ಆದಿಕಾಂಡ 41:44 - ಪರಿಶುದ್ದ ಬೈಬಲ್44 ಫರೋಹನು ಅವನಿಗೆ, “ನಾನು ರಾಜ ಫರೋಹ. ಆದ್ದರಿಂದ ನನಗೆ ಇಷ್ಟವಾದದ್ದನ್ನು ಮಾಡುವೆನು. ಆದರೆ ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟಿನ ಬೇರೆ ಯಾರೂ ಕೈಯೆತ್ತಲೂ ಸಾಧ್ಯವಿಲ್ಲ, ಕಾಲನ್ನು ಚಲಿಸಲೂ ಸಾಧ್ಯವಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಅಲ್ಲದೆ ಫರೋಹನು ಯೋಸೇಫನಿಗೆ ಹೇಳಿದ್ದೇನೆಂದರೆ, “ನಾನು ಫರೋಹನು. ನಿನ್ನ ಅಪ್ಪಣೆಯಿಲ್ಲದೆ ಐಗುಪ್ತ ದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ, ಕಾಲನ್ನಾಗಲಿ ಕದಲಿಸಬಾರದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಅಷ್ಟು ಮಾತ್ರವಲ್ಲ, ಫರೋಹನು ಅವನಿಗೆ, “ಫರೋಹನಾದ ನಾನು ಹೇಳುತ್ತಿದ್ದೇನೆ: ನಿನ್ನ ಅಪ್ಪಣೆಯಿಲ್ಲದೆ ಇಡೀ ಈಜಿಪ್ಟ್ ದೇಶದಲ್ಲಿ ಯಾರೂ ಏನನ್ನೂ ಮಾಡಕೂಡದು,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಇನ್ನೂ ಫರೋಹನು ಅವನಿಗೆ - ನಾನು ಫರೋಹನು; ನಿನ್ನ ಅಪ್ಪಣೆಯಿಲ್ಲದೆ ಐಗುಪ್ತದೇಶದಲ್ಲೆಲ್ಲಾ ಒಬ್ಬನೂ ಕೈಯನ್ನಾಗಲಿ ಕಾಲನ್ನಾಗಲಿ ಕದಲಿಸಕೂಡದು ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಇದಲ್ಲದೆ ಫರೋಹನು ಯೋಸೇಫನಿಗೆ, “ನಾನು ಫರೋಹನು, ನಿನ್ನ ಅಪ್ಪಣೆಯಿಲ್ಲದೆ ಈಜಿಪ್ಟ್ ದೇಶದಲ್ಲೆಲ್ಲಾ ಯಾವನೂ ತನ್ನ ಕೈಯನ್ನಾಗಲಿ, ಕಾಲನ್ನಾಗಲಿ ಎತ್ತಬಾರದು,” ಎಂದನು. ಅಧ್ಯಾಯವನ್ನು ನೋಡಿ |
ಅರಸನ ನಂತರ ರಾಜ್ಯದಲ್ಲಿ ಯೆಹೂದಿಯಾದ ಮೊರ್ದೆಕೈಯೇ ಮುಖ್ಯ ವ್ಯಕ್ತಿಯಾಗಿದ್ದನು. ರಾಜ್ಯದಲ್ಲಿ ಅವನಿಗೆ ಎರಡನೇ ಸ್ಥಾನವಿತ್ತು. ಯೆಹೂದ್ಯರೊಳಗೆ ಅವನು ಪ್ರಮುಖ ವ್ಯಕ್ತಿಯಾಗಿದ್ದನು. ಯೆಹೂದ್ಯರೆಲ್ಲರೂ ಅವನನ್ನು ಬಹಳವಾಗಿ ಗೌರವಿಸುತ್ತಿದ್ದರು. ತನ್ನ ಜನರ ಒಳಿತಿಗಾಗಿ (ಜನರಿಗೋಸ್ಕರವಾಗಿ) ಮೊರ್ದೆಕೈ ಬಹಳವಾಗಿ ಪ್ರಯಾಸಪಟ್ಟಿದ್ದರಿಂದ ಜನರು ಅವನನ್ನು ಸನ್ಮಾನಿಸಿದರು; ಮೊರ್ದೆಕೈ ಯೆಹೂದ್ಯರೆಲ್ಲರಿಗೆ ಸಮಾಧಾನವನ್ನು ತಂದನು.