Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 40:9 - ಪರಿಶುದ್ದ ಬೈಬಲ್‌

9 ಆಗ ಪಾನದಾಯಕನು ಯೋಸೇಫನಿಗೆ, “ನಾನು ಕನಸಿನಲ್ಲಿ ದ್ರಾಕ್ಷಾಲತೆಯನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನ ಮುಂದೆ ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ ಆ ಮುಖ್ಯ ಪಾನಸೇವಕ ಜೋಸೆಫನಿಗೆ, “ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆ ನನ್ನೆದುರಿಗೆ ಇರುವುದನ್ನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಗ ಪಾನದಾಯಕರಲ್ಲಿ ಮುಖ್ಯಸ್ಥನು ಯೋಸೇಫನಿಗೆ - ನನ್ನ ಕನಸಿನಲ್ಲಿ ಒಂದು ದ್ರಾಕ್ಷಾಲತೆಯನ್ನು ನನ್ನೆದುರಾಗಿ ಕಂಡೆನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಮುಖ್ಯ ಪಾನದಾಯಕನು ತನ್ನ ಕನಸನ್ನು ಯೋಸೇಫನಿಗೆ ತಿಳಿಸುತ್ತಾ, “ಕನಸಿನಲ್ಲಿ ನನ್ನ ಮುಂದೆ ದ್ರಾಕ್ಷಿಬಳ್ಳಿ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 40:9
9 ತಿಳಿವುಗಳ ಹೋಲಿಕೆ  

ಕೊನೆಗೆ ದಾನಿಯೇಲನು ಬಂದನು. (ನಾನು ದಾನಿಯೇಲನಿಗೆ ನನ್ನ ದೇವರ ಸ್ಮರಣಾರ್ಥವಾಗಿ ಬೇಲ್ತೆಶಚ್ಚರನೆಂಬ ಹೆಸರನ್ನು ಇಟ್ಟಿದ್ದೆ. ಪರಿಶುದ್ಧ ದೇವರುಗಳ ಆತ್ಮವು ಅವನಲ್ಲಿದೆ.) ನಾನು ದಾನಿಯೇಲನಿಗೆ ನನ್ನ ಕನಸಿನ ಬಗ್ಗೆ ಹೇಳಿದೆ.


“ಅರಸನೇ, ನಿನ್ನ ಕನಸಿನಲ್ಲಿ ನಿನ್ನ ಎದುರಿಗೆ ಒಂದು ದೊಡ್ಡ ಪ್ರತಿಮೆಯನ್ನು ಕಂಡೆ. ಅದು ಬಹಳ ದೊಡ್ಡದಾಗಿಯೂ ಪ್ರಕಾಶಮಾನವಾಗಿಯೂ ಪ್ರಭಾವಶಾಲಿಯಾಗಿಯೂ ಇತ್ತು. ನೋಡಿದವರು ಆಶ್ಚರ್ಯಚಕಿತರಾಗಿ ಕಣ್ಣರಳಿಸುವಂತಿತ್ತು.


ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತೊಬ್ಬನು ಪಾನದಾಯಕ.


ಫರೋಹನು ತನ್ನ ಭಕ್ಷ್ಯಗಾರನ ಮೇಲೆಯೂ ಪಾನದಾಯಕನ ಮೇಲೆಯೂ ಕೋಪಗೊಂಡನು.


ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.


ಆ ದ್ರಾಕ್ಷಾಲತೆಯ ಮೇಲೆ ಮೂರು ಕವಲುಗಳಿದ್ದವು. ಆ ಕವಲುಗಳು ಚಿಗುರುತ್ತಲೇ ಹೂವುಗಳನ್ನು ಬಿಟ್ಟವು; ಆ ಹೂವುಗಳು ಹಣ್ಣುಗಳಾದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು