40 ಆದ್ದರಿಂದ ನಾನು ನಿನ್ನನ್ನು ದೇಶದ ರಾಜ್ಯಪಾಲನನ್ನಾಗಿ ನೇಮಿಸುವೆನು; ಜನರು ನಿನ್ನ ಆಜ್ಞೆಗಳಿಗೆಲ್ಲಾ ವಿಧೇಯರಾಗುವರು. ಈ ದೇಶದಲ್ಲಿ ನಿನಗೆ ಅಧಿಪತಿಯಾಗಿರುವವನು ನಾನೊಬ್ಬನೇ” ಎಂದು ಹೇಳಿದನು.
40 ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು. ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು. ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು” ಎಂದು ಹೇಳಿದನು.
40 ನೀನೇ ಅರಮನೆಯಲ್ಲಿ ಮುಖ್ಯಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರು ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದು ಹೇಳಿದನು.
40 ನೀನೇ ಅರಮನೆಯಲ್ಲಿ ಸರ್ವಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರೂ ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು ಎಂದು ಹೇಳಿದನು.
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
ದಾನಿಯೇಲನಿಗೆ ಬೇಲ್ಶಚ್ಚರನ ಆಜ್ಞೆಯಂತೆ ಕಂದು ಬಣ್ಣದ ವಸ್ತ್ರಗಳನ್ನು ಕೊಡಲಾಯಿತು. ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಲಾಯಿತು; ಅವನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು.
ದಾನಿಯೇಲನು ಬೇರೆ ಮುಖ್ಯಾಧಿಕಾರಿಗಳಿಗಿಂತ ಸಮರ್ಥನೆಂದು ತೋರಿಸಿಕೊಟ್ಟನು. ದಾನಿಯೇಲನು ತನ್ನ ಒಳ್ಳೆಯ ಗುಣ ಮತ್ತು ಮಹಾ ಸಾಮರ್ಥ್ಯಗಳ ಮೂಲಕ ಈ ಒಳ್ಳೆಯ ಹೆಸರನ್ನು ಪಡೆದನು. ದಾನಿಯೇಲನಿಂದ ಅರಸನು ತುಂಬ ಪ್ರಭಾವಿತನಾಗಿ ಅವನನ್ನು ಇಡೀ ರಾಜ್ಯದ ಅಧಿಕಾರಿಯನ್ನಾಗಿ ನೇಮಿಸಲು ಯೋಜನೆ ಮಾಡಿದನು.
ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.
ಸಮುವೇಲನು ವಿಶೇಷವಾದ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ಸೌಲನ ತಲೆಯ ಮೇಲೆ ಆ ಎಣ್ಣೆಯನ್ನು ಸುರಿದನು. ಸಮುವೇಲನು ಸೌಲನಿಗೆ ಮುದ್ದಿಟ್ಟು, “ಯೆಹೋವನು ತನ್ನ ಜನರನ್ನು ಮುಂದೆ ನಡೆಸಲು ನಿನ್ನನ್ನು ಅವರಿಗೆ ನಾಯಕನನ್ನಾಗಿ ಅಭಿಷೇಕಿಸಿದ್ದಾನೆ. ನೀನು ಯೆಹೋವನ ಜನರನ್ನು ಆಳುವೆ; ಅವರನ್ನು ಸುತ್ತುವರೆದಿರುವ ಶತ್ರುಗಳಿಂದ ರಕ್ಷಿಸುವೆ. ಯೆಹೋವನು ತನ್ನ ಜನರನ್ನು ಆಳುವುದಕ್ಕಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ. ಇದು ನಿಜವೆಂಬುದಕ್ಕೆ ಸಾಕ್ಷಿಯೇನೆಂದರೆ:
ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.
ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.
ಇದಾದ ಬಳಿಕ ರಾಜನಾದ ಅಹಷ್ವೇರೋಷನು ಹಾಮಾನನನ್ನು ಗೌರವಿಸಿದನು. ಹಾಮಾನನು ಹಮ್ಮೆದಾತನೆಂಬವನ ಮಗನು. ಇವನು ಅಗಾಗನ ವಂಶಕ್ಕೆ ಸೇರಿದವನಾಗಿದ್ದನು. ಅರಸನು ಹಾಮಾನನನ್ನು ಉನ್ನತಸ್ಥಾನಕ್ಕೆ ನೇಮಿಸಿ ಬೇರೆ ಅಧಿಕಾರಿಗಳಿಗಿಂತ ವಿಶೇಷವಾದ ಗೌರವವನ್ನು ಕೊಡಿಸಿದನು.
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.