ಆದಿಕಾಂಡ 42:21 - ಪರಿಶುದ್ದ ಬೈಬಲ್21 ಅವರು ಒಬ್ಬರಿಗೊಬ್ಬರು, “ನಾವು ನಮ್ಮ ತಮ್ಮನಾದ ಯೋಸೇಫನಿಗೆ ಮಾಡಿದ ಕೆಟ್ಟಕಾರ್ಯಕ್ಕಾಗಿ ಈ ಶಿಕ್ಷೆಯನ್ನು ಅನುಭವಿಸುತ್ತಿದ್ದೇವೆ. ಪ್ರಾಣಸಂಕಟದಲ್ಲಿದ್ದ ಅವನು ತನ್ನನ್ನು ಕಾಪಾಡುವಂತೆ ನಮ್ಮನ್ನು ಬೇಡಿಕೊಂಡರೂ ನಾವು ಅವನ ಮೊರೆಯನ್ನು ತಿರಸ್ಕರಿಸಿದೆವು. ಆದ್ದರಿಂದ ಈಗ ಪ್ರಾಣಸಂಕಟಕ್ಕೀಡಾಗಿದ್ದೇವೆ” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆಗ ಅವರು ತಮ್ಮತಮ್ಮೊಳಗೆ, “ನಾವು ನಮ್ಮ ತಮ್ಮನಿಗೆ ಮಾಡಿದ ದ್ರೋಹಕ್ಕೆ ತಕ್ಕ ದಂಡನೆಯನ್ನು ಅನುಭವಿಸುತ್ತಿದ್ದೇವೆ. ಅವನು ನಮ್ಮನ್ನು ಕಳಕಳಿ ಬೇಡಿಕೊಂಡ. ಅವನ ಪ್ರಾಣಸಂಕಟವನ್ನು ತಿಳಿದೂ ನಾವು ಅವನ ಮೊರೆಗೆ ಕಿವಿಗೊಡಲಿಲ್ಲ. ಆದ್ದರಿಂದಲೆ ಈ ಸಂಕಟದಲ್ಲಿ ಸಿಕ್ಕಿಹಾಕಿಕೊಂಡು ಇದ್ದೇವೆ,” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ಅವರು ತಮ್ಮತಮ್ಮೊಳಗೆ - ನಾವು ನಮ್ಮ ತಮ್ಮನಿಗೆ ಮಾಡಿದ್ದು ದ್ರೋಹವೇ ಸರಿ; ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ; ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಅವರು, “ನಿಶ್ಚಯವಾಗಿ ನಮ್ಮ ಸಹೋದರನ ಅಪರಾಧವು ನಮ್ಮ ಮೇಲೆ ಇದೆ. ಅವನು ನಮ್ಮನ್ನು ಬೇಡಿಕೊಂಡಾಗ, ಅವನ ಪ್ರಾಣಸಂಕಟವನ್ನು ಕಂಡರೂ ಕೇಳದೆ ಹೋದೆವು. ಆದಕಾರಣ ಈ ಸಂಕಟವು ನಮ್ಮ ಮೇಲೆ ಬಂದಿತು,” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿ |
“ಅದಕ್ಕಾಗಿ ಯೆಹೋವನು ಹೀಗೆನ್ನುತ್ತಾನೆ: ‘ನೀವು ನನ್ನ ಆಜ್ಞಾಪಾಲನೆಯನ್ನು ಮಾಡಿಲ್ಲ. ನೀವು ನಿಮ್ಮ ಸಹೋದರರಾದ ಇಬ್ರಿಯರಿಗೆ ಸ್ವಾತಂತ್ರ್ಯವನ್ನು ಕೊಟ್ಟಿಲ್ಲ. ನೀವು ಒಡಂಬಡಿಕೆಗನುಸಾರವಾಗಿ ನಡೆದುಕೊಂಡಿಲ್ಲ. ಅದಕ್ಕಾಗಿ ನಾನು “ಸ್ವಾತಂತ್ರ್ಯವನ್ನು ಕೊಡುತ್ತೇನೆ.” ಇದು ಯೆಹೋವನ ನುಡಿ. ಖಡ್ಗ, ಭಯಂಕರವಾದ ವ್ಯಾಧಿ ಮತ್ತು ಹಸಿವು ಇವುಗಳಿಗೆ ನಿಮ್ಮನ್ನು ಕೊಲ್ಲುವ “ಸ್ವಾತಂತ್ರ್ಯವನ್ನು” ನಾನು ಕೊಡುತ್ತೇನೆ. ಈ ವಿಷಯ ಕೇಳಿ ಭೂಲೋಕದ ಸಮಸ್ತ ರಾಜ್ಯಗಳು ಭಯಪಡುವಂತೆ ಮಾಡುತ್ತೇನೆ.
ನೀವು ಕೆಟ್ಟದ್ದನ್ನು ಮಾಡಿದರೆ ಆ ಕೆಟ್ಟತನ ನಿಮಗೆ ಶಿಕ್ಷೆಯಾಗುವಂತೆ ಮಾತ್ರ ಮಾಡುತ್ತದೆ. ನಿಮಗೆ ವಿಪತ್ತು ಬರುತ್ತದೆ. ಆ ವಿಪತ್ತು ನಿಮಗೊಂದು ಪಾಠವನ್ನು ಕಲಿಸುತ್ತದೆ. ಅದರ ಬಗ್ಗೆ ಯೋಚಿಸಿರಿ. ಆಗ ನಿಮ್ಮ ದೇವರಿಗೆ ವಿಮುಖರಾಗುವುದು ಎಷ್ಟು ಕೆಟ್ಟದ್ದೆಂದು ನಿಮಗೆ ಗೊತ್ತಾಗುತ್ತದೆ. ನನಗೆ ಭಯಭಕ್ತಿ ತೋರದೆ ಇರುವದು ತಪ್ಪು.” ಈ ಸಂದೇಶವು ನನ್ನ ಒಡೆಯನೂ ಸರ್ವಶಕ್ತನೂ ಆಗಿರುವ ಯೆಹೋವನಿಂದ ಬಂದಿತು.
ಆಗ ಬೆಜೆಕ್‌ನ ಅರಸನು, “ನಾನು ಎಪ್ಪತ್ತು ಮಂದಿ ಅರಸರ ಕೈಕಾಲಿನ ಹೆಬ್ಬೆರಳುಗಳನ್ನು ಕತ್ತರಿಸಿ ಬಿಟ್ಟಿದ್ದೆ. ಆ ಅರಸರು ನನ್ನ ಮೇಜಿನ ಕೆಳಗೆ ಬೀಳುವ ಆಹಾರದ ಚೂರುಗಳನ್ನು ತಿನ್ನುವಂತೆ ಮಾಡಿದ್ದೆ. ನಾನು ಅವರಿಗೆ ಮಾಡಿದಂತೆಯೇ ದೇವರು ಈಗ ನನಗೆ ಮಾಡುತ್ತಿದ್ದಾನೆ” ಎಂದು ಹೇಳಿದನು. ಯೆಹೂದ್ಯರು ಬೆಜೆಕ್‌ನ ಅರಸನನ್ನು ಜೆರುಸಲೇಮಿಗೆ ತೆಗೆದುಕೊಂಡು ಬಂದರು; ಅವನು ಅಲ್ಲಿ ಸತ್ತುಹೋದನು.