ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.