Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:22 - ಪರಿಶುದ್ದ ಬೈಬಲ್‌

22 ಅದಕ್ಕೆ ರೂಬೇನನು ಅವರಿಗೆ, “ಆ ಹುಡುಗನಿಗೆ ಕೇಡು ಮಾಡಬೇಡಿ ಎಂದು ನಾನು ನಿಮಗೆ ಹೇಳಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ. ಆದ್ದರಿಂದ ಈಗ ನಾವು ಅವನ ಮರಣಕ್ಕೆ ತಕ್ಕ ಶಿಕ್ಷೆ ಹೊಂದುತ್ತಿದ್ದೇವೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಕ್ಕೆ ರೂಬೇನನು, “ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೆ. ನೀವು ಕೇಳಲಿಲ್ಲ. ಆದುದರಿಂದ ಅವನಿಗಾದ ಪ್ರಾಣ ಹಾನಿಯ ವಿಷಯದಲ್ಲಿ ನಾವು ಈಗ ಉತ್ತರ ಹೇಳಬೇಕಾಗಿ ಬಂದಿದೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅಂತೆಯೇ ರೂಬೇನನು, “ಆ ಹುಡುಗನಿಗೆ ಯಾವ ಕೇಡೂ ಮಾಡಬೇಡಿ’ ಎಂದು ನಾನು ಹೇಳಲಿಲ್ಲವೆ? ನೀವು ಕೇಳದೆಹೋದಿರಿ. ಅವನ ರಕ್ತ ಈಗ ನಮ್ಮಿಂದ ಪ್ರಾಯಶ್ಚಿತ್ತ ಕೇಳುತ್ತಿದೆ,” ಎಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಅದಕ್ಕೆ ರೂಬೇನನು - ಆ ಹುಡುಗನಿಗೆ ಏನೂ ಕೇಡು ಮಾಡಬೇಡಿರಿ ಎಂದು ನಾನು ಹೇಳಿದೆನಲ್ಲವೇ; ನೀವು ಕೇಳಲಿಲ್ಲ. ಆದದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ನಾವು ಉತ್ತರ ಹೇಳಬೇಕಾಗಿ ಬಂತು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ರೂಬೇನನು ಅವರಿಗೆ ಉತ್ತರವಾಗಿ, “ಹುಡುಗನಿಗೆ ಏನೂ ಕೇಡು ಮಾಡಬೇಡಿರಿ, ಎಂದು ನಾನು ನಿಮಗೆ ಹೇಳಿದರೂ ನೀವು ಕೇಳಲಿಲ್ಲ. ಆದ್ದರಿಂದ ಅವನಿಗಾದ ಪ್ರಾಣಹಾನಿಯ ವಿಷಯದಲ್ಲಿ ಈಗ ನಾವು ಲೆಕ್ಕ ಒಪ್ಪಿಸುತ್ತಿದ್ದೇವೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:22
19 ತಿಳಿವುಗಳ ಹೋಲಿಕೆ  

ಪ್ರಾಣಾಪರಾಧಕ್ಕೆ ಮುಯ್ಯಿತೀರಿಸುವ ಆತನು ಕುಗ್ಗಿಹೋದವರ ಮೊರೆಯನ್ನು ಮರೆಯದೆ ಅವರನ್ನು ಜ್ಞಾಪಿಸಿಕೊಂಡನು.


ಯೆಹೋವಾಷನು ಯೆಹೋಯಾದನ ಉಪಕಾರವನ್ನು ನೆನಸಲಿಲ್ಲ. ಯೆಹೋಯಾದನು ಜೆಕರ್ಯನ ತಂದೆ. ಯೆಹೋಯಾದನ ಮಗನನ್ನು ಯೆಹೋವಾಷನು ಕೊಂದನು. ಜೆಕರ್ಯನು ಸಾಯುವಾಗ, ಹೇಳಿದ್ದೇನೆಂದರೆ, “ನೀನು ಮಾಡುತ್ತಿರುವದನ್ನು ಯೆಹೋವನೇ ನೋಡಿ ನ್ಯಾಯ ತೀರಿಸಲಿ” ಎಂದು ಹೇಳಿದನು.


ಯೋವಾಬನು ತನಗಿಂತಲೂ ಬಹಳಷ್ಟು ಉತ್ತಮರಾದ ಇಬ್ಬರನ್ನು ಕೊಂದುಹಾಕಿದನು. ಅವರು ಯಾರೆಂದರೆ, ನೇರನ ಮಗನಾದ ಅಬ್ನೇರ ಮತ್ತು ಯೆತೆರನ ಮಗನಾದ ಅಮಾಸ. ಅಬ್ನೇರನು ಇಸ್ರೇಲಿನ ಸೇನಾಧಿಪತಿಯಾಗಿದ್ದನು; ಅಮಾಸನು ಯೆಹೂದದ ಸೇನಾಧಿಪತಿಯಾಗಿದ್ದನು. ಯೋವಾಬನು ಅವರನ್ನು ಕೊಂದನೆಂಬುದು ಆ ಸಮಯದಲ್ಲಿ ನನ್ನ ತಂದೆಯಾದ ದಾವೀದನಿಗೆ ತಿಳಿಯಲಿಲ್ಲ. ಯೋವಾಬನು ಅವರನ್ನು ಕೊಂದದ್ದರಿಂದ ಯೆಹೋವನು ಅವನನ್ನು ದಂಡಿಸುತ್ತಾನೆ.


ಜನರು ಕುಡುಬಿಸಿಲಿನಿಂದ ಕಂದಿಹೋಗಿ ದೇವರ ಹೆಸರನ್ನು ಶಪಿಸಿದರು. ಈ ಉಪದ್ರವಗಳನ್ನು ದೇವರೊಬ್ಬನೇ ನಿಯಂತ್ರಿಸ ಬಲ್ಲವನಾಗಿದ್ದಾನೆ. ಆದರೆ ಜನರು ತಮ್ಮ ಹೃದಯಗಳನ್ನೂ ಜೀವಿತಗಳನ್ನೂ ಪರಿವರ್ತಿಸಿಕೊಳ್ಳಲಿಲ್ಲ. ದೇವರನ್ನು ಮಹಿಮೆಪಡಿಸಲು ಒಪ್ಪಿಕೊಳ್ಳಲಿಲ್ಲ.


ಸೆರೆ ಒಯ್ಯುವವನು ಸೆರೆ ಒಯ್ಯಲ್ಪಡುವನು. ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಕೊಲ್ಲಲ್ಪಡುವನು. ಆದ್ದರಿಂದ ದೇವರ ಪರಿಶುದ್ಧ ಜನರು ತಾಳ್ಮೆಯನ್ನೂ ನಂಬಿಕೆಯನ್ನೂ ಹೊಂದಿರಬೇಕು.


ಧರ್ಮಶಾಸ್ತ್ರದ ಆಜ್ಞಾವಿಧಿಗಳಿಗನುಸಾರವಾಗಿ ಯಾವುದು ಸರಿ, ಯಾವುದು ತಪ್ಪು ಎಂಬುದನ್ನು ತಮ್ಮ ಹೃದಯಗಳು ಬಲ್ಲವೆಂದು ಅವರು ತಮ್ಮ ನಡತೆಯಿಂದಲೇ ತೋರ್ಪಡಿಸುತ್ತಾರೆ. ಇದು ಸತ್ಯವೆಂಬುದನ್ನು ಅವರ ಮನಸ್ಸಾಕ್ಷಿಯು ಖಚಿತಪಡಿಸುತ್ತದೆ. ಅವರ ಅಂತಃಪ್ರಜ್ಞೆಯೇ ಅವರನ್ನು ದೋಷಿಗಳೆಂದೋ ಇಲ್ಲವೆ ನಿರ್ದೋಷಿಗಳೆಂದೋ ತೀರ್ಮಾನಿಸುತ್ತದೆ.


ಪೌಲನ ಕೈಗೆ ಸುತ್ತಿಕೊಂಡಿದ್ದ ಆ ಹಾವನ್ನು ಅಲ್ಲಿನ ಜನರು ನೋಡಿ, “ಇವನು ಕೊಲೆಗಾರನೇ ಸರಿ! ಇವನು ಸಮುದ್ರದಲ್ಲಿ ಸಾಯದಿದ್ದರೂ ಇವನು ಬದುಕುವುದು ನ್ಯಾಯಕ್ಕೆ ಇಷ್ಟವಿಲ್ಲ” ಎಂದು ಹೇಳಿದರು.


ನೀನೂ ನಾನೂ ಅಪರಾಧಿಗಳಾಗಿದ್ದೇವೆ. ನಾವು ತಪ್ಪು ಮಾಡಿದ್ದರಿಂದ ಶಿಕ್ಷಿಸಲ್ಪಡಬೇಕು. ಆದರೆ ಈ ಮನುಷ್ಯನು (ಯೇಸು) ಯಾವ ತಪ್ಪನ್ನೂ ಮಾಡಲಿಲ್ಲ!” ಎಂದು ಹೇಳಿದನು.


ನಾನು ದುಷ್ಟನಿಗೆ, ‘ನೀನು ಸಾಯುವೆ’ ಎಂದು ಹೇಳುವಾಗ, ನೀನು ಅವನನ್ನು ಎಚ್ಚರಿಸಬೇಕು. ಅವನು ತನ್ನ ಪ್ರಾಣವನ್ನು ರಕ್ಷಿಸಿಕೊಳ್ಳುವದಕ್ಕಾಗಿ ತನ್ನ ಜೀವಿತವನ್ನು ಮಾರ್ಪಡಿಸಿಕೊಂಡು ದುಷ್ಕೃತ್ಯ ನಿಲ್ಲಿಸಬೇಕೆಂದು ನೀನು ಅವನಿಗೆ ಹೇಳಬೇಕು. ನೀನು ಅವನನ್ನು ಎಚ್ಚರಿಸದಿದ್ದರೆ ಅವನು ತನ್ನ ಪಾಪದ ದೆಸೆಯಿಂದ ಸಾಯುವನು. ಆದರೆ ಅವನ ಮರಣಕ್ಕೆ ನಾನು ನಿನ್ನನ್ನೇ ಹೊಣೆಗಾರನನ್ನಾಗಿ ಮಾಡುತ್ತೇನೆ.


ಅದಕ್ಕೆ ಯೆಹೋವನು, “ನೀನು ಮಾಡಿದ್ದೇನು? ನೀನು ನಿನ್ನ ತಮ್ಮನನ್ನೇ ಕೊಲೆಮಾಡಿದೆ! ಅವನ ರಕ್ತವು ಭೂಮಿಯ ಕಡೆಯಿಂದ ನನ್ನನ್ನು ಕೂಗುತಿದೆ.


ಯೋಸೇಫನು ತನ್ನ ಸಹೋದರರೊಂದಿಗೆ ಭಾಷಾಂತರಕಾರನ ಮೂಲಕ ಮಾತಾಡುತ್ತಿದ್ದನು. ಆದ್ದರಿಂದ ಆ ಸಹೋದರರು ತಮ್ಮ ಭಾಷೆ ಯೋಸೇಫನಿಗೆ ಅರ್ಥವಾಗುವುದಿಲ್ಲವೆಂದು ತಿಳಿದುಕೊಂಡಿದ್ದರು. ಆದರೆ ಯೋಸೇಫನಿಗೆ ಅವರ ಮಾತುಗಳೆಲ್ಲಾ ಅರ್ಥವಾಯಿತು.


ಯೋಸೇಫನು ತನ್ನ ಸಹೋದರರಿಗೆ, “ನಾನು ನಿಮ್ಮ ತಮ್ಮನಾದ ಯೋಸೇಫ. ನನ್ನ ತಂದೆ ಚೆನ್ನಾಗಿದ್ದಾನೆಯೇ?” ಎಂದು ಕೇಳಿದನು. ಆದರೆ ಸಹೋದರರು ಅವನಿಗೆ ಉತ್ತರಿಸಲಿಲ್ಲ. ಅವರಿಗೆ ಭಯವಾಗಿತ್ತು ಮತ್ತು ಗಲಿಬಿಲಿಗೊಂಡಿದ್ದರು.


ಯಾಕೋಬನು ಸತ್ತಮೇಲೆ, ಯೋಸೇಫನ ಸಹೋದರರು ಕಳವಳಗೊಂಡರು. ಅವರು “ನಾವು ಮಾಡಿದ ಕಾರ್ಯಕ್ಕೆ ಯೋಸೇಫನು ಇನ್ನು ಮೇಲೆ ನಮ್ಮನ್ನು ದ್ವೇಷಿಸುವನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.


ಯೋನಾತಾನನು ತನ್ನ ತಂದೆಯಾದ ಸೌಲನೊಂದಿಗೆ ಮಾತನಾಡಿದನು. ಯೋನಾತಾನನು ದಾವೀದನ ಬಗ್ಗೆ ಒಳ್ಳೆಯ ಸಂಗತಿಗಳನ್ನು ತಿಳಿಸಿದನು. ಯೋನಾತಾನನು, “ನೀನು ರಾಜ. ದಾವೀದನು ನಿನ್ನ ಸೇವಕ. ದಾವೀದನು ನಿನಗೆ ಯಾವ ಕೇಡನ್ನೂ ಮಾಡಿಲ್ಲ. ಆದ್ದರಿಂದ ಅವನಿಗೆ ಯಾವ ಕೇಡನ್ನೂ ಮಾಡಬೇಡ. ದಾವೀದನು ನಿನಗೆ ಯಾವಾಗಲೂ ಒಳ್ಳೆಯವನಾಗಿಯೇ ಇದ್ದಾನೆ.


ಅವರನ್ನು ಕೊಂದ ಅಪರಾಧವು ಯೋವಾಬನ ಮೇಲೆಯೂ ಅವನ ಕುಟುಂಬದ ಮೇಲೆಯೂ ಶಾಶ್ವತವಾಗಿರಲಿ. ಆದರೆ ದಾವೀದನನ್ನೂ ಅವನ ಸಂತತಿಯವರನ್ನೂ ಅವನ ಸಿಂಹಾಸನವನ್ನೂ ಯೆಹೋವನು ಶಾಶ್ವತವಾಗಿ ಆಶೀರ್ವದಿಸಲಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು