ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.