂ ಆಹಾರವನ್ನಾಗಿ ಮಾಡುತ್ತೇನೆ!” ಎಂದನು.


ಆಮೇಲೆ ಯೆಹೋಶುವನು ಆ ಐದು ಮಂದಿ ಅರಸರನ್ನು ಕೊಂದುಹಾಕಿದನು. ಅವರ ದೇಹಗಳನ್ನು ಐದು ಮರಗಳಿಗೆ ಸಾಯಂಕಾಲದವರೆಗೂ ನೇತುಹಾಕಿದನು.


ಯೆಹೋಶುವನು “ಆಯಿ”ಯ ಅರಸನನ್ನು ಒಂದು ಮರಕ್ಕೆ ಸಾಯಂಕಾಲದವರೆಗೂ ನೇತುಹಾಕಿದನು. ಸೂರ್ಯನು ಮುಳುಗಿದ ಮೇಲೆ, ಯೆಹೋಶುವನು ಆ ಅರಸನ ಶವವನ್ನು ಮರದಿಂದ ಕೆಳಗಿಳಿಸಿ ನಗರದ ದ್ವಾರದಲ್ಲೇ ಬಿಸಾಡಿ ಅದರ ಮೇಲೆ ಕಲ್ಲಿನ ದೊಡ್ಡ ಕುಪ್ಪೆಯನ್ನು ಮಾಡಿಸಿದನು. ಅದು ಇಂದಿನವರೆಗೂ ಹಾಗೆಯೇ ಇದೆ.


ಅವನು ಹೇಳಿದ ಅರ್ಥಕ್ಕೆ ಸರಿಯಾಗಿ ನನಗೆ ಆಯಿತು; ಮೊದಲಿನ ಉದ್ಯೋಗವು ದೊರೆಯಿತು; ಅವನು ಭಕ್ಷ್ಯಗಾರನನ್ನು ಕುರಿತು ತಿಳಿಸಿದಂತೆಯೇ ಅವನಿಗೆ ಮರಣದಂಡನೆ ಆಯಿತು” ಎಂದು ಹೇಳಿದನು.


ಅವುಗಳಲ್ಲಿ ರಾಜನಿಗೋಸ್ಕರವಾಗಿ ಎಲ್ಲಾ ಬಗೆಯ ಭಕ್ಷ್ಯಗಳಿದ್ದವು. ಆದರೆ ಪಕ್ಷಿಗಳು ಆ ಆಹಾರವನ್ನು ತಿನ್ನುತ್ತಿದ್ದವು” ಎಂದು ಹೇಳಿದನು.


ಮೂರುದಿನಗಳೊಳಗಾಗಿ ಫರೋಹನು ನಿನ್ನನ್ನು ಕ್ಷಮಿಸಿ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳುವನು. ನೀನು ಮೊದಲಿನಂತೆ ಅವನಿಗೆ ಪಾನದಾಯಕನಾಗಿರುವೆ.


ಯೋಸೇಫನು, “ಕನಸಿನ ಅರ್ಥವನ್ನು ನಾನು ನಿನಗೆ ತಿಳಿಸುತ್ತೇನೆ. ಮೂರು ಬುಟ್ಟಿಗಳ ಅರ್ಥ ಮೂರು ದಿನಗಳು.


ಮೂರನೆಯ ದಿನ ಬಂದಿತು. ಅದು ಫರೋಹನ ಜನ್ಮದಿನವಾಗಿತ್ತು. ಫರೋಹನು ತನ್ನ ಎಲ್ಲಾ ಸೇವಕರಿಗೆ ಔತಣಕೂಟವನ್ನು ಏರ್ಪಡಿಸಿದನು. ಔತಣಕೂಟದಲ್ಲಿ ಫರೋಹನು ಭಕ್ಷ್ಯಗಾರನನ್ನೂ ಮತ್ತು ಪಾನದಾಯಕನನ್ನೂ ಸೆರೆಮನೆಯಿಂದ ಬಿಡುಗಡೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು