ಆದಿಕಾಂಡ 41:42 - ಪರಿಶುದ್ದ ಬೈಬಲ್42 ರಾಜಮುದ್ರೆಯನ್ನು ಹೊಂದಿದ್ದ ತನ್ನ ಉಂಗುರವನ್ನು ಕೊಟ್ಟನು; ಧರಿಸಿಕೊಳ್ಳಲು ಒಳ್ಳೆಯ ನಾರುಬಟ್ಟೆಯ ನಿಲುವಂಗಿಯನ್ನು ಕೊಟ್ಟನು; ಕೊರಳಿಗೆ ಚಿನ್ನದ ಸರವನ್ನು ಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಫರೋಹನು ತನ್ನ ಕೈಯಿಂದ ಉಂಗುರವನ್ನು ತೆಗೆದು ಯೋಸೇಫನ ಬೆರಳಿಗೆ ತೊಡಿಸಿ ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರವನ್ನು ಹಾಕಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ತನ್ನ ಬೆರಳಿನಿಂದ ಮುದ್ರಿಕೆಯನ್ನು ತೆಗೆದು ಜೋಸೆಫನ ಬೆರಳಿಗೆ ಇಟ್ಟನು. ಅವನಿಗೆ ಮೌಲ್ಯವಾದ ವಸ್ತ್ರಗಳನ್ನು ಹೊದಿಸಿದನು. ಕೊರಳಿಗೆ ಚಿನ್ನದ ಸರವನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)42 ತನ್ನ ಕೈಯಿಂದ ಮುದ್ರಿಕೆಯನ್ನು ತೆಗೆದು ಯೋಸೇಫನ ಕೈಗೆ ಇಟ್ಟು ಅವನಿಗೆ ನಾರುಮಡಿಯನ್ನು ಹೊದಿಸಿ ಅವನ ಕೊರಳಿಗೆ ಚಿನ್ನದ ಸರಪಣಿಯನ್ನು ಹಾಕಿಸಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು, ನಾರುಮಡಿಯ ವಸ್ತ್ರವನ್ನು ತೊಡಿಸಿ, ಚಿನ್ನದ ಸರಪಣಿಯನ್ನು ಅವನ ಕೊರಳಿಗೆ ಹಾಕಿದನು. ಅಧ್ಯಾಯವನ್ನು ನೋಡಿ |
ಆಗ ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ತನ್ನಲ್ಲಿಗೆ ಕರೆಸಿದನು. ಅವನು ಆ ವಿದ್ವಾಂಸರಿಗೆ, “ಈ ಬರವಣಿಗೆಯನ್ನು ಓದಿ ನನಗೆ ಅದರ ಅರ್ಥವನ್ನು ಹೇಳಬಲ್ಲ ಮನುಷ್ಯನಿಗೆ ನಾನು ಬಹುಮಾನವನ್ನು ಕೊಡುತ್ತೇನೆ. ಆ ಮನುಷ್ಯನಿಗೆ ನಾನು ಕಂದು ಬಣ್ಣದ ವಸ್ತ್ರಗಳನ್ನು ಕೊಡುತ್ತೇನೆ. ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.
ನಾನು ನಿನ್ನ ಬಗ್ಗೆ ಕೇಳಿದ್ದೇನೆ. ನೀನು ಗೂಢಾರ್ಥವನ್ನು ತಿಳಿದುಕೊಳ್ಳಬಲ್ಲೆ ಮತ್ತು ಕಠಿಣವಾದ ಸಮಸ್ಯೆಗಳಿಗೆ ಪರಿಹಾರ ಹೇಳಬಲ್ಲೆ ಎಂದು ನಾನು ಕೇಳಿದ್ದೇನೆ. ನೀನು ಗೋಡೆಯ ಮೇಲಿನ ಈ ಬರಹವನ್ನು ಓದಿ ಅದರ ಅರ್ಥವನ್ನು ನನಗೆ ವಿವರಿಸಿದರೆ, ನಾನು ನಿನಗೆ ಕಂದುಬಣ್ಣದ ಬಟ್ಟೆಗಳನ್ನು ಕೊಡುತ್ತೇನೆ. ನಿನ್ನ ಕತ್ತಿಗೆ ಚಿನ್ನದ ಹಾರವನ್ನು ಹಾಕುತ್ತೇನೆ; ನಿನ್ನನ್ನು ನನ್ನ ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುತ್ತೇನೆ” ಎಂದು ಹೇಳಿದನು.
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.