ಆದಿಕಾಂಡ 42:28 - ಪರಿಶುದ್ದ ಬೈಬಲ್28 ಅವನು ತನ್ನ ಉಳಿದ ಸಹೋದರರಿಗೆ, “ನೋಡಿ, ನಾನು ದವಸಧಾನ್ಯಗಳಿಗೆ ಕೊಟ್ಟ ಹಣ ಇಲ್ಲೇ ಇದೆ. ಯಾರೋ ಒಬ್ಬನು ಹಣವನ್ನು ಮತ್ತೆ ನನ್ನ ಚೀಲದಲ್ಲಿ ಇಟ್ಟಿರುವನು” ಎಂದು ಹೇಳಿದನು. ಸಹೋದರರಿಗೆ ತುಂಬ ಭಯವಾಯಿತು. ಅವರು ಒಬ್ಬರಿಗೊಬ್ಬರು, “ದೇವರು ನಮಗೆ ಮಾಡುತ್ತಿರುವುದೇನು?” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ತನ್ನ ಅಣ್ಣತಮ್ಮಂದಿರಿಗೆ, “ನಾನು ಕೊಟ್ಟ ಹಣವು ಹಿಂದಕ್ಕೆ ಬಂದಿದೆ. ಇಗೋ, ಅದು ನನ್ನ ಚೀಲದಲ್ಲಿದೆ” ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ, “ದೇವರು ನಮಗೆ ಹೀಗೆ ಮಾಡಿದ್ದೇನು?” ಎಂದು ಅಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 “ನಾನು ಕೊಟ್ಟ ಹಣ ನನಗೆ ವಾಪಸ್ಸಾಗಿದೆ; ಇಗೋ, ನನ್ನ ಚೀಲದಲ್ಲಿದೆ,” ಎಂದು ತನ್ನ ಅಣ್ಣತಮ್ಮಂದಿರಿಗೆ ಹೇಳಿದ. ಅವರು ಕಕ್ಕಾಬಿಕ್ಕಿಯಾಗಿ, ಒಬ್ಬರನ್ನೊಬ್ಬರು ಬೆರಗಿನಿಂದ ನೋಡುತ್ತಾ, “ನಮಗೇಕೆ ದೇವರು ಹೀಗೆ ಮಾಡಿದ್ದಾರೆ?” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು ಅಣ್ಣತಮ್ಮಂದಿರಿಗೆ - ನಾನು ಕೊಟ್ಟ ಹಣವು ಹಿಂದಕ್ಕೆ ಬಂದದೆ; ಇಗೋ, ನನ್ನ ಚೀಲದಲ್ಲಿದೆ ಎಂದು ಹೇಳಲು ಅವರು ಧೈರ್ಯಗೆಟ್ಟು ನಡುಗುತ್ತಾ ಒಬ್ಬರನ್ನೊಬ್ಬರು ನೋಡಿ - ದೇವರು ನಮಗೆ ಮಾಡಿದ್ದು ಇದೇನು ಅಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅವನು ತನ್ನ ಸಹೋದರರಿಗೆ, “ನನ್ನ ಹಣವನ್ನು ಹಿಂದಕ್ಕೆ ಕೊಟ್ಟಿದ್ದಾರೆ, ಅದು ನನ್ನ ಚೀಲದಲ್ಲಿದೆ,” ಎಂದು ಹೇಳಿದ. ಅವರಿಗೆ ಹೃದಯ ಕಂಪನವಾದಂತಾಗಿ ಹೆದರಿ ಒಬ್ಬರಿಗೊಬ್ಬರು, “ದೇವರು ನಮಗೆ ಮಾಡಿದ್ದೇನು?” ಎಂದರು. ಅಧ್ಯಾಯವನ್ನು ನೋಡಿ |