ಆದಿಕಾಂಡ 41:7 - ಪರಿಶುದ್ದ ಬೈಬಲ್7 ಬತ್ತಿಹೋಗಿದ್ದ ತೆನೆಗಳು ಪುಷ್ಟಿಯಾಗಿದ್ದ ತೆನೆಗಳನ್ನು ತಿಂದುಬಿಟ್ಟವು. ಫರೋಹನು ಎಚ್ಚರಗೊಂಡಾಗ ಅದು ಕೇವಲ ಕನಸೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಬತ್ತಿ ಹೋಗಿದ್ದ ಈ ತೆನೆಗಳು ಆ ಏಳು ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಆಗ ಫರೋಹನು ಎಚ್ಚೆತ್ತು, ಅದನ್ನು ಕನಸೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬತ್ತಿಹೋಗಿದ್ದ ಈ ತೆನೆಗಳು, ಕಾಳುತುಂಬಿದ್ದ ಆ ಏಳು ಬಲಿತ ತೆನೆಗಳನ್ನು ನುಂಗಿಬಿಟ್ಟವು. ಅಷ್ಟರೊಳಗೆ ಫರೋಹನು ಎಚ್ಚೆತ್ತು, ತಾನು ಕಂಡದ್ದು ಕನಸೆಂದು ತಿಳಿದುಕೊಂಡ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಬತ್ತಿಹೋಗಿದ್ದ ಈ ತೆನೆಗಳು ಆ ಏಳು ಒಳ್ಳೇ ಪುಷ್ಟಿಯುಳ್ಳ ತೆನೆಗಳನ್ನು ನುಂಗಿಬಿಟ್ಟವು. ಹೀಗೆ ಕಾಣಿಸುವಷ್ಟರಲ್ಲಿ ಫರೋಹನು ಎಚ್ಚತ್ತು ಅದನ್ನು ಕನಸೆಂದು ತಿಳುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಬತ್ತಿ ಹೋಗಿದ್ದ ತೆನೆಗಳು, ಪುಷ್ಟಿಯಾದ ಏಳು ತೆನೆಗಳನ್ನು ನುಂಗಿ ಬಿಟ್ಟವು. ಫರೋಹನು ಎಚ್ಚೆತ್ತಾಗ ಅದು ಕನಸಾಗಿತ್ತು. ಅಧ್ಯಾಯವನ್ನು ನೋಡಿ |
ಸೊಲೊಮೋನನು ಎಚ್ಚರಗೊಂಡನು. ದೇವರು ಕನಸಿನಲ್ಲಿ ತನ್ನೊಡನೆ ಮಾತನಾಡಿದನೆಂಬುದು ಅವನಿಗೆ ತಿಳಿಯಿತು. ನಂತರ ಸೊಲೊಮೋನನು ಜೆರುಸಲೇಮಿಗೆ ಹೋಗಿ, ಯೆಹೋವನ ಒಡಂಬಡಿಕೆಯ ಪೆಟ್ಟಿಗೆಯ ಎದುರಿನಲ್ಲಿ ನಿಂತುಕೊಂಡನು. ಸೊಲೊಮೋನನು ಯೆಹೋವನಿಗೆ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಅನಂತರ ಅವನು ತನ್ನ ಆಳ್ವಿಕೆಗೆ ಸಹಾಯ ಮಾಡಿದ ಎಲ್ಲ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಒಂದು ಔತಣವನ್ನೇರ್ಪಡಿಸಿದನು.