ಆದಿಕಾಂಡ 41:43 - ಪರಿಶುದ್ದ ಬೈಬಲ್43 ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201943 ತನಗಿದ್ದ ಎರಡನೇ ರಥದಲ್ಲಿ ಅವನನ್ನು ಕುಳ್ಳಿರಿಸಿ, “ಅವನ ಮುಂದೆ ಅಡ್ಡ ಬೀಳಿರಿ” ಎಂದು ಪ್ರಕಟಣೆ ಹೊರಡಿಸಿ ಅವನನ್ನು ಐಗುಪ್ತ ದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)43 ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ, “ಈತನಿಗೆ ಅಡ್ಡಬೀಳಿ,” ಎಂದು ಪ್ರಕಟನೆ ಮಾಡಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶಕ್ಕೆ ಮುಖ್ಯಮಂತ್ರಿಯನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)43 ತನಗಿದ್ದ ಎರಡನೆಯ ರಥದಲ್ಲಿ ಕುಳ್ಳಿರಿಸಿ ಅವನ ಮುಂದೆ ಅಡ್ಡಬೀಳಿರಿ ಎಂದು ಪ್ರಕಟಣೆಮಾಡಿಸಿ ಅವನನ್ನು ಐಗುಪ್ತದೇಶಕ್ಕೆ ಸರ್ವಾಧಿಕಾರಿಯನ್ನಾಗಿ ಇಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ43 ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂಡಿಸಿದಾಗ, “ಈತನನ್ನು ನಮಸ್ಕರಿಸಿ ದಾರಿಮಾಡಿರಿ,” ಎಂದು ಪ್ರಕಟಿಸಿದನು. ಹೀಗೆ ಅವನನ್ನು ಈಜಿಪ್ಟ್ ದೇಶವನ್ನೆಲ್ಲಾ ಆಳುವವನನ್ನಾಗಿ ನೇಮಿಸಿದನು. ಅಧ್ಯಾಯವನ್ನು ನೋಡಿ |
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.