ಆದಿಕಾಂಡ 41:54 - ಪರಿಶುದ್ದ ಬೈಬಲ್54 ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ಜೋಸೆಫನು ಹೇಳಿದ್ದ ಪ್ರಕಾರವೇ ಕ್ಷಾಮದ ಏಳು ವರ್ಷಗಳು ಪ್ರಾರಂಭವಾದವು. ಬರವು ಸುತ್ತಮುತ್ತಲಿನ ಎಲ್ಲ ದೇಶಗಳಿಗೂ ಹಬ್ಬಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ಯೋಸೇಫನು ಹೇಳಿದ್ದ ಪ್ರಕಾರ ಕ್ಷಾಮದ ಏಳು ವರುಷಗಳಿಗೆ ಪ್ರಾರಂಭವಾಯಿತು. ಬರವು ಸುತ್ತಲಿದ್ದ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು; ಐಗುಪ್ತದೇಶದಲ್ಲಿ ಮಾತ್ರ ಆಹಾರ ದೊರಕುವದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ಯೋಸೇಫನು ಹೇಳಿದಂತೆ ಬರುವುದಕ್ಕಿದ್ದ ಬರಗಾಲದ ಏಳು ವರ್ಷಗಳು ಆರಂಭವಾದವು. ಆಗ ಎಲ್ಲಾ ದೇಶಗಳಲ್ಲಿ ಬರಗಾಲವಿತ್ತು. ಆದರೆ ಈಜಿಪ್ಟ್ ದೇಶದಲ್ಲೆಲ್ಲಾ ಆಹಾರವಿತ್ತು. ಅಧ್ಯಾಯವನ್ನು ನೋಡಿ |