ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು.
ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು.
ಈ ಸಲ ಎರಡರಷ್ಟು ಹಣವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ. ಕಳೆದ ಸಲ ನೀವು ಪಾವತಿ ಮಾಡಿದ್ದರೂ ಹಿಂತಿರುಗಿಸಲಾದ ಹಣವನ್ನು ತೆಗೆದುಕೊಂಡು ಹೋಗಿ. ಒಂದುವೇಳೆ ರಾಜ್ಯಪಾಲನು ತಪ್ಪು ಮಾಡಿದ್ದಿರಬೇಕು.
ಬಳಿಕ ಯೋಸೇಫನು ತನ್ನ ಸೇವಕನಿಗೆ ಆಜ್ಞೆಮಾಡಿದನು. ಯೋಸೇಫನು, “ಈ ಜನರು ತೆಗೆದುಕೊಂಡು ಹೋಗಬಹುದಾದಷ್ಟು ದವಸಧಾನ್ಯಗಳನ್ನು ಇವರ ಚೀಲಗಳಲ್ಲಿ ತುಂಬಿ ಪ್ರತಿಯೊಬ್ಬನ ಹಣವನ್ನೂ ಧಾನ್ಯದೊಂದಿಗೆ ಚೀಲದಲ್ಲಿಡು.