Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:16 - ಪರಿಶುದ್ದ ಬೈಬಲ್‌

16 ಆದ್ದರಿಂದ ನಿಮ್ಮಲ್ಲೊಬ್ಬನು ಹಿಂತಿರುಗಿ ಹೋಗಿ ನಿಮ್ಮ ಚಿಕ್ಕ ತಮ್ಮನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು. ಅಲ್ಲಿಯವರೆಗೆ ಉಳಿದವರೆಲ್ಲರೂ ಇಲ್ಲಿ ಸೆರೆಮನೆಯಲ್ಲಿರಬೇಕು. ನೀವು ಹೇಳುತ್ತಿರುವುದು ಸತ್ಯವೋ ಸುಳ್ಳೋ ಆಗ ನನಗೆ ಗೊತ್ತಾಗುವುದು. ಆದರೆ ನೀವಂತೂ ಗೂಢಚಾರರೆಂದು ತಿಳಿದುಕೊಂಡಿದ್ದೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ ಫರೋಹನ ಜೀವದಾಣೆ ನೀವು ಗೂಢಚಾರರೇ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವನನ್ನು ಕರೆದುಕೊಂಡು ಬರುವುದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳಿಸಿರಿ. ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇರಿಸುತ್ತೇನೆ. ಹೀಗೆ ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಇಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ,” ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಅವನನ್ನು ಕರೆದುಕೊಂಡು ಬರುವದಕ್ಕೆ ನಿಮ್ಮಲ್ಲಿ ಒಬ್ಬನನ್ನು ಕಳುಹಿಸಿರಿ; ಅವನು ಬರುವವರೆಗೂ ನಿಮ್ಮನ್ನು ಸೆರೆಯಲ್ಲಿ ಇಡಿಸುತ್ತೇನೆ. ಹೀಗೆ ನಾನು ನಿಮ್ಮ ಮಾತುಗಳನ್ನು ಪರೀಕ್ಷಿಸಿ ನೀವು ಸತ್ಯವಂತರೋ ಅಲ್ಲವೋ ಎಂದು ತಿಳಿದುಕೊಳ್ಳುತ್ತೇನೆ. ನಿಮ್ಮ ತಮ್ಮನು ಬಾರದೆ ಹೋದರೆ, ಫರೋಹನ ಜೀವದಾಣೆ, ನೀವು ಗೂಢಚಾರರೇ ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಿಮ್ಮಲ್ಲಿಂದ ಒಬ್ಬನನ್ನು ಕಳುಹಿಸಿರಿ, ಅವನು ನಿಮ್ಮ ಸಹೋದರನನ್ನು ಕರೆದುಕೊಂಡು ಬರಲಿ. ಆದರೆ ನೀವು ಸೆರೆಮನೆಯಲ್ಲಿರಬೇಕು. ಹೀಗೆ ನಿಮ್ಮಲ್ಲಿ ಸತ್ಯವು ಉಂಟೋ, ಇಲ್ಲವೋ ಎಂದು ನಿಮ್ಮ ಮಾತುಗಳನ್ನು ಪರೀಕ್ಷಿಸುತ್ತೇನೆ. ಇಲ್ಲದಿದ್ದರೆ, ಫರೋಹನ ಜೀವದಾಣೆ ನಿಶ್ಚಯವಾಗಿ ನೀವು ಗೂಢಚಾರರು,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:16
4 ತಿಳಿವುಗಳ ಹೋಲಿಕೆ  

ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು.


ಆದರೆ ಅಮ್ಮೋನಿಯರ ನಾಯಕರು ತಮ್ಮ ಪ್ರಭುವಾದ ಹಾನೂನನಿಗೆ, “ನಿನ್ನನ್ನು ಸಂತೈಸಲು ಕೆಲವು ಜನರನ್ನು ಕಳುಹಿಸುವುದರ ಮೂಲಕ ದಾವೀದನು ನಿನ್ನ ತಂದೆಯನ್ನು ಗೌರವಿಸಲು ಪ್ರಯತ್ನಿಸುತ್ತಿರುವನೆಂದು ನೀನು ಭಾವಿಸಿರುತ್ತಿಯಲ್ಲವೇ? ಇಲ್ಲ! ನಿನ್ನ ನಗರದ ಸಂಗತಿಗಳನ್ನು ರಹಸ್ಯವಾಗಿ ಕಂಡುಕೊಳ್ಳಲು ಮತ್ತು ತಿಳಿದುಕೊಳ್ಳಲು ದಾವೀದನು ಈ ಜನರನ್ನು ಕಳುಹಿಸಿದ್ದಾನೆ. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡಲು ಯೋಜನೆ ಮಾಡುತ್ತಿದ್ದಾರೆ” ಎಂದು ಹೇಳಿದರು.


“ಆ ದೇಶದ ರಾಜ್ಯಪಾಲನು ನಮ್ಮನ್ನು ಗೂಢಚಾರರೆಂದು ಭಾವಿಸಿ ನಮ್ಮೊಂದಿಗೆ ಒರಟಾಗಿ ಮಾತನಾಡಿದನು.


ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು