Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:37 - ಪರಿಶುದ್ದ ಬೈಬಲ್‌

37 ರೂಬೇನನು ತನ್ನ ತಂದೆಗೆ, “ಅಪ್ಪಾ, ನಾನು ಬೆನ್ಯಾಮೀನನನ್ನು ಕರೆದುಕೊಂಡು ಬರದಿದ್ದರೆ ನೀನು ನನ್ನ ಇಬ್ಬರು ಗಂಡುಮಕ್ಕಳನ್ನು ಕೊಲ್ಲಬಹುದು. ನನ್ನನ್ನು ನಂಬು. ನಾನು ಬೆನ್ಯಾಮೀನನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವೆನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ರೂಬೇನನು ತನ್ನ ತಂದೆಗೆ, “ನಾನು ಈ ಹುಡುಗನನ್ನು ತಿರುಗಿ ತಂದು ಒಪ್ಪಿಸದೆ ಹೋದರೆ ನನ್ನ ಇಬ್ಬರು ಗಂಡುಮಕ್ಕಳನ್ನು ಕೊಂದು ಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರೆದುಕೊಂಡು ಬರುತ್ತೇನೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದಕ್ಕೆ ರೂಬೇನನು, “ನಾನು ಈ ಹುಡುಗನನ್ನು ನಿಮಗೆ ಪುನಃ ತಂದೊಪ್ಪಿಸುತ್ತೇನೆ; ಇಲ್ಲದೆಹೋದರೆ ನನ್ನಿಬ್ಬರು ಗಂಡುಮಕ್ಕಳನ್ನು ಕೊಂದುಹಾಕಬಹುದು. ಇವನನ್ನು ನನ್ನ ವಶಕ್ಕೆ ಕೊಡಿ, ನಾನು ತಪ್ಪದೆ ಇವನನ್ನು ನಿಮ್ಮ ಬಳಿಗೆ ಕರೆದುಕೊಂಡು ಬರುತ್ತೇನೆ,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ನಾನು ಈ ಹುಡುಗನನ್ನು ತಿರಿಗಿ ತಂದು ಒಪ್ಪಿಸದೆ ಹೋದರೆ ನನ್ನಿಬ್ಬರು ಗಂಡು ಮಕ್ಕಳನ್ನು ಕೊಂದು ಹಾಕಬಹುದು; ಇವನನ್ನು ನನ್ನ ವಶಕ್ಕೆ ಕೊಟ್ಟರೆ ನಾನು ತಪ್ಪದೆ ಇವನನ್ನು ನಿನ್ನ ಬಳಿಗೆ ಕರಕೊಂಡು ಬರುತ್ತೇನೆ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ರೂಬೇನನು ತನ್ನ ತಂದೆಗೆ, “ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ, ನನ್ನ ಇಬ್ಬರು ಪುತ್ರರನ್ನು ಕೊಂದುಬಿಡು. ನೀನು ಬೆನ್ಯಾಮೀನನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರುಗಿ ತರುವೆನು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:37
6 ತಿಳಿವುಗಳ ಹೋಲಿಕೆ  

ದೇವರಾದ ಯೆಹೋವನು ಒಂದು ಸಾವಿರ ಟಗರು, ಹತ್ತುಸಾವಿರ ಎಣ್ಣೆಯ ಹೊಳೆಗಳಲ್ಲಿ ಸಂತೋಷಿಸುವನೋ? ನಾನು ಮಾಡಿದ ತಪ್ಪಿನ ಪರಿಹಾರಕ್ಕಾಗಿ ನನ್ನ ಚೊಚ್ಚಲ ಮಗನನ್ನು ಸಮರ್ಪಿಸಲೋ? ನನ್ನ ಶರೀರದಿಂದ ಬಂದ ಮಗನನ್ನು ನನ್ನ ಪಾಪಗಳಿಗಾಗಿ ಸಮರ್ಪಿಸಲೋ?


ರೂಬೇನನ ಮಕ್ಕಳು: ಹನೋಕ್, ಫಲ್ಲೂ, ಹೆಚ್ರೋನ್ ಮತ್ತು ಕರ್ಮೀ.


ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು.


ಯಾಕೋಬನು ಅವರಿಗೆ, “ನಾನು ನನ್ನ ಮಕ್ಕಳನ್ನೆಲ್ಲ ಕಳೆದುಕೊಳ್ಳಬೇಕೆಂಬುದು ನಿಮಗೆ ಇಷ್ಟವೇ? ಯೋಸೇಫನು ಇಲ್ಲವಾದನು. ಸಿಮೆಯೋನನೂ ಇಲ್ಲವಾದನು. ಈಗ ಬೆನ್ಯಾಮೀನನನ್ನು ತೆಗೆದುಕೊಂಡು ಹೋಗಬೇಕೆಂದಿರುವಿರಿ” ಎಂದು ಹೇಳಿದನು.


ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು