Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 41:32 - ಪರಿಶುದ್ದ ಬೈಬಲ್‌

32 “ಫರೋಹನೇ, ಒಂದೇ ವಿಷಯದ ಮೇಲೆ ಎರಡು ಕನಸುಗಳಾಗಿರುವುದರಿಂದ ದೇವರು ಇದನ್ನು ನಿಶ್ಚಯವಾಗಿಯೂ ಬೇಗನೆ ಬರಮಾಡಲಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಫರೋಹನಿಗೆ ಕನಸು ಎರಡು ರೀತಿಯಾಗಿ ಬಿದ್ದಿದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನು ಎಂಬುದಾಗಿ ತಿಳಿದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ದೇವರು ಈ ಕಾರ್ಯವನ್ನು ನಿರ್ಧರಿಸಿದ್ದಾರೆ; ಇದು ಬೇಗ ಬರಲಿದೆಯೆಂದು ತಿಳಿದುಕೊಳ್ಳಬೇಕು. ಏಕೆಂದರೆ ನಿಮಗೆ ಇಮ್ಮಡಿ ಕನಸುಬಿದ್ದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಫರೋಹನಿಗೆ ಕನಸು ಎರಡು ವಿಧವಾಗಿ ಬಿದ್ದದ್ದರಿಂದ ದೇವರು ಈ ಕಾರ್ಯವನ್ನು ನಿಶ್ಚಯಿಸಿ ಇದನ್ನು ಬೇಗ ಮಾಡುವನೆಂಬದಾಗಿ ತಿಳುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಇದಲ್ಲದೆ ಆ ಕನಸು ಫರೋಹನಿಗೆ ಎರಡು ಸಾರಿ ಬಿದ್ದುದರಿಂದ, ಆ ಕಾರ್ಯವು ದೇವರಿಂದ ಸ್ಥಿರಪಡಿಸಲಾಗಿದೆ. ಆದ್ದರಿಂದ ದೇವರು ಅದನ್ನು ಬೇಗನೆ ನೆರವೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 41:32
18 ತಿಳಿವುಗಳ ಹೋಲಿಕೆ  

ದೇವರು ಮನುಷ್ಯನಲ್ಲ; ಆತನು ಸುಳ್ಳಾಡುವುದಿಲ್ಲ. ದೇವರು ಮಾನವನಲ್ಲ; ಆತನ ಉದ್ದೇಶಗಳು ಬದಲಾಗುವುದಿಲ್ಲ. ಯೆಹೋವನು ತಾನು ಮಾಡುತ್ತೇನೆಂದು ಹೇಳಿದರೆ, ಅದನ್ನು ಮಾಡಿಯೇ ಮಾಡುತ್ತಾನೆ. ಯೆಹೋವನು ವಾಗ್ದಾನ ಮಾಡಿದರೆ, ಅದನ್ನು ನೆರವೇರಿಸುತ್ತಾನೆ.


ನಾನು ಮತ್ತೆ ನಿಮ್ಮ ಬಳಿಗೆ ಮೂರನೆ ಸಾರಿ ಬರುತ್ತೇನೆ. ನೆನಪಿಟ್ಟುಕೊಳ್ಳಿರಿ, “ಪ್ರತಿಯೊಂದು ದೂರಿಗೂ ಇಬ್ಬರಾಗಲಿ ಮೂವರಾಗಲಿ ಸಾಕ್ಷಿಗಳಿದ್ದು ತಮಗೆ ಗೊತ್ತಿರುವುದಾಗಿ ಮತ್ತು ಅದು ಸತ್ಯವೆಂದು” ಹೇಳಬೇಕು.


ಭೂಮಿಯೂ ಆಕಾಶವೂ ನಾಶವಾಗುತ್ತವೆ, ಆದರೆ ನಾನು ಹೇಳಿದ ಮಾತುಗಳು ನಾಶವಾಗುವುದೇ ಇಲ್ಲ!


ಈ ನಾಲ್ಕು ಮಂದಿ ದೇವದೂತರನ್ನು ಇದೇ ವರ್ಷ, ಇದೇ ತಿಂಗಳು, ಇದೇ ದಿನ, ಇದೇ ತಾಸಿಗಾಗಿ ಸಿದ್ಧಪಡಿಸಲಾಗಿತ್ತು. ಭೂಮಿಯ ಮೇಲಿರುವ ಜನರಲ್ಲಿ ಮೂರನೆಯ ಒಂದು ಭಾಗವನ್ನು ಸಂಹರಿಸಲು ಇವರನ್ನು ಬಿಡುಗಡೆ ಮಾಡಲಾಯಿತು.


ಪವಿತ್ರಗ್ರಂಥದಲ್ಲಿ ಬರೆದಿರುವಂತೆಯೇ ಇದಾಯಿತು: “ದೇವರು ತನ್ನನ್ನು ಪ್ರೀತಿಸುವ ಜನರಿಗೆ ಸಿದ್ಧಪಡಿಸಿರುವುದನ್ನು ಯಾವ ಕಣ್ಣೂ ಕಾಣಲಿಲ್ಲ. ಯಾವ ಕಿವಿಯೂ ಕೇಳಲಿಲ್ಲ. ಯಾವ ವ್ಯಕ್ತಿಯೂ ಊಹಿಸಿಕೊಳ್ಳಲಿಲ್ಲ.”


ಆದರೆ ನನ್ನ ಎಡಗಡೆ ಅಥವಾ ಬಲಗಡೆ ಕುಳಿತುಕೊಳ್ಳುವ ವ್ಯಕ್ತಿಯನ್ನು ಆರಿಸುವವನು ನಾನಲ್ಲ. ಆ ಸ್ಥಳಗಳನ್ನು ಯಾರಿಗಾಗಿ ಸಿದ್ಧಪಡಿಸಲಾಗಿದೆಯೋ ಅವರಿಗಾಗಿಯೇ ಅವುಗಳನ್ನು ಕಾದಿರಿಸಲಾಗಿದೆ” ಎಂದನು.


“ಆಮೇಲೆ ರಾಜನು ತನ್ನ ಎಡಗಡೆಯಿದ್ದ ಜನರಿಗೆ, ‘ನನ್ನಿಂದ ತೊಲಗಿಹೋಗಿರಿ, ನಿಮಗೆ ಶಿಕ್ಷೆಯಾಗಬೇಕೆಂದು ದೇವರು ತೀರ್ಮಾನಿಸಿದ್ದಾನೆ. ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ಬಹುಕಾಲದವರೆಗೆ ಅಗ್ನಿಕುಂಡ ಸಿದ್ಧವಾಗಿತ್ತು. ಅದು ರಾಜನಿಗಾಗಿ ಸಿದ್ಧವಾಗಿದೆ. ಅದು ಆಳವಾಗಿಯೂ ಅಗಲವಾಗಿಯೂ ಮಾಡಲ್ಪಟ್ಟಿದೆ. ಅಲ್ಲಿ ಒಂದು ದೊಡ್ಡ ಕಟ್ಟಿಗೆಯ ರಾಶಿಯೂ ಬೆಂಕಿಯೂ ಇದೆ ಮತ್ತು ಯೆಹೋವನ ಬಾಯುಸಿರು ಗಂಧಕದ ಪ್ರವಾಹದಂತೆ ಬಂದು ಎಲ್ಲವನ್ನು ನಾಶಮಾಡುವದು.


ಆಮೇಲೆ ಯೋಸೇಫನಿಗೆ ಮತ್ತೊಂದು ಕನಸಾಯಿತು. ಯೋಸೇಫನು ಈ ಕನಸಿನ ಬಗ್ಗೆಯೂ ತನ್ನ ಅಣ್ಣಂದಿರಿಗೆ ತಿಳಿಸಿದನು. ಯೋಸೇಫನು ಅವರಿಗೆ, “ನನಗೆ ಮತ್ತೊಂದು ಕನಸಾಯಿತು. ಸೂರ್ಯ, ಚಂದ್ರ ಮತ್ತು ಹನ್ನೊಂದು ನಕ್ಷತ್ರಗಳು ನನಗೆ ಅಡ್ಡಬೀಳುವುದನ್ನು ಕಂಡೆನು” ಎಂದು ಹೇಳಿದನು.


ನಾವೆಲ್ಲರು ಹೊಲದಲ್ಲಿ ಗೋಧಿಯ ಸಿವುಡುಗಳನ್ನು ಕಟ್ಟುತ್ತಿದ್ದೆವು. ಆಗ ನನ್ನ ಸಿವುಡು ಎದ್ದುನಿಂತಿತು; ನನ್ನ ಸಿವುಡಿನ ಸುತ್ತಲೂ ನಿಮ್ಮ ಸಿವುಡುಗಳೆಲ್ಲಾ ಎದ್ದುನಿಂತುಕೊಂಡು ನನ್ನ ಸಿವುಡಿಗೆ ಅಡ್ಡಬಿದ್ದವು” ಎಂದು ಹೇಳಿದನು.


ಆಗ ಯೋಸೇಫನು ಫರೋಹನಿಗೆ, “ಆ ಎರಡು ಕನಸುಗಳ ಅರ್ಥವು ಒಂದೇ. ಮುಂದೆ ನಡೆಯಲಿರುವುದನ್ನು ದೇವರು ತಮಗೆ ತಿಳಿಸಿದ್ದಾನೆ.


ಮುಂದೆ ನಡೆಯಲಿರುವುದನ್ನು ದೇವರು ನಿಮಗೆ ತಿಳಿಸಿದ್ದಾನೆ. ನಾನು ಹೇಳಿದಂತೆಯೇ ಸಂಭವಿಸುವುದು.


ಮೊದಲಿನ ಸಮೃದ್ಧಿಯ ಗುರುತೇ ಜನರಿಗೆ ಕಾಣಸಿಗದು.


“ಅರಸನಾದ ನೆಬೂಕದ್ನೆಚ್ಚರನೇ, ಬೆಟ್ಟದಿಂದ ಒಂದು ದೊಡ್ಡ ಬಂಡೆ ಒಡೆದು ಬಂದದ್ದನ್ನು ನೀನು ನೋಡಿದೆ. ಯಾರೂ ಅದನ್ನು ಒಡೆಯಲಿಲ್ಲ! ಆ ಬಂಡೆಯು ಕಬ್ಬಿಣವನ್ನು, ಕಂಚನ್ನು, ಜೇಡಿಮಣ್ಣನ್ನು, ಬೆಳ್ಳಿಯನ್ನು, ಚಿನ್ನವನ್ನು ಚೂರುಚೂರು ಮಾಡಿತು. ಭವಿಷ್ಯದಲ್ಲಿ ಏನಾಗುವದೆಂಬುದನ್ನು ದೇವರು ನಿನಗೆ ಈ ರೀತಿಯಲ್ಲಿ ತೋರಿಸಿದ್ದಾನೆ. ನಿನ್ನ ಕನಸು ನಿಜ. ಅದರ ಅರ್ಥವು ನಂಬಿಕೆಗೆ ಯೋಗ್ಯವಾಗಿದೆ” ಎಂದು ವಿವರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು