Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:30 - ಪರಿಶುದ್ದ ಬೈಬಲ್‌

30 ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಅವುಗಳ ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವವು. ಆಗ ಐಗುಪ್ತದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು. ಆ ಬರದಿಂದ ದೇಶವು ಹಾಳಾಗಿ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ತರುವಾಯ ಏಳು ದುರ್ಭಿಕ್ಷ ವರ್ಷಗಳೂ ಬರುವುವು. ಆಗ ಈಜಿಪ್ಟ್ ದೇಶದ ಅವರು ಮೊದಲಿದ್ದ ಆ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಏಳು ಸುಭಿಕ್ಷ ವರುಷಗಳೂ ಅವುಗಳ ತರುವಾಯ ಏಳು ದುರ್ಭಿಕ್ಷವರುಷಗಳೂ ಬರುವವು. ಆಗ ಐಗುಪ್ತದೇಶದವರು ಮೊದಲಿದ್ದ ಸುಭಿಕ್ಷವನ್ನು ಮರೆತುಬಿಡುವರು; ಆ ಬರದಿಂದ ದೇಶವು ಹಾಳಾಗಿ ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದರೆ ಅವುಗಳ ಹಿಂದೆ ಏಳು ವರ್ಷಗಳ ಬರಗಾಲ ಬರುತ್ತವೆ. ಆಗ ಈಜಿಪ್ಟಿನಲ್ಲಿದ್ದ ಸುಭಿಕ್ಷವು ಮರೆಯುವಂತಾಗುವುದು. ಇದಲ್ಲದೆ ಬರಗಾಲವು ದೇಶವನ್ನು ನಾಶಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:30
15 ತಿಳಿವುಗಳ ಹೋಲಿಕೆ  

ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಬರಗಾಲದಿಂದ ಬಡದೇಶಗಳಾದವು.


ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.


ಎಲೀಯನು ಸಹ ನಮ್ಮಂತೆಯೇ ಒಬ್ಬ ಮನುಷ್ಯನಾಗಿದ್ದನು. ಮಳೆ ಬಾರದಂತೆ ಅವನು ಪ್ರಾರ್ಥಿಸಿದಾಗ ಮೂರುವರೆ ವರ್ಷಗಳವರೆಗೆ ಆ ನಾಡಿನಲ್ಲಿ ಮಳೆಯೇ ಬೀಳಲಿಲ್ಲ!


ದೇವರು ಆ ದೇಶಕ್ಕೆ ಬರಗಾಲವನ್ನು ಬರಮಾಡಿದನು. ಜನರಿಗೆ ತಿನ್ನುವುದಕ್ಕೂ ಸಾಕಷ್ಟು ಆಹಾರವಿರಲಿಲ್ಲ.


“ನಾನು ಹೇಳುವುದು ಸತ್ಯ. ಎಲೀಯನ ಕಾಲದಲ್ಲಿ ಮೂರುವರೆ ವರ್ಷಗಳವರೆಗೆ ಇಸ್ರೇಲ್ ದೇಶದಲ್ಲಿ ಮಳೆ ಬೀಳಲಿಲ್ಲ. ದೇಶದ ಯಾವ ಕಡೆಯಲ್ಲಿಯೂ ಆಹಾರವಿರಲಿಲ್ಲ. ಆ ಸಮಯದಲ್ಲಿ ಇಸ್ರೇಲಿನಲ್ಲಿ ಅನೇಕ ವಿಧವೆಯರು ಇದ್ದರು.


“ಈಗ ಜನರು ಭೂಮಿಯಿಂದ ಆಶೀರ್ವಾದ ಕೇಳುತ್ತಾರೆ. ಆದರೆ ಮುಂದಿನ ದಿನಗಳಲ್ಲಿ ಅವರು ನಂಬಿಗಸ್ತನಾದ ದೇವರಿಂದ ಆಶೀರ್ವಾದ ಕೇಳುವರು. ಈಗ ಜನರು ವಾಗ್ದಾನ ಮಾಡುವಾಗ ಭೂಮಿಯ ಬಲದಲ್ಲಿ ಭರವಸವಿಡುವರು. ಆದರೆ ಮುಂದಿನ ದಿನಗಳಲ್ಲಿ ನಂಬಿಗಸ್ತನಾದ ದೇವರ ಮೇಲೆ ಭರವಸವಿಡುವರು. ಯಾಕೆಂದರೆ ಗತಿಸಿದ ಸಂಕಟಗಳೆಲ್ಲವೂ ಮರೆತುಹೋಗುತ್ತವೆ. ಇವುಗಳು ನನ್ನ ಕಣ್ಣುಗಳಿಗೆ ಮರೆಯಾಗಿರುತ್ತವೆ.”


ಆಗ ಅವರು ಕುಡಿದು, ತಮ್ಮ ಬಡತನವನ್ನು ಮರೆತುಬಿಡುವರು, ಅವರು ಕುಡಿದು ತಮ್ಮ ಕಷ್ಟಗಳನ್ನೆಲ್ಲಾ ಮರೆತುಬಿಡುವರು.


ಎಲೀಷನು ತಾನು ಮರಳಿ ಜೀವಿಸುವಂತೆ ಮಾಡಿದ ಬಾಲಕನ ತಾಯಿಯೊಂದಿಗೆ ಮಾತನಾಡಿದನು. ಎಲೀಷನು, “ನೀನು ಮತ್ತು ನಿನ್ನ ಕುಟುಂಬವು ಬೇರೆ ದೇಶಕ್ಕೆ ಹೋಗಬೇಕು. ಏಕೆಂದರೆ ಈ ದೇಶದಲ್ಲಿ ಬರಗಾಲವು ಏಳು ವರ್ಷಗಳವರೆಗೆ ಇರಬೇಕೆಂದು ಯೆಹೋವನು ತೀರ್ಮಾನಿಸಿದ್ದಾನೆ” ಎಂದು ಹೇಳಿದನು.


ಎಲೀಯನು ಗಿಲ್ಯಾದಿನ ತಿಷ್ಬೀ ಪಟ್ಟಣದ ಒಬ್ಬ ಪ್ರವಾದಿ. ಎಲೀಯನು ರಾಜನಾದ ಅಹಾಬನಿಗೆ, “ನಾನು ಇಸ್ರೇಲರ ದೇವರಾದ ಯೆಹೋವನ ಸೇವಕನಾಗಿದ್ದೇನೆ. ಮುಂದಿನ ಕೆಲವು ವರ್ಷಗಳವರೆಗೆ ಹಿಮವಾಗಲಿ ಮಳೆಯಾಗಲಿ ಬೀಳುವುದಿಲ್ಲವೆಂದು ನಾನು ಆತನ ಹೆಸರಿನ ಮೇಲೆ ಪ್ರಮಾಣ ಮಾಡುತ್ತೇನೆ. ನಾನು ಬೀಳುವಂತೆ ಮಳೆಗೆ ಆಜ್ಞಾಪಿಸಿದರೆ ಮಾತ್ರ ಅದು ಬೀಳುತ್ತದೆ” ಎಂದು ಹೇಳಿದನು.


ಗಾದನು ದಾವೀದನ ಬಳಿಗೆ ಹೋಗಿ, “ಈ ಮೂರು ಶಿಕ್ಷೆಗಳಲ್ಲಿ ಒಂದನ್ನು ಆರಿಸಿಕೊ: ನಿನಗೆ ಮತ್ತು ನಿನ್ನ ದೇಶಕ್ಕೆ ಏಳು ವರ್ಷಗಳ ಕಾಲ ಬರಗಾಲ ಬರಬೇಕೇ? ಅಥವಾ ನಿನ್ನ ಶತ್ರುಗಳು ನಿನ್ನನ್ನು ಮೂರು ತಿಂಗಳ ಕಾಲ ಅಟ್ಟಿಸಬೇಕೇ? ಅಥವಾ ಮೂರು ದಿನಗಳ ಕಾಲ ನಿನ್ನ ದೇಶದಲ್ಲಿ ರೋಗರುಜಿನಗಳು ವ್ಯಾಪಿಸಬೇಕೇ? ಇವುಗಳ ಬಗ್ಗೆ ಯೋಚಿಸು, ನನ್ನನ್ನು ಕಳುಹಿಸಿದ ಯೆಹೋವನಿಗೆ ನಾನು ಏನು ಹೇಳಬೇಕೆಂಬುದನ್ನು ನೀನು ತೀರ್ಮಾನಿಸು” ಎಂದು ಹೇಳಿದನು.


ಎಲ್ಲೆಲ್ಲಿಯೂ ಬರಗಾಲವಾದಾಗ, ಯೋಸೇಫನು ಉಗ್ರಾಣಗಳನ್ನು ತೆಗೆಸಿ ದವಸಧಾನ್ಯಗಳನ್ನು ಜನರಿಗೆ ಮಾರಾಟ ಮಾಡಿಸಿದನು. ಈಜಿಪ್ಟಿನಲ್ಲಿ ಬರವು ಭೀಕರವಾಗಿತ್ತು.


ಮೊದಲನೆಯ ಮಗನು ಹುಟ್ಟಿದಾಗ, “ನನ್ನ ಎಲ್ಲಾ ಕಷ್ಟಗಳನ್ನೂ ನನ್ನ ತಂದೆಯ ಮನೆಯವರನ್ನೂ ಮರೆತುಬಿಡುವಂತೆ ದೇವರು ನನಗೆ ಸಹಾಯ ಮಾಡಿದನು” ಎಂದು ಹೇಳಿ ಯೋಸೇಫನು ಆ ಮಗುವಿಗೆ, “ಮನಸ್ಸೆ” ಎಂದು ಹೆಸರಿಟ್ಟನು.


ಬಡಕಲಾದ ಮತ್ತು ಕುರೂಪವಾದ ಏಳು ಹಸುಗಳು ಮತ್ತು ಕೆಟ್ಟುಹೋದ ಕಾಳಿನ ಏಳು ತೆನೆಗಳು, ದೇಶಕ್ಕೆ ಬರುವ ಏಳು ವರ್ಷಗಳ ಬರಗಾಲವನ್ನು ಸೂಚಿಸುತ್ತವೆ. ಈ ಏಳು ವರ್ಷಗಳು ಒಳ್ಳೆಯ ವರ್ಷಗಳ ನಂತರ ಬರುತ್ತವೆ.


ಅವು ಏಳು ಹಸುಗಳನ್ನು ತಿಂದ ಮೇಲೆಯೂ ತಿಂದಂತೆ ಕಾಣುತ್ತಿರಲಿಲ್ಲ; ಅವು ಮೊದಲಿನಂತೆಯೇ ಬಡಕಲಾಗಿದ್ದವು ಮತ್ತು ಕುರೂಪವಾಗಿದ್ದವು. ಆಗ ನನಗೆ ಎಚ್ಚರವಾಯಿತು.


ಮೊದಲಿನ ಸಮೃದ್ಧಿಯ ಗುರುತೇ ಜನರಿಗೆ ಕಾಣಸಿಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು