Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:13 - ಪರಿಶುದ್ದ ಬೈಬಲ್‌

13 ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು, ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು. ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ. ಮತ್ತೊಬ್ಬನು ಇಲ್ಲ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಅವರು, “ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ಕಾನಾನ್ ನಾಡಿನವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲೇ ಇದ್ದಾನೆ; ಒಬ್ಬನು ಇಲ್ಲವಾದನು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅವರು - ತಮ್ಮ ಸೇವಕರಾದ ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರು; ನಾವು ಕಾನಾನ್ ದೇಶದವರು, ಒಬ್ಬ ತಂದೆಯ ಮಕ್ಕಳು; ನಮ್ಮಲ್ಲಿ ಚಿಕ್ಕವನು ತಂದೆಯ ಬಳಿಯಲ್ಲಿದ್ದಾನೆ; ಒಬ್ಬನಿಲ್ಲ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕವರು, “ನಿನ್ನ ದಾಸರಾದ ನಾವು ಹನ್ನೆರಡು ಸಹೋದರರು. ನಾವು ಕಾನಾನ್ ದೇಶದಲ್ಲಿರುವ ಒಬ್ಬ ಮನುಷ್ಯನ ಮಕ್ಕಳು. ಈಗ ಚಿಕ್ಕವನು ನನ್ನ ತಂದೆಯೊಂದಿಗೆ ಇದ್ದಾನೆ, ಮತ್ತೊಬ್ಬನು ಇಲ್ಲ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:13
26 ತಿಳಿವುಗಳ ಹೋಲಿಕೆ  

ರೂಬೇನನು ತನ್ನ ಸಹೋದರರ ಬಳಿಗೆ ಹೋಗಿ, “ಹುಡುಗನು ಬಾವಿಯೊಳಗೆ ಇಲ್ಲ. ಈಗ ನಾನೇನು ಮಾಡಲಿ?” ಎಂದು ಕೇಳಿದನು.


ನಾವು ನಿಮಗೆ, ‘ನಮಗೆ ಒಬ್ಬ ತಂದೆಯಿದ್ದಾನೆ, ಅವನು ವೃದ್ಧನಾಗಿದ್ದಾನೆ; ನಮಗೆ ಪ್ರಾಯದ ತಮ್ಮನಿದ್ದಾನೆ, ನಮ್ಮ ತಂದೆಗೆ ತುಂಬ ವಯಸ್ಸಾಗಿದ್ದಾಗ ಅವನು ಹುಟ್ಟಿದ್ದರಿಂದ ನಮ್ಮ ತಂದೆಯು ಅವನನ್ನು ಪ್ರೀತಿಸುತ್ತಾನೆ. ಆ ಕಿರಿಯ ಮಗನ ಸಹೋದರನು ಸತ್ತುಹೋದನು. ಆದ್ದರಿಂದ ಆ ತಾಯಿಯಲ್ಲಿ ಹುಟ್ಟಿದವರಲ್ಲಿ ಇವನೊಬ್ಬನೇ ಉಳಿದಿದ್ದಾನೆ. ನಮ್ಮ ತಂದೆಯು ಅವನನ್ನು ತುಂಬಾ ಪ್ರೀತಿಸುವನು’ ಎಂದು ಹೇಳಿದೆವು.


ನಾವು ಹನ್ನೆರಡು ಮಂದಿ ಅಣ್ಣತಮ್ಮಂದಿರೆಂದೂ ನಮಗೆ ಒಬ್ಬನೇ ತಂದೆಯೆಂದೂ ಅವನಿಗೆ ಹೇಳಿದೆವು. ನಮ್ಮ ಒಬ್ಬ ತಮ್ಮನು ಸತ್ತುಹೋದನೆಂದೂ ನಮ್ಮ ಕಿರಿಯ ತಮ್ಮನು ಕಾನಾನ್ ದೇಶದಲ್ಲಿರುವ ನಮ್ಮ ಮನೆಯಲ್ಲಿರುವನೆಂದೂ ಅವನಿಗೆ ಹೇಳಿದೆವು.


ಸಹೋದರರು, “ಆ ಮನುಷ್ಯನು ನಮ್ಮ ವಿಷಯವಾಗಿಯೂ ನಮ್ಮ ಕುಟುಂಬದ ವಿಷಯವಾಗಿಯೂ ತಿಳಿದುಕೊಳ್ಳಲು ಸೂಕ್ಷ್ಮವಾಗಿ ಪ್ರಶ್ನೆಗಳನ್ನು ಕೇಳಿದನು. ಅವನು ನಮಗೆ, ‘ನಿಮ್ಮ ತಂದೆಯು ಇನ್ನೂ ಜೀವಂತವಾಗಿರುವನೇ? ನಿಮಗೆ ಮನೆಯಲ್ಲಿ ಮತ್ತೊಬ್ಬ ಸಹೋದರನಿರುವನೇ?’ ಎಂದು ಕೇಳಿದನು. ನಾವು ಅವನ ಪ್ರಶ್ನೆಗಳಿಗೆ ಮಾತ್ರ ಉತ್ತರಕೊಟ್ಟೆವು. ನಮ್ಮ ಸಹೋದರನನ್ನು ತನ್ನ ಬಳಿಗೆ ಕರೆದುಕೊಂಡು ಬರಬೇಕೆಂದು ಅವನು ಹೇಳುತ್ತಾನೆಂದು ನಮಗೆ ತಿಳಿದಿರಲಿಲ್ಲ” ಎಂದು ಹೇಳಿದರು.


“ರಾಮದಲ್ಲಿ ಬೊಬ್ಬೆಯು ಕೇಳಿಸಿತು. ಅದು ಬಹು ಗೋಳಾಟದ ಮತ್ತು ದುಃಖದ ಬೊಬ್ಬೆಯಾಗಿತ್ತು. ರಾಹೇಲಳು ತನ್ನ ಮಕ್ಕಳಿಗಾಗಿ ಅಳುವಳು; ಅವರು ಸತ್ತುಹೋದದ್ದಕ್ಕಾಗಿ ಸಮಾಧಾನ ಹೊಂದಲೊಲ್ಲಳು.”


ಜ್ಞಾನಿಗಳು ತನಗೆ ಮೋಸಮಾಡಿದರೆಂಬುದು ತಿಳಿದಾಗ ಹೆರೋದನು ಬಹಳ ಕೋಪಗೊಂಡನು. ಆ ಮಗು ಹುಟ್ಟಿದ ಸಮಯವನ್ನು ಹೆರೋದನು ಜ್ಞಾನಿಗಳಿಂದ ತಿಳಿದುಕೊಂಡಿದ್ದನು. ಆ ಮಗು ಹುಟ್ಟಿ ಎರಡು ವರ್ಷಗಳಾಗಿದ್ದವು. ಆದ್ದರಿಂದ ಹೆರೋದನು ಬೆತ್ಲೆಹೇಮಿನಲ್ಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿದ್ದ ಎರಡು ವರ್ಷದ ಮತ್ತು ಅವರಿಗಿಂತ ಚಿಕ್ಕವರಾದ ಗಂಡುಮಕ್ಕಳನ್ನೆಲ್ಲಾ ಕೊಲ್ಲಬೇಕೆಂದು ಆಜ್ಞಾಪಿಸಿದನು.


ನಮ್ಮ ಪೂರ್ವಿಕರು ನಿನಗೆ ವಿರೋಧವಾಗಿ ಪಾಪ ಮಾಡಿದರು. ಈಗ ಅವರು ಸತ್ತುಹೋಗಿದ್ದಾರೆ. ಆದರೆ ಅವರ ಪಾಪಗಳ ನಿಮಿತ್ತ ನಾವು ಈಗ ಸಂಕಟಪಡುತ್ತಿದ್ದೇವೆ.


ಯೆಹೋವನು ಹೀಗೆನ್ನುತ್ತಾನೆ: “ರಾಮದಲ್ಲಿ ಅತಿ ದುಃಖದಿಂದ ಗೋಳಾಡುವ ಒಂದು ಧ್ವನಿಯು ಕೇಳಿಬರುತ್ತದೆ. ರಾಹೇಲಳು ತನ್ನ ಮಕ್ಕಳಿಗಾಗಿ ಗೋಳಾಡುವಳು. ಅವಳ ಮಕ್ಕಳು ಸತ್ತುಹೋದುದರಿಂದ ರಾಹೇಲಳು ಸಮಾಧಾನ ಹೊಂದುವದಕ್ಕೆ ಒಪ್ಪಲಾರಳು.”


ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.


ನಾನು ಒಬ್ಬ ಮಗನನ್ನು ಕಳುಹಿಸಿಕೊಟ್ಟಾಗ, ಅವನು ಕ್ರೂರ ಪ್ರಾಣಿಯಿಂದ ಕೊಲ್ಲಲ್ಪಟ್ಟನು; ಇಂದಿನ ತನಕ ನಾನು ಅವನನ್ನು ನೋಡಲಿಲ್ಲ.


ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.


ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.


ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು.


ಯೋಸೇಫನು ಅವರಿಗೆ, “ಇಲ್ಲ! ನಮ್ಮ ದುರ್ಬಲ ಸ್ಥಳಗಳನ್ನು ಕಂಡುಕೊಳ್ಳುವುದಕ್ಕೆ ನೀವು ಬಂದಿದ್ದೀರಿ” ಎಂದು ಹೇಳಿದನು.


ಯೋಸೇಫನು ಅವರಿಗೆ, “ಇಲ್ಲ, ನಾನು ಹೇಳಿದಂತೆ ನೀವು ಗೂಢಚಾರರೇ.


ಬಳಿಕ ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದನು. (ಬೆನ್ಯಾಮೀನ ಮತ್ತು ಯೋಸೇಫ ಒಂದೇ ತಾಯಿಯ ಮಕ್ಕಳು.) ಯೋಸೇಫನು, “ನೀವು ನನಗೆ ತಿಳಿಸಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿದನು. ಆಮೇಲೆ ಯೋಸೇಫನು ಬೆನ್ಯಾಮೀನನಿಗೆ “ಮಗನೇ, ದೇವರು ನಿನಗೆ ಒಳ್ಳೆಯದನ್ನು ಮಾಡಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು