ಆದಿಕಾಂಡ 41:38 - ಪರಿಶುದ್ದ ಬೈಬಲ್38 ಫರೋಹನು ತನ್ನ ಸೇವಕರಿಗೆ, “ಈ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಯೋಸೇಫನಿಗಿಂತಲೂ ಉತ್ತಮನಾದ ವ್ಯಕ್ತಿಯನ್ನು ಕಂಡುಕೊಳ್ಳಲು ಸಾಧ್ಯವೇ? ದೇವರಾತ್ಮನೇ ಇವನ ಸಂಗಡವಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಫರೋಹನು ತನ್ನ ಸೇವಕರಿಗೆ, “ಇವನಲ್ಲಿ ದೇವರ ಆತ್ಮ ಉಂಟಲ್ಲಾ. ಇಂಥ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೋ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಫರೋಹನು ತನ್ನ ಪರಿವಾರದವರಿಗೆ, “ಈತ ದೇವರಾತ್ಮ ಪಡೆದವನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)38 ಫರೋಹನು ತನ್ನ ಪರಿವಾರದವರಿಗೆ - ಈತನಲ್ಲಿ ದೇವರ ಆತ್ಮ ಉಂಟಲ್ಲಾ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 ಫರೋಹನು ತನ್ನ ಸೇವಕರಿಗೆ, “ಯೋಸೇಫನಂಥ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ?” ಎಂದನು. ಅಧ್ಯಾಯವನ್ನು ನೋಡಿ |
ಪರಿಶುದ್ಧ ದೇವರುಗಳ ಆತ್ಮವು ನೆಲೆಸಿರುವ ಒಬ್ಬನು ನಿನ್ನ ರಾಜ್ಯದಲ್ಲಿ ಇದ್ದಾನೆ. ದೇವರ ಜ್ಞಾನಕ್ಕೆ ಸಮಾನವಾದ ಜ್ಞಾನವೂ ಬುದ್ಧಿಯೂ ರಹಸ್ಯವನ್ನು ತಿಳಿದುಕೊಳ್ಳುವ ಶಕ್ತಿಯೂ ತನಗಿರುವುದಾಗಿ ಅವನು ನಿನ್ನ ತಂದೆಯ ಕಾಲದಲ್ಲಿಯೇ ತೋರಿಸಿಕೊಟ್ಟಿದ್ದಾನೆ. ನಿನ್ನ ತಂದೆಯಾದ ನೆಬೂಕದ್ನೆಚ್ಚರನು ಈ ಮನುಷ್ಯನನ್ನು ಎಲ್ಲ ವಿದ್ವಾಂಸರ ಅಧ್ಯಕ್ಷನನ್ನಾಗಿ ನೇಮಿಸಿದ್ದನು. ಎಲ್ಲ ಜೋಯಿಸರಿಗೆ, ಮಂತ್ರವಾದಿಗಳಿಗೆ, ಶಾಕುನಿಕರಿಗೆ ಮತ್ತು ಪಂಡಿತರಿಗೆ ಇವನು ಮುಖ್ಯಸ್ಥನಾಗಿದ್ದನು.
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.
ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.