ಆದಿಕಾಂಡ 42:24 - ಪರಿಶುದ್ದ ಬೈಬಲ್24 ಅವರ ಮಾತುಗಳಿಂದ ಅವನಿಗೆ ತುಂಬ ದುಃಖವಾಯಿತು. ಆದ್ದರಿಂದ ಯೋಸೇಫನು ಅವರ ಬಳಿಯಿಂದ ಸ್ವಲ್ಪದೂರ ಹೋಗಿ ಕಣ್ಣೀರು ಸುರಿಸಿ ಹಿಂತಿರುಗಿ ಬಂದನು. ಬಳಿಕ ಸಹೋದರರಲ್ಲಿ ಒಬ್ಬನಾದ ಸಿಮೆಯೋನನನ್ನು ಅವರ ಕಣ್ಣೆದುರಿನಲ್ಲೇ ಬಂಧಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೋಸೇಫನಾದರೋ ಅವರ ಬಳಿಯಿಂದ ಹೊರಟು ಹೋಗಿ ಅತ್ತನು. ತರುವಾಯ ಅವರ ಬಳಿಗೆ ಹಿಂತಿರುಗಿ ಬಂದು ಅವರ ಸಂಗಡ ಮಾತನಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಿಗೆ ಅವನಿಗೆ ಬೇಡಿಗಳನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಜೋಸೆಫನಾದರೋ ಅವರ ಬಳಿಯಿಂದ ಮರೆಯಾಗಿ ಹೋಗಿ ಕಣ್ಣೀರು ಸುರಿಸಿದ. ತರುವಾಯ ಅವರ ಬಳಿಗೆ ಬಂದು, ಸಂಭಾಷಣೆ ಮುಂದುವರೆಸಿ, ಸಿಮೆಯೋನನನ್ನು ಆರಿಸಿ, ಅವರ ಕಣ್ಣೆದುರಿನಲ್ಲೇ ಅವನಿಗೆ ಬೇಡಿಹಾಕಿಸಿದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೋಸೇಫನಾದರೋ ಅವರ ಬಳಿಯಿಂದ ಒಂದು ಕಡೆಗೆ ಹೋಗಿ ಕಣ್ಣೀರು ಸುರಿಸಿದನು. ತರುವಾಯ ಅವರ ಬಳಿಗೆ ತಿರಿಗಿ ಬಂದು ಅವರ ಸಂಗಡ ಮಾತಾಡಿ ಅವರೊಳಗೆ ಸಿಮೆಯೋನನನ್ನು ಹಿಡಿಸಿ ಅವರ ಕಣ್ಣೆದುರಾಗಿ ಅವನಿಗೆ ಬೇಡಿಗಳನ್ನು ಹಾಕಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಅನಂತರ ಯೋಸೇಫನು ಅವರ ಬಳಿಯಿಂದ ಹೊರಟುಹೋಗಿ ಅತ್ತನು. ಮತ್ತೆ ಅವರ ಬಳಿಗೆ ಬಂದು, ಅವರ ಸಂಗಡ ಮಾತನಾಡಿ ಅವರೊಂದಿಗೆ ಸಿಮೆಯೋನನನ್ನು ತಂದು, ಅವರ ಕಣ್ಣೆದುರಿನಲ್ಲಿ ಬಂಧಿಸಿ ಸೆರೆಯಲ್ಲಿ ಹಾಕಿದನು. ಅಧ್ಯಾಯವನ್ನು ನೋಡಿ |