ಆದಿಕಾಂಡ 41:39 - ಪರಿಶುದ್ದ ಬೈಬಲ್39 ಫರೋಹನು ಯೋಸೇಫನಿಗೆ, “ದೇವರು ನಿನಗೆ ಈ ಎಲ್ಲಾ ವಿಷಯಗಳನ್ನು ತೋರಿಸಿರುವುದರಿಂದ ನಿನಗಿಂತ ಬುದ್ಧಿವಂತನೂ ವಿವೇಕಿಯೂ ಇಲ್ಲವೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಫರೋಹನು ಯೋಸೇಫನಿಗೆ, “ದೇವರು ಇದನ್ನೆಲ್ಲಾ ನಿನಗೆ ತಿಳಿಸಿರುವುದರಿಂದ ನಿನಗೆ ಸಮಾನನಾದ ಬುದ್ಧಿ, ವಿವೇಕವುಳ್ಳ ಪುರುಷನು ಯಾರೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಈತನಿಗಿಂತ ಯೋಗ್ಯವಾದ ವ್ಯಕ್ತಿ ನಮಗೆ ಸಿಕ್ಕುವುದು ಸಾಧ್ಯವೆ?” ಎಂದು ಹೇಳಿ ಜೋಸೆಫನಿಗೆ, “ದೇವರೇ ನಿನಗೆ ಇದನ್ನೆಲ್ಲ ತಿಳಿಸಿರುವುದರಿಂದ ನಿನಗೆ ಸಮಾನವಾದ ಬುದ್ಧಿವಿವೇಕಗಳುಳ್ಳ ವ್ಯಕ್ತಿ ಯಾವನೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಈತನಿಗಿಂತ ಯೋಗ್ಯನಾದ ಪುರುಷನು ನಮಗೆ ಸಿಕ್ಕಾನೇ ಎಂದು ಹೇಳಿ ಯೋಸೇಫನಿಗೆ - ದೇವರು ಇದನ್ನೆಲ್ಲಾ ನಿನಗೇ ತಿಳಿಸಿರುವದರಿಂದ ನಿನಗೆ ಸಮಾನನಾದ ಬುದ್ಧಿ ವಿವೇಕಗಳುಳ್ಳ ಪುರುಷನು ಯಾವನೂ ಇಲ್ಲ; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಫರೋಹನು ಯೋಸೇಫನಿಗೆ, “ದೇವರು ನಿನಗೆ ಇವುಗಳನ್ನೆಲ್ಲಾ ತೋರಿಸಿದ ಮೇಲೆ, ನಿನ್ನ ಹಾಗೆ ವಿವೇಕಿಯೂ ಬುದ್ಧಿವಂತನೂ ಯಾರೂ ಇಲ್ಲ. ಅಧ್ಯಾಯವನ್ನು ನೋಡಿ |
ಎಜ್ರನೇ, ನಿನ್ನ ದೇವರು ನಿನಗೆ ಕೊಟ್ಟಿರುವ ಜ್ಞಾನಶಕ್ತಿಯನ್ನು ಉಪಯೋಗಿಸಿ ನ್ಯಾಯಾಧೀಶರನ್ನೂ ನ್ಯಾಯಶಾಸ್ತ್ರಿಗಳನ್ನೂ ಆರಿಸಿ ನೇಮಿಸಲು ನಿನಗೆ ಅಧಿಕಾರ ಕೊಟ್ಟಿದ್ದೇನೆ. ಯೂಫ್ರೇಟೀಸ್ ನದಿಯ ಪಶ್ಚಿಮ ಪ್ರಾಂತ್ಯಗಳಲ್ಲಿ ವಾಸಮಾಡುವ ಜನರಿಗೆಲ್ಲಾ ಅವರು ನ್ಯಾಯತೀರಿಸುವರು. ನಿನ್ನ ದೇವರ ಕಟ್ಟಳೆಗಳನ್ನು ಅರಿತವರಿಗೆಲ್ಲಾ ಅವರು ನ್ಯಾಯತೀರಿಸುವರು. ಯಾರಿಗಾದರೂ ದೇವರ ಕಟ್ಟಳೆ ಗೊತ್ತಿಲ್ಲದಿದ್ದಲ್ಲಿ ಆ ನ್ಯಾಯಶಾಸ್ತ್ರಿಗಳು ಅವರಿಗೆ ಕಲಿಸಬೇಕು.