ಆದಿಕಾಂಡ 41:52 - ಪರಿಶುದ್ದ ಬೈಬಲ್52 ಎರಡನೆ ಮಗನು ಹುಟ್ಟಿದಾಗ, “ನನಗೆ ಕಷ್ಟ ಬಂದ ದೇಶದಲ್ಲೇ ದೇವರು ನನ್ನನ್ನು ಅಭಿವೃದ್ಧಿಪಡಿಸಿದನು” ಎಂದು ಹೇಳಿ, ಆ ಮಗುವಿಗೆ, “ಎಫ್ರಾಯೀಮ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಎರಡನೆಯ ಮಗನು ಹುಟ್ಟಿದಾಗ, “ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆ” ಎಂದು ಹೇಳಿ ಆ ಮಗನಿಗೆ “ಎಫ್ರಾಯೀಮ್” ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಎರಡನೆಯ ಮಗನು ಹುಟ್ಟಿದಾಗ, ಯಾವ ದೇಶದಲ್ಲಿ ನನಗೆ ಸಂಕಷ್ಟವಿತ್ತೋ ಆ ದೇಶದಲ್ಲಿ ದೇವರು ನನಗೆ ಸಮೃದ್ಧಿಯನ್ನು ದಯಪಾಲಿಸಿದ್ದಾರೆ!” ಎಂದು ಆ ಮಗನಿಗೆ ‘ಎಫ್ರಾಯೀಮ್’ ಎಂದು ನಾಮಕರಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಎರಡನೆಯ ಮಗನು ಹುಟ್ಟಿದಾಗ ಅವನು - ನನಗೆ ಸಂಕಟ ಬಂದ ದೇಶದಲ್ಲೇ ದೇವರು ಅಭಿವೃದ್ಧಿಯನ್ನು ದಯಪಾಲಿಸಿದ್ದಾನೆಂದು ಹೇಳಿ ಆ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಅವನು ತನ್ನ ಎರಡನೆಯ ಮಗನಿಗೆ ಎಫ್ರಾಯೀಮ್ ಎಂದು ಹೆಸರಿಟ್ಟನು. “ನಾನು ಬಾಧೆಯನ್ನನುಭವಿಸಿದ ದೇಶ ಫಲಭರಿತವಾಗುವಂತೆ ದೇವರು ಮಾಡಿದ್ದಾರೆ,” ಎಂದನು. ಅಧ್ಯಾಯವನ್ನು ನೋಡಿ |
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.
ಹನ್ನೆರಡು ಕುಲಗಳಿಗೆ ಅವರವರ ಪ್ರದೇಶಗಳ ಪೂರ್ಣಸ್ವಾಸ್ತ್ಯವನ್ನು ಕೊಡಲಾಯಿತು. ಯೋಸೇಫನ ಮನೆತನದವರು ಮನಸ್ಸೆ ಮತ್ತು ಎಫ್ರಾಯೀಮ್ ಎಂಬ ಎರಡು ಕುಲಗಳಾಗಿ ವಿಂಗಡಿಸಲ್ಪಟ್ಟಿದ್ದರು. ಪ್ರತಿಯೊಂದು ಕುಲಕ್ಕೂ ಸ್ವಲ್ಪಸ್ವಲ್ಪ ಪ್ರದೇಶ ದೊರೆಯಿತು. ಆದರೆ ಲೇವಿ ಕುಲದ ಜನರಿಗೆ ಯಾವ ಪ್ರದೇಶವನ್ನೂ ಕೊಡಲಿಲ್ಲ. ಅವರಿಗೆ ವಾಸಿಸಲು ಕೆಲವು ಊರುಗಳನ್ನು ಮಾತ್ರ ಕೊಡಲಾಯಿತು. ಈ ಊರುಗಳು ಪ್ರತಿಯೊಂದು ಕುಲದ ಜನರ ಪ್ರದೇಶದಲ್ಲಿ ಇದ್ದವು. ಅವರ ಪಶುಗಳಿಗಾಗಿ ಹುಲ್ಲುಗಾವಲುಗಳನ್ನು ಕೊಡಲಾಯಿತು.