ಆದಿಕಾಂಡ 41:16 - ಪರಿಶುದ್ದ ಬೈಬಲ್16 ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಜೋಸೆಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು, ಫರೋಹ ಆದ ನಿಮಗೆ ತೃಪ್ತಿಕರವಾದ ಉತ್ತರಕೊಡಬಲ್ಲರು,” ಎಂದು ಹೇಳಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಯೋಸೇಫನು - ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನು ಕೊಡಬಲ್ಲನೆಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೋಸೇಫನು ಫರೋಹನಿಗೆ ಉತ್ತರವಾಗಿ, “ಅದನ್ನು ನಾನು ಹೇಳಲಾರೆ, ಆದರೆ ದೇವರು ಫರೋಹನಿಗೆ ಮೆಚ್ಚಿಕೆಯಾದ ಉತ್ತರವನ್ನು ಕೊಡುವರು,” ಎಂದನು. ಅಧ್ಯಾಯವನ್ನು ನೋಡಿ |
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.