Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:38 - ಪರಿಶುದ್ದ ಬೈಬಲ್‌

38 ಯಾಕೋಬನು, “ನಾನು ನಿಮ್ಮೊಂದಿಗೆ ಬೆನ್ಯಾಮೀನನನ್ನು ಕಳುಹಿಸಿಕೊಡುವುದಿಲ್ಲ. ಅವನ ಸಹೋದರನು ಸತ್ತುಹೋದನು; ನನ್ನ ಹೆಂಡತಿಯಾದ ರಾಹೇಲಳಲ್ಲಿ ಹುಟ್ಟಿದ ಗಂಡುಮಕ್ಕಳಲ್ಲಿ ಇವನೊಬ್ಬನೇ ಉಳಿದಿರುವುದು. ಈಜಿಪ್ಟಿಗೆ ಪ್ರಯಾಣ ಮಾಡುವಾಗ ಇವನಿಗೆ ಅಪಾಯ ಸಂಭವಿಸಿದರೆ ವಯಸ್ಸಾದ ನಾನು ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣವಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಆದರೆ ಯಾಕೋಬನು ಅವರಿಗೆ, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದವನು ಸತ್ತು ಹೋದನು. ಇವನೊಬ್ಬನೇ ಉಳಿದಿದ್ದಾನೆ. ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿ ತಲೆ ದುಃಖದಿಂದಲೇ ಸಮಾಧಿಗೆ ಸೇರಲು ನೀವು ಕಾರಣರಾಗುವಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಆದರೆ ಯಾಕೋಬನು ಅವರಿಗೆ - ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಇವನ ಒಡಹುಟ್ಟಿದವನು ಸತ್ತು ಹೋದನು; ಇವನೊಬ್ಬನೇ ಉಳಿದಿದ್ದಾನೆ; ಮಾರ್ಗದಲ್ಲಿ ಇವನಿಗೇನಾದರೂ ಕೇಡಾದರೆ ಈ ಮುದಿತಲೆ ದುಃಖದಿಂದಲೇ ಪಾತಾಳಕ್ಕೆ ಸೇರಲು ನೀವು ಕಾರಣವಾಗುವಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಆದರೆ ಯಾಕೋಬನು, “ನನ್ನ ಮಗನು ನಿಮ್ಮ ಸಂಗಡ ಹೋಗಬಾರದು, ಅವನ ಅಣ್ಣ ಸತ್ತು ಹೋಗಿ, ಇವನೊಬ್ಬನೇ ಉಳಿದಿದ್ದಾನೆ. ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ, ನನ್ನ ಮುದಿ ತಲೆಯನ್ನು ದುಃಖದಿಂದ ಸಮಾಧಿಗೆ ಇಳಿಸುವಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:38
20 ತಿಳಿವುಗಳ ಹೋಲಿಕೆ  

ಯಾಕೋಬನ ಗಂಡುಮಕ್ಕಳು ಮತ್ತು ಹೆಣ್ಣುಮಕ್ಕಳು ಎಷ್ಟೇ ಸಂತೈಸಿದರೂ ಯಾಕೋಬನಿಗೆ ಆದರಣೆಯಾಗಲಿಲ್ಲ. ಯಾಕೋಬನು ಅವರಿಗೆ, “ನಾನು ಸಾಯುವ ತನಕ ನನ್ನ ಮಗನಿಗಾಗಿ ದುಃಖಪಡುವೆ” ಎಂದು ಹೇಳಿ ದುಃಖಿಸುತ್ತಲೇ ಇದ್ದನು.


ಯಾಕೋಬನು ಬೆನ್ಯಾಮೀನನನ್ನು ಕಳುಹಿಸಲಿಲ್ಲ. (ಬೆನ್ಯಾಮೀನನು ಯೋಸೇಫನ ಒಡಹುಟ್ಟಿದ ಒಬ್ಬನೇ ತಮ್ಮನಾಗಿದ್ದನು.) ಬೆನ್ಯಾಮೀನನಿಗೆ ಏನಾದರೂ ಕೇಡಾಗಬಹುದೆಂಬ ಭಯ ಯಾಕೋಬನಿಗಿತ್ತು.


ತಂದೆಯು ಆ ನಿಲುವಂಗಿಯನ್ನು ನೋಡಿ ಅದನ್ನು ಗುರುತಿಸಿ, “ಹೌದು, ಇದು ಯೋಸೇಫನದೇ. ಯಾವುದೋ ಕ್ರೂರ ಪ್ರಾಣಿಯ ಬಾಯಿಗೆ ತುತ್ತಾದನು” ಎಂದು ಹೇಳಿ


ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.


ನೀವು ಹುಟ್ಟಿದಾಗ ನಾನು ನಿಮ್ಮನ್ನು ಹೊತ್ತುಕೊಂಡೆನು. ನೀವು ಮುದುಕರಾಗುವಾಗಲೂ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು. ನಿಮ್ಮ ತಲೆಕೂದಲು ನರೆತಾಗಲೂ ನಾನು ನಿಮ್ಮನ್ನು ಹೊರುವೆನು; ಯಾಕೆಂದರೆ ನಾನು ನಿಮ್ಮನ್ನು ಸೃಷ್ಟಿಸಿದೆನು. ಆದ್ದರಿಂದ ನಾನು ನಿಮ್ಮನ್ನು ಹೊತ್ತುಕೊಳ್ಳುವೆನು, ನಿಮ್ಮನ್ನು ರಕ್ಷಿಸುವೆನು.”


ನಾನು ವೃದ್ಧನಾಗುವ ತನಕ ಬದುಕುವೆನೆಂದು ನಾನು ನನ್ನೊಳಗೆ ಅಂದುಕೊಂಡಿದ್ದೆನು. ಆದರೆ ನಾನು ಮರಣದ್ವಾರದ ಮೂಲಕ ಹೋಗುವ ಸಮಯ ಬಂತು. ನನ್ನ ಜೀವಮಾನವೆಲ್ಲ ಅಲ್ಲಿ ಕಳೆಯುವೆನು.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ಈ ಲೋಕದ ಕೆಲಸಗಳನ್ನೆಲ್ಲ ನೋಡಿದಾಗ ಅವೆಲ್ಲ ಕೇವಲ ವ್ಯರ್ಥವೆಂದು ಕಂಡುಕೊಂಡೆನು. ಅವು ಗಾಳಿಯನ್ನು ಹಿಡಿಯಲು ಪ್ರಯತ್ನಿಸಿದಷ್ಟೇ ವ್ಯರ್ಥವಾಗಿವೆ.


ನಮ್ಮ ಆಯುಷ್ಕಾಲವು ಎಪ್ಪತ್ತು ವರ್ಷ; ಬಲಹೆಚ್ಚಿದರೆ ಎಂಭತ್ತು ವರ್ಷ. ಕಷ್ಟಸಂಕಟಗಳೇ ಅದರ ಆಡಂಬರ. ಬಹುಬೇಗನೆ ನಮ್ಮ ಜೀವಿತಗಳು ಕೊನೆಗೊಳ್ಳುತ್ತವೆ! ನಾವು ಹಾರಿ ಹೋಗುತ್ತೇವೆ.


ನಾನು ವೃದ್ಧನಾಗಿರುವೆ; ನನ್ನ ಕೂದಲೂ ನರೆತುಹೋಗಿದೆ. ನನ್ನ ದೇವರೇ, ನನ್ನನ್ನು ಕೈಬಿಡಬೇಡ. ನಿನ್ನ ಬಲವನ್ನೂ ಪ್ರತಾಪವನ್ನೂ ಮುಂದಿನ ತಲೆಮಾರುಗಳವರಿಗೆಲ್ಲಾ ಪ್ರಕಟಿಸುವೆನು.


ಆದರೆ ಈಗ ನೀನು ರಾಜನಾಗಿರುವೆ. ಆದ್ದರಿಂದ ನಿನ್ನ ಜ್ಞಾನಕ್ಕೆ ಸರಿತೋಚಿದ ರೀತಿಯಲ್ಲಿ ನೀನು ಅವನನ್ನು ದಂಡಿಸು. ಆದರೆ ನೀನು ಅವನನ್ನು ಖಂಡಿತವಾಗಿ ಕೊಲ್ಲಲೇಬೇಕು. ಅವನು ಮುದಿತನದಲ್ಲಿ ಸಮಾಧಾನದಿಂದ ಸಾಯಲು ಬಿಡಬೇಡ!”


ನಾವು ನಿಮಗೆ, ‘ನಮಗೆ ಒಬ್ಬ ತಂದೆಯಿದ್ದಾನೆ, ಅವನು ವೃದ್ಧನಾಗಿದ್ದಾನೆ; ನಮಗೆ ಪ್ರಾಯದ ತಮ್ಮನಿದ್ದಾನೆ, ನಮ್ಮ ತಂದೆಗೆ ತುಂಬ ವಯಸ್ಸಾಗಿದ್ದಾಗ ಅವನು ಹುಟ್ಟಿದ್ದರಿಂದ ನಮ್ಮ ತಂದೆಯು ಅವನನ್ನು ಪ್ರೀತಿಸುತ್ತಾನೆ. ಆ ಕಿರಿಯ ಮಗನ ಸಹೋದರನು ಸತ್ತುಹೋದನು. ಆದ್ದರಿಂದ ಆ ತಾಯಿಯಲ್ಲಿ ಹುಟ್ಟಿದವರಲ್ಲಿ ಇವನೊಬ್ಬನೇ ಉಳಿದಿದ್ದಾನೆ. ನಮ್ಮ ತಂದೆಯು ಅವನನ್ನು ತುಂಬಾ ಪ್ರೀತಿಸುವನು’ ಎಂದು ಹೇಳಿದೆವು.


ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡು ಬಹುದಿನಗಳವರೆಗೆ ದುಃಖಪಟ್ಟನು.


ರೂಬೇನನು ತನ್ನ ತಂದೆಗೆ, “ಅಪ್ಪಾ, ನಾನು ಬೆನ್ಯಾಮೀನನನ್ನು ಕರೆದುಕೊಂಡು ಬರದಿದ್ದರೆ ನೀನು ನನ್ನ ಇಬ್ಬರು ಗಂಡುಮಕ್ಕಳನ್ನು ಕೊಲ್ಲಬಹುದು. ನನ್ನನ್ನು ನಂಬು. ನಾನು ಬೆನ್ಯಾಮೀನನನ್ನು ನಿನ್ನ ಬಳಿಗೆ ಕರೆದುಕೊಂಡು ಬರುವೆನು” ಎಂದು ಹೇಳಿದನು.


ಬೆನ್ಯಾಮೀನನನ್ನು ಕರೆದುಕೊಂಡು ಆ ಮನುಷ್ಯನ ಬಳಿಗೆ ಹಿಂತಿರುಗಿ ಹೋಗಿರಿ.


ನಾವು ನಿಮಗೆ ‘ಆ ಯುವಕನು ಬರಲಾರನು. ಅವನು ತನ್ನ ತಂದೆಯನ್ನು ಬಿಟ್ಟುಬರಲಾಗದು. ಅವನ ತಂದೆ ಅವನನ್ನು ಕಳೆದುಕೊಂಡರೆ ತುಂಬ ದುಃಖದಿಂದ ಸತ್ತುಹೋಗುವನು’ ಎಂದು ಹೇಳಿದೆವು.


ಅದು ಈಜುವಾಗ ಅದರ ಹಿಂದೆ ಒಂದು ದಾರಿಯೇ ನಿರ್ಮಿತವಾಗುವುದು. ಅದು ನೀರನ್ನು ಕಲಕಿ ತನ್ನ ಹಿಂದೆ ಬಿಳಿ ನೊರೆಯನ್ನು ಉಂಟುಮಾಡುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು