ಆದಿಕಾಂಡ 40:5 - ಪರಿಶುದ್ದ ಬೈಬಲ್5 ಒಂದು ರಾತ್ರಿ ಆ ಇಬ್ಬರು ಕೈದಿಗಳಿಗೆ ಅಂದರೆ ಭಕ್ಷ್ಯಗಾರನಿಗೂ ಪಾನದಾಯಕನಿಗೂ ಒಂದೊಂದು ಕನಸು ಬಿತ್ತು. ಮತ್ತು ಅವರಿಬ್ಬರ ಕನಸುಗಳು ತಮ್ಮದೇ ಆದ ಅರ್ಥವನ್ನು ಹೊಂದಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಐಗುಪ್ತ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ಅಡಿಗೆ ಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೆಲವು ಕಾಲವದ ಮೇಲೆ, ಆ ಇಬ್ಬರು ನೌಕರರಿಗೂ ಅಂದರೆ, ಈಜಿಪ್ಟಿನ ಅರಸ ಸೆರೆಗೆ ಹಾಕಿಸಿದ್ದ ಪಾನಸೇವಕನಿಗೂ ಅಡಿಗೆಭಟ್ಟನಿಗೂ, ಒಂದೇ ರಾತ್ರಿ ಕನಸುಬಿತ್ತು. ಅವರ ಕನಸುಗಳಿಗೆ ಬೇರೆಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೀಗೆ ಅವರು ಕೆಲವು ಕಾಲ ಕಾವಲಲ್ಲಿದ್ದ ಮೇಲೆ ಅವರಿಬ್ಬರಿಗೂ, ಅಂದರೆ ಐಗುಪ್ತದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ ಭಕ್ಷ್ಯಕಾರನಿಗೂ, ಒಂದೇ ರಾತ್ರಿ ಕನಸುಬಿತ್ತು; ಅವರವರ ಕನಸಿಗೆ ಬೇರೆ ಬೇರೆ ಅರ್ಥವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅವರಿಬ್ಬರಿಗೂ ಅಂದರೆ, ಈಜಿಪ್ಟ್ ದೇಶದ ಅರಸನು ಸೆರೆಯಲ್ಲಿ ಹಾಕಿಸಿದ್ದ ಪಾನದಾಯಕನಿಗೂ, ರೊಟ್ಟಿಗಾರನಿಗೂ ಒಂದೇ ರಾತ್ರಿ ಕನಸು ಬಿತ್ತು. ಅವರವರ ಕನಸಿಗೆ ಅದರದೇ ಆದ ಅರ್ಥವಿತ್ತು. ಅಧ್ಯಾಯವನ್ನು ನೋಡಿ |
ಆಗ ದಾನಿಯೇಲನು (ಬೇಲ್ತೆಶಚ್ಚರನು) ಸುಮಾರು ಒಂದು ಗಂಟೆಯವರೆಗೆ ಮೌನವಾಗಿದ್ದನು. ಅವನ ಬುದ್ಧಿಗೆ ತೋರಿದ ವಿಷಯಗಳು ಅವನನ್ನು ಗಾಬರಿಪಡಿಸಿದವು. ಆಗ ರಾಜನು, “ಬೇಲ್ತೆಶಚ್ಚರನೇ, ಕನಸು ಅಥವಾ ಕನಸಿನ ಅರ್ಥವು ನಿನ್ನನ್ನು ಭಯಗೊಳಿಸದಿರಲಿ” ಎಂದು ಧೈರ್ಯ ಹೇಳಿದನು. ಆಗ ಬೇಲ್ತೆಶಚ್ಚರನು ಅರಸನಿಗೆ, “ನನ್ನ ಒಡೆಯನೇ, ಈ ಕನಸು ನಿನ್ನ ವಿರೋಧಿಗಳಿಗೆ ಫಲಿಸಲಿ. ಇದರ ಅರ್ಥವು ನಿನ್ನ ವಿರೋಧಿಗಳ ಅನುಭವಕ್ಕೆ ಬರಲಿ ಎಂದು ನಾನು ಹಾರೈಸುತ್ತೇನೆ.
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.