ಆದಿಕಾಂಡ 40:21 - ಪರಿಶುದ್ದ ಬೈಬಲ್21 ಫರೋಹನು ಪಾನದಾಯಕನನ್ನು ಮತ್ತೆ ಅದೇ ಕೆಲಸಕ್ಕೆ ನೇಮಿಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪಾನದಾಯಕರ ಮುಖ್ಯಸ್ಥನನ್ನು ಪುನಃ ಅವನ ಉದ್ಯೋಗಕ್ಕೆ ನೇಮಿಸಿದನು. ಅವನು ಪಾನ ಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪಾನಸೇವಕರ ಮುಖ್ಯಸ್ಥನನ್ನು ಪುನಃ ಅವನ ನೌಕರಿಗೆ ಏರಿಸಿದ; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಒಪ್ಪಿಸುವಂಥವನಾದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪಾನದಾಯಕರ ಮುಖ್ಯಸ್ಥನನ್ನು ತಿರಿಗಿ ಅವನ ಉದ್ಯೋಗಕ್ಕೆ ನೇವಿುಸಿದನು; ಅವನು ಪಾನಪಾತ್ರೆಯನ್ನು ಫರೋಹನ ಕೈಗೆ ಕೊಡುವವನಾದನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಮುಖ್ಯ ಪಾನದಾಯಕನನ್ನು ತಿರುಗಿ ಉದ್ಯೋಗದಲ್ಲಿ ಇರಿಸಿದ್ದರಿಂದ, ಮತ್ತೆ ಅವನು ಫರೋಹನ ಕೈಗೆ ಪಾನಪಾತ್ರೆಯನ್ನು ಕೊಟ್ಟನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”