15 ಫರೋಹನು ಯೋಸೇಫನಿಗೆ, “ನನಗೆ ಒಂದು ಕನಸಾಯಿತು. ಆದರೆ ಅದರ ಅರ್ಥವನ್ನು ತಿಳಿಸಬಲ್ಲವರು ಇಲ್ಲಿ ಯಾರೂ ಇಲ್ಲ. ನೀನು ಕನಸುಗಳ ಅರ್ಥವನ್ನು ಹೇಳಬಲ್ಲೆ ಎಂಬುದಾಗಿ ನಿನ್ನ ಬಗ್ಗೆ ಕೇಳಿದೆ” ಎಂದು ಹೇಳಿದನು.
15 ಆಗ ಫರೋಹನು ಯೋಸೇಫನಿಗೆ, “ನಾನು ಒಂದು ಕನಸನ್ನು ಕಂಡಿದ್ದೇನೆ. ಅದರ ಅರ್ಥವನ್ನು ಹೇಳ ಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳ ಬಲ್ಲವನೆಂಬ ವರ್ತಮಾನವನ್ನು ಕೇಳಿದ್ದೇನೆ” ಎಂದು ಹೇಳಿದನು.
15 ಆಗ ಫರೋಹನು ಯೋಸೇಫನಿಗೆ - ನಾನು ಒಂದು ಕನಸು ಕಂಡಿದ್ದೇನೆ; ಅದರ ಅರ್ಥವನ್ನು ಹೇಳಬಲ್ಲವರು ಯಾರೂ ಇಲ್ಲ. ಆದರೆ ನೀನು ಕನಸನ್ನು ಕೇಳುತ್ತಲೇ ಅದರ ಅರ್ಥವನ್ನು ಹೇಳಬಲ್ಲವನೆಂದು ವರ್ತಮಾನ ಕೇಳಿದ್ದೇನೆ ಎಂದು ಹೇಳಲು
15 ಆಗ ಫರೋಹನು ಯೋಸೇಫನಿಗೆ, “ನಾನು ಕನಸನ್ನು ಕಂಡಿದ್ದೇನೆ, ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ. ನೀನು ಕನಸನ್ನು ಗ್ರಹಿಸಿ, ಅರ್ಥವನ್ನು ಹೇಳುತ್ತೀ ಎಂದು ನಿನ್ನ ವಿಷಯವಾಗಿ ನಾನು ಕೇಳಿದ್ದೇನೆ,” ಎಂದನು.
ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.
ನಾನು ಹೇಳುತ್ತಿರುವ ಮನುಷ್ಯನ ಹೆಸರು ದಾನಿಯೇಲ. ರಾಜನು ಅವನಿಗೆ ಬೇಲ್ತೆಶಚ್ಚರನೆಂದು ಹೆಸರಿಟ್ಟಿದ್ದನು. ಬೇಲ್ತೆಶಚ್ಚರನು ಬಹಳ ಚಾಣಾಕ್ಷ ಮತ್ತು ಅನೇಕ ವಿಷಯಗಳನ್ನು ಬಲ್ಲವನು, ಅವನು ಕನಸುಗಳ ಅರ್ಥವನ್ನು ಹೇಳಬಲ್ಲನು, ರಹಸ್ಯಗಳನ್ನು ವಿವರಿಸಬಲ್ಲನು; ಕಠಿಣವಾದ ಎಲ್ಲ ಸಮಸ್ಯೆಗಳನ್ನು ಪರಿಹರಿಸಬಲ್ಲನು. ದಾನಿಯೇಲನನ್ನು ಕರೆಯಿಸು. ಅವನು ಗೋಡೆಯ ಮೇಲಿನ ಬರಹದ ಅರ್ಥವನ್ನು ನಿನಗೆ ಹೇಳುತ್ತಾನೆ” ಎಂದು ಹೇಳಿದಳು.
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
ಮರುದಿನ ಮುಂಜಾನೆ ಈ ಕನಸುಗಳ ಬಗ್ಗೆ ತುಂಬ ಚಿಂತೆಗೊಳಗಾಗಿ ಈಜಿಪ್ಟಿನಲ್ಲಿದ್ದ ಎಲ್ಲಾ ಮಂತ್ರಗಾರರನ್ನೂ ಎಲ್ಲಾ ವಿದ್ವಾಂಸರನ್ನೂ ಕರೆಯಿಸಿ ಕನಸುಗಳನ್ನು ತಿಳಿಸಿದನು. ಆದರೆ ಅವರಲ್ಲಿ ಯಾರಿಗೂ ಕನಸುಗಳ ಅರ್ಥವನ್ನು ತಿಳಿಸುವುದಕ್ಕಾಗಲಿ ವಿವರಿಸುವುದಕ್ಕಾಗಲಿ ಆಗಲಿಲ್ಲ.
ನಾನು, “ಬೇಲ್ತೆಶಚ್ಚರನೇ, ಎಲ್ಲಾ ಮಂತ್ರವಾದಿಗಳಿಗಿಂತಲೂ ನೀನು ಬಹಳ ಶ್ರೇಷ್ಠನು. ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿದೆ ಎಂದು ನನಗೆ ಗೊತ್ತಿದೆ. ನಿನಗೆ ತಿಳಿದುಕೊಳ್ಳಲು ಕಷ್ಟವಾದ ಯಾವ ರಹಸ್ಯವೂ ಇಲ್ಲವೆಂದು ನಾನು ಬಲ್ಲೆನು. ನಾನು ಕನಸಿನಲ್ಲಿ ಕಂಡದ್ದು ಇಂತಿದೆ. ಅದರ ಅರ್ಥವನ್ನು ನನಗೆ ಹೇಳು.
“ಅರಸನಾದ ನೆಬೂಕದ್ನೆಚ್ಚರನೆಂಬ ನಾನು ಈ ಕನಸನ್ನು ಕಂಡೆನು. ಈಗ ನೀನು, ಬೇಲ್ತೆಶಚ್ಚರನೇ (ದಾನಿಯೇಲನೇ), ಇದರ ಅರ್ಥವನ್ನು ನನಗೆ ತಿಳಿಸು. ನನ್ನ ರಾಜ್ಯದಲ್ಲಿರುವ ವಿದ್ವಾಂಸರಲ್ಲಿ ಯಾರೂ ಇದರ ಅರ್ಥವನ್ನು ನನಗೆ ಹೇಳಲಾರರು. ಆದರೆ ನೀನು ಈ ಕನಸಿನ ಅರ್ಥವನ್ನು ತಿಳಿಸಬಲ್ಲೆ. ಏಕೆಂದರೆ ಪರಿಶುದ್ಧ ದೇವರುಗಳ ಆತ್ಮವು ನಿನ್ನಲ್ಲಿ ನೆಲೆಸಿರುವದು ನನಗೆ ತಿಳಿದದೆ” ಎಂದೆನು.
ಜೆಕರ್ಯನು ಜೀವಿಸುತ್ತಿದ್ದಾಗ ಉಜ್ಜೀಯನು ದೇವರನ್ನು ಅನುಸರಿಸಿದನು. ಅವನು ಉಜ್ಜೀಯನಿಗೆ ದೇವರಿಗೆ ಹೇಗೆ ಭಯಪಡಬೇಕು, ದೇವರನ್ನು ಹೇಗೆ ಗೌರವಿಸಬೇಕೆಂದು ಕಲಿಸಿಕೊಟ್ಟನು. ಉಜ್ಜೀಯನು ದೇವರಿಗೆ ವಿಧೇಯನಾಗಿ ಬಾಳಿದಾಗ ಯೆಹೋವ ದೇವರು ಅವನಿಗೆ ಯಶಸ್ಸನ್ನು ದಯಪಾಲಿಸಿದನು.