“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.
ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಆ ಧ್ವನಿಯು ತುತೂರಿಯ ಧ್ವನಿಯಂತಿತ್ತು. ಆ ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು.
ನಮ್ಮ ಪ್ರಭುವಾದ ಯೇಸು ಕ್ರಿಸ್ತನ ದೇವರೂ ಮಹಿಮಾ ಸ್ವರೂಪನಾದ ತಂದೆಯೂ ಆಗಿರುವಾತನಿಗೆ ನಾನು ಯಾವಾಗಲೂ ಪ್ರಾರ್ಥಿಸುತ್ತೇನೆ. ದೇವರ ಜ್ಞಾನದಿಂದ ಅಂದರೆ ಆತನು ನಿಮಗೆ ತಿಳಿಯಪಡಿಸಿದ ಜ್ಞಾನದಿಂದ ನಿಮ್ಮನ್ನು ವಿವೇಕಿಗಳನ್ನಾಗಿ ಮಾಡುವಂಥ ಆತ್ಮವನ್ನು ಆತನು ನಿಮಗೆ ಅನುಗ್ರಹಿಸಲೆಂದು ನಾನು ಪ್ರಾರ್ಥಿಸುತ್ತೇನೆ.
“ನಿನ್ನ ದೇವರು ಸರ್ವಶ್ರೇಷ್ಠನು ಮತ್ತು ಪ್ರಬಲನು ಎನ್ನುವದು ನನಗೆ ಖಚಿತವಾಯಿತು. ಆತನು ಎಲ್ಲ ಅರಸರ ಒಡೆಯನಾಗಿದ್ದಾನೆ. ಆತನು ಜನರಿಗೆ ನಿಗೂಢವಾಗಿದ್ದ ರಹಸ್ಯವನ್ನು ತಿಳಿಸುತ್ತಾನೆ. ನೀನು ನನಗೆ ಈ ರಹಸ್ಯವನ್ನು ತಿಳಿಸಲು ಸಮರ್ಥನಾದುದರಿಂದ ಇದೆಲ್ಲ ನಿಜವೆಂದು ನಾನು ನಂಬುತ್ತೇನೆ” ಎಂದು ಹೇಳಿದನು.
ಎಲ್ಲಾ ಜನಾಂಗದವರೂ ಎಲ್ಲಾ ಜನರೂ ಒಟ್ಟುಗೂಡಬೇಕು. ಅವರ ಸುಳ್ಳುದೇವರಲ್ಲಿ ಒಬ್ಬನು ಆದಿಯಲ್ಲಿ ಸಂಭವಿಸಿದ್ದನ್ನು ಹೇಳುವದಾಗಿದ್ದರೆ ತನ್ನ ಸಾಕ್ಷಿಗಳನ್ನು ಕರೆದು ತರಲಿ. ಆ ಸಾಕ್ಷಿಗಳು ಸತ್ಯವನ್ನಾಡಲಿ. ಆಗ ಅವರು ಸತ್ಯವಂತರೋ ಇಲ್ಲವೋ ಎಂದು ಗೊತ್ತಾಗುವದು.”
ಆಗ ಯೆಹೋವನು ಯೆಹೋಶುವನಿಗೆ, “ಆ ಸೈನ್ಯಕ್ಕೆ ನೀನು ಹೆದರಬೇಡ; ನೀವು ಅವರನ್ನು ಸೋಲಿಸುವಂತೆ ನಾನು ಮಾಡುತ್ತೇನೆ. ನಾಳೆ ಇಷ್ಟು ಹೊತ್ತಿಗೆ ನೀವು ಅವರೆಲ್ಲರನ್ನು ಕೊಂದುಬಿಡುವಿರಿ. ನೀವು ಅವರ ಕುದುರೆಗಳ ಕಾಲುಗಳನ್ನು ಕತ್ತರಿಸುವಿರಿ; ಅವರ ರಥಗಳನ್ನು ಸುಟ್ಟುಹಾಕುವಿರಿ” ಎಂದನು.
ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೇ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.
ಇಲ್ಲವಾದರೆ, ನಾನು ನಿನ್ನ ವಿರುದ್ಧವಾಗಿಯೂ ನಿನ್ನ ಅಧಿಕಾರಿಗಳ ವಿರುದ್ಧವಾಗಿಯೂ ನಿನ್ನ ಜನರ ವಿರುದ್ಧವಾಗಿಯೂ ನನ್ನ ಪೂರ್ಣಶಕ್ತಿಯಿಂದ ಉಪದ್ರವಗಳನ್ನು ಕಳುಹಿಸುವೆನು. ಆಗ ನನ್ನಂಥ ದೇವರು ಲೋಕದಲ್ಲಿ ಇಲ್ಲವೇ ಇಲ್ಲವೆಂದು ನೀನು ತಿಳಿದುಕೊಳ್ಳುವೆ.
ಆ ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.