ಆದಿಕಾಂಡ 41:41 - ಪರಿಶುದ್ದ ಬೈಬಲ್41 ಫರೋಹನು ಯೋಸೇಫನಿಗೆ, “ನಾನು ನಿನ್ನನ್ನು ಈಜಿಪ್ಟ್ ದೇಶಕ್ಕೆಲ್ಲ ರಾಜ್ಯಪಾಲನನ್ನಾಗಿ ನೇಮಿಸುವೆನು” ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಫರೋಹನು ಯೋಸೇಫನಿಗೆ, “ನೋಡು ಐಗುಪ್ತ ದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸಿದ್ದೇನೆ” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಬಳಿಕ ಫರೋಹನು ಜೋಸೆಫನಿಗೆ, “ಇದೀಗಲೆ ಈಜಿಪ್ಟ್ ದೇಶದ ಮೇಲೆಲ್ಲ ನಿನ್ನನ್ನು ಅಧಿಕಾರಿಯನ್ನಾಗಿ ನೇಮಿಸುತ್ತಿದ್ದೇನೆ,” ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಫರೋಹನು ಯೋಸೇಫನಿಗೆ - ನೋಡು ಐಗುಪ್ತದೇಶದ ಮೇಲೆಲ್ಲಾ ನಿನ್ನನ್ನು ಅಧಿಕಾರಿಯನ್ನಾಗಿ ಇಟ್ಟಿದ್ದೇನೆ ಎಂದು ಹೇಳಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಇದಲ್ಲದೆ ಫರೋಹನು ಯೋಸೇಫನಿಗೆ, “ನೋಡು, ನಾನು ನಿನ್ನನ್ನು ಈಜಿಪ್ಟ್ ದೇಶದ ಮೇಲೆಲ್ಲಾ ನೇಮಿಸಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.