Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:3 - ಪರಿಶುದ್ದ ಬೈಬಲ್‌

3 ಆದ್ದರಿಂದ ಯೋಸೇಫನ ಹತ್ತು ಮಂದಿ ಸಹೋದರರು ದವಸಧಾನ್ಯಗಳನ್ನು ಕೊಂಡುಕೊಳ್ಳಲು ಈಜಿಪ್ಟಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ಖರೀದಿಸಿಕೊಂಡು ತರುವುದಕ್ಕಾಗಿ ಐಗುಪ್ತ ದೇಶಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಜೋಸೆಫನ ಹತ್ತುಮಂದಿ ಅಣ್ಣಂದಿರು ಧಾನ್ಯವನ್ನು ತರುವುದಕ್ಕಾಗಿ ಈಜಿಪ್ಟ್ ದೇಶಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೋಸೇಫನ ಹತ್ತು ಮಂದಿ ಅಣ್ಣಂದಿರು ಧಾನ್ಯವನ್ನು ತರುವದಕ್ಕೋಸ್ಕರ ಐಗುಪ್ತದೇಶಕ್ಕೆ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೋಸೇಫನ ಹತ್ತು ಮಂದಿ ಸಹೋದರರು ಈಜಿಪ್ಟಿನಲ್ಲಿ ಧಾನ್ಯವನ್ನು ಕೊಂಡುಕೊಳ್ಳುವುದಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:3
4 ತಿಳಿವುಗಳ ಹೋಲಿಕೆ  

ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.


ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.


ಈಜಿಪ್ಟಿನಲ್ಲಿ ದವಸಧಾನ್ಯಗಳಿರುವುದಾಗಿ ನಾನು ಕೇಳಿದ್ದೇನೆ. ಆದ್ದರಿಂದ ನಾವು ಅಲ್ಲಿಗೆ ಹೋಗಿ ನಮ್ಮ ಆಹಾರವನ್ನು ಕೊಂಡುಕೊಳ್ಳೋಣ. ಆಗ ನಾವು ಸಾಯದೆ ಬದುಕಿಕೊಳ್ಳುವೆವು” ಎಂದು ಹೇಳಿದನು.


ಯಾಕೋಬನು ಬೆನ್ಯಾಮೀನನನ್ನು ಕಳುಹಿಸಲಿಲ್ಲ. (ಬೆನ್ಯಾಮೀನನು ಯೋಸೇಫನ ಒಡಹುಟ್ಟಿದ ಒಬ್ಬನೇ ತಮ್ಮನಾಗಿದ್ದನು.) ಬೆನ್ಯಾಮೀನನಿಗೆ ಏನಾದರೂ ಕೇಡಾಗಬಹುದೆಂಬ ಭಯ ಯಾಕೋಬನಿಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು