ಆದಿಕಾಂಡ 40:22 - ಪರಿಶುದ್ದ ಬೈಬಲ್22 ಆದರೆ ಫರೋಹನು ಭಕ್ಷ್ಯಗಾರನನ್ನು ಕೊಲ್ಲಿಸಿದನು. ಯೋಸೇಫನು ಹೇಳಿದಂತೆಯೇ ಪ್ರತಿಯೊಂದು ನಡೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದರೆ ಮುಖ್ಯ ಅಡಿಗೆಭಟ್ಟನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದಂತೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಆದರೆ ಮುಖ್ಯ ಅಡಿಗೆಭಟ್ಟನನ್ನು ನೇಣು ಹಾಕಿಸಿದ. ಹೀಗೆ ಜೋಸೆಫನು ಹೇಳಿದ ಅರ್ಥ ಕಾರ್ಯಗತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದರೆ ಮುಖ್ಯ ಭಕ್ಷ್ಯಕಾರನನ್ನು ಫರೋಹನು ಗಲ್ಲಿಗೆ ಹಾಕಿಸಿದನು. ಹೀಗೆ ಯೋಸೇಫನು ಹೇಳಿದ್ದಂತೆಯೇ ಆಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದರೆ ಮುಖ್ಯ ರೊಟ್ಟಿಗಾರನನ್ನು ಗಲ್ಲಿಗೇರಿಸಿದನು. ಹೀಗೆ ಯೋಸೇಫನು ಹೇಳಿದ ಹೇಳಿದಂತೆಯೇ ಆಯಿತು. ಅಧ್ಯಾಯವನ್ನು ನೋಡಿ |
ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.