Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:31 - ಪರಿಶುದ್ದ ಬೈಬಲ್‌

31 ಮೊದಲಿನ ಸಮೃದ್ಧಿಯ ಗುರುತೇ ಜನರಿಗೆ ಕಾಣಸಿಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವುದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಮುಂದೆ ಬರಲಿರುವ ಕ್ಷಾಮವು ಅತ್ಯಂತ ಘೋರಾವಾಗಿರುವುದು; ಮೊದಲಿದ್ದ ಸಮೃದ್ಧಿಯ ಗುರುತೇ ಇಲ್ಲದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ಮುಂದೆ ಬರುವ ಕ್ಷಾಮವು ಅತ್ಯಂತ ಘೋರವಾಗಿರುವದರಿಂದ ಮೊದಲಿದ್ದ ಸಮೃದ್ಧಿಯ ಗುರುತೇ ಕಾಣಿಸದೆ ಹೋಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ತರುವಾಯ ಬರಗಾಲವು ಬಹಳ ಕಠಿಣವಾಗಿರುವುದರಿಂದ, ಸುಭಿಕ್ಷ ಕಾಲದ ನೆನಪು ದೇಶದಲ್ಲಿ ಇರದೆ ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:31
4 ತಿಳಿವುಗಳ ಹೋಲಿಕೆ  

ಲೋಕದ ಪಾಪವು ತುಂಬಾ ಭಾರವಾಗಿದೆ. ಆ ಭಾರದಿಂದಾಗಿ ಭೂಮಿಯು ಬೀಳುವದು. ಒಂದು ಹಳೆಯ ಮನೆಯಂತೆ ಭೂಮಿಯು ಅಲುಗಾಡುವದು. ಕುಡಿದು ಮತ್ತನಾಗಿ ನೆಲಕ್ಕೆ ಬೀಳುವವನಂತೆ ಭೂಮಿಯು ಇರುವದು. ಭೂಮಿಗೆ ಮುಂದುವರಿಯಲು ಆಗದು.


ಅಷ್ಡೋದಿನ ಮತ್ತು ಅವರ ನೆರೆಹೊರೆಯ ಜನರ ಜೀವನವನ್ನು ಯೆಹೋವನು ಕಠಿಣಗೊಳಿಸಿದನು. ಯೆಹೋವನು ಅವರಿಗೆ ಹೆಚ್ಚು ತೊಂದರೆ ಕೊಟ್ಟನು. ಆತನು ಅವರಿಗೆ ಗಡ್ಡೆರೋಗವನ್ನು ಬರಮಾಡಿದನು. ಅಲ್ಲದೆ ಯೆಹೋವನು ಅವರ ಬಳಿಗೆ ಇಲಿಗಳನ್ನು ಕಳುಹಿಸಿದನು. ಆ ಇಲಿಗಳು ಅವರ ಹಡಗುಗಳಲ್ಲೆಲ್ಲಾ ಮತ್ತು ಭೂಮಿಯಲ್ಲೆಲ್ಲಾ ಹರಡಿಕೊಂಡವು. ನಗರದ ಜನರು ಬಹು ಭಯಗೊಂಡರು.


ಆದರೆ ಆ ಏಳು ವರ್ಷಗಳಾದ ಮೇಲೆ ದೇಶದಲ್ಲೆಲ್ಲಾ ಏಳು ವರ್ಷಗಳವರೆಗೆ ಬರಗಾಲವಿರುವುದು. ಆಗ ಈಜಿಪ್ಟಿನ ಜನರು ತಾವು ಮೊದಲು ಬೆಳೆದ ಆಹಾರವನ್ನೆಲ್ಲಾ ಮರೆತುಬಿಡುವರು. ಈ ಕ್ಷಾಮವು ದೇಶವನ್ನು ನಾಶಮಾಡುವುದು.


“ಫರೋಹನೇ, ಒಂದೇ ವಿಷಯದ ಮೇಲೆ ಎರಡು ಕನಸುಗಳಾಗಿರುವುದರಿಂದ ದೇವರು ಇದನ್ನು ನಿಶ್ಚಯವಾಗಿಯೂ ಬೇಗನೆ ಬರಮಾಡಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು