ಆದಿಕಾಂಡ 41:24 - ಪರಿಶುದ್ದ ಬೈಬಲ್24 ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾದ ಏಳು ತೆನೆಗಳನ್ನು ತಿಂದುಬಿಟ್ಟವು. “ನಾನು ಈ ಕನಸುಗಳನ್ನು ಮಂತ್ರಗಾರರಿಗೂ ವಿದ್ವಾಂಸರಿಗೂ ತಿಳಿಸಿದೆನು. ಆದರೆ ಅವರಲ್ಲಿ ಯಾರೂ ನನಗೆ ಈ ಕನಸುಗಳ ಅರ್ಥವನ್ನು ವಿವರಿಸಲಾಗಲಿಲ್ಲ. ಅವುಗಳ ಅರ್ಥವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಬತ್ತಿ ಹೋಗಿದ್ದ ತೆನೆಗಳು ಆ ಏಳು ಒಳ್ಳೆ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ವಿವರಿಸಿ ಹೇಳುವುದಕ್ಕೆ ಯಾರಿಂದಲೂ ಆಗಲಿಲ್ಲ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಬತ್ತಿಹೋಗಿದ್ದ ತೆನೆಗಳು ಕಾಳು ತುಂಬಿದ್ದ ಆ ಏಳು ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆ; ಅವುಗಳ ಅರ್ಥವನ್ನು ವಿವರಿಸಿ ಹೇಳಲು ಅವರಲ್ಲಿ ಯಾರಿಂದಲೂ ಆಗಲಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಬತ್ತಿಹೋಗಿದ್ದ ತೆನೆಗಳು ಆ ಏಳು ಒಳ್ಳೇ ತೆನೆಗಳನ್ನು ನುಂಗಿಬಿಟ್ಟವು. ಈ ಕನಸುಗಳನ್ನು ಜೋಯಿಸರಿಗೆ ತಿಳಿಸಿದೆನು. ಆದರೆ ಅವುಗಳ ಅರ್ಥವನ್ನು ಬಿಚ್ಚಿಹೇಳುವದಕ್ಕೆ ಅವರಲ್ಲಿ ಯಾರಿಂದಲೂ ಆಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆ ಒಣಗಿದ್ದ ಏಳು ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿದವು. ನಾನು ಇದನ್ನು ಮಂತ್ರವಾದಿಗಳಿಗೆ ತಿಳಿಸಿದಾಗ, ಅದರ ಅರ್ಥವನ್ನು ನನಗೆ ಯಾರೂ ಹೇಳಲಿಲ್ಲ,” ಎಂದನು. ಅಧ್ಯಾಯವನ್ನು ನೋಡಿ |
ಕೆಲವರು, “ಏನು ಮಾಡಬೇಕೆಂದು ಕಣಿಹೇಳುವವರನ್ನೂ ಬೇತಾಳಿಕರನ್ನೂ ವಿಚಾರಿಸು” ಎಂದು ಹೇಳುತ್ತಾರೆ. (ಕಣಿಹೇಳುವವರು ತಾವು ಮಂತ್ರಶಕ್ತಿಯುಳ್ಳವರೆಂದು ಜನರಿಗೆ ತೋರಿಸಲು ಪಕ್ಷಿಗಳು ಮಾಡುವ ಶಬ್ದವನ್ನು ಬಾಯಿಂದ ಮಾಡಿ ತಮಗೆ ರಹಸ್ಯಗಳು ಗೊತ್ತಿವೆ ಎಂದು ತೋರಿಸಿಕೊಳ್ಳುತ್ತಾರೆ.) ನಾನು ಹೇಳುವುದೇನೆಂದರೆ, “ಜನರು ಸಹಾಯಕ್ಕಾಗಿ ದೇವರನ್ನೇ ಕೇಳಿಕೊಳ್ಳಬೇಕು. ಆ ಕಣಿಹೇಳುವವರೂ ಬೇತಾಳಿಕರೂ ತಾವು ಏನು ಮಾಡಬೇಕೆಂದು ಸತ್ತವರನ್ನು ವಿಚಾರಿಸುವರು. ಜೀವಿಸುವವರು ಸತ್ತವರನ್ನು ಯಾಕೆ ವಿಚಾರಿಸಬೇಕು?”