Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 42:6 - ಪರಿಶುದ್ದ ಬೈಬಲ್‌

6 ಯೋಸೇಫನು ಈಜಿಪ್ಟಿನ ರಾಜ್ಯಪಾಲನಾಗಿದ್ದರಿಂದ ಅವನ ಅನುಮತಿಯಿಲ್ಲದೆ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಯಾರಿಗೂ ಸಾಧ್ಯವಿರಲಿಲ್ಲ. ಯೋಸೇಫನ ಸಹೋದರರು ಬಂದು ಅವನ ಮುಂದೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಐಗುಪ್ತ ದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರುವವನು ಯೋಸೇಫನೇ ಆಗಿದ್ದನು. ಹೀಗಿರುವುದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆಗ ಈಜಿಪ್ಟ್ ದೇಶದಲ್ಲಿ ಅಧಿಕಾರ ನಡೆಸುತ್ತಿದ್ದವನು ಹಾಗೂ ಜನರಿಗೆ ದವಸಧಾನ್ಯ ಮಾರಾಟ ಮಾಡಿಸುತ್ತಿದ್ದವನು ಜೋಸೆಫನೇ. ಇಂತಿರಲು ಅವನ ಅಣ್ಣಂದಿರು ಬಂದು ಅವನ ಮುಂದೆ ನೆಲದವರೆಗೂ ಬಾಗಿ ನಮಸ್ಕರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಐಗುಪ್ತದೇಶದ ಮೇಲೆ ಅಧಿಕಾರವನ್ನು ನಡಿಸಿ ಜನರಿಗೆ ಧಾನ್ಯವನ್ನು ಮಾರಿಸುವವನು ಯೋಸೇಫನೇ. ಹೀಗಿರುವದರಿಂದ ಅವನ ಅಣ್ಣಂದಿರು ಬಂದು ಅವನ ಮುಂದೆಯೇ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ಯೋಸೇಫನು ದೇಶದ ಮೇಲೆಲ್ಲಾ ಅಧಿಪತಿಯಾಗಿದ್ದನು. ದೇಶದ ಜನರಿಗೆಲ್ಲಾ ಧಾನ್ಯವನ್ನು ಮಾರುವವನು ಅವನೇ ಆಗಿದ್ದನು. ಹೀಗಿರಲಾಗಿ ಯೋಸೇಫನ ಸಹೋದರರು ಬಂದು, ತಮ್ಮ ಮುಖಗಳನ್ನು ನೆಲದ ಮಟ್ಟಿಗೂ ತಗ್ಗಿಸಿ ಅವನಿಗೆ ಅಡ್ಡಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 42:6
19 ತಿಳಿವುಗಳ ಹೋಲಿಕೆ  

ಆಲಿಸು! ಅಲ್ಲಿ ಸೈತಾನನ ಗುಂಪಿಗೆ ಸೇರಿದವರಿದ್ದಾರೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅದು ಸುಳ್ಳು. ಅವರು ನಿಜವಾದ ಯೆಹೂದ್ಯರಲ್ಲ. ಆ ಜನರು ನಿನ್ನ ಮುಂದೆ ಬಂದು ನಿನ್ನ ಪಾದಗಳಿಗೆ ಅಡ್ಡಬಿದ್ದು ನಮಸ್ಕರಿಸುವಂತೆ ಮಾಡುತ್ತೇನೆ. ನಾನು ಪ್ರೀತಿಸಿದ ಜನರು ನೀವೇ ಎಂಬುದನ್ನು ಆಗ ಅವರು ತಿಳಿದುಕೊಳ್ಳುತ್ತಾರೆ.


ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.


ಸಹೋದರರು ತಮ್ಮ ತಂದೆಗೆ, “ಅಪ್ಪಾ, ಯೋಸೇಫನು ಇನ್ನೂ ಬದುಕಿದ್ದಾನೆ; ಅವನು ಈಜಿಪ್ಟ್ ದೇಶಕ್ಕೆಲ್ಲಾ ರಾಜ್ಯಪಾಲನಾಗಿದ್ದಾನೆ” ಎಂದು ಹೇಳಿದರು. ಅವರ ತಂದೆಗೆ ಆಶ್ಚರ್ಯವಾಯಿತು. ಆತನು ಅವರನ್ನು ನಂಬಲಿಲ್ಲ.


ನನ್ನನ್ನು ಇಲ್ಲಿಗೆ ಕಳುಹಿಸಿದ್ದು ನಿಮ್ಮ ತಪ್ಪಲ್ಲ. ಅದು ದೇವರ ಯೋಜನೆ. ದೇವರು ನನ್ನನ್ನು ಫರೋಹನ ಅತ್ಯುನ್ನತವಾದ ಅಧಿಕಾರಿಯನ್ನಾಗಿ ಮಾಡಿದ್ದಾನೆ. ನಾನು ಅವನ ಮನೆಗೆಲ್ಲಾ ಮತ್ತು ಈಜಿಪ್ಟಿಗೆಲ್ಲಾ ರಾಜ್ಯಪಾಲನಾಗಿದ್ದೇನೆ” ಎಂದು ಹೇಳಿದನು.


ಯೆಹೂದ ಮತ್ತು ಅವನ ಸಹೋದರರು ಯೋಸೇಫನ ಮನೆಗೆ ಹಿಂತಿರುಗಿದಾಗ ಯೋಸೇಫನು ಇನ್ನೂ ಅಲ್ಲೇ ಇದ್ದನು. ಸಹೋದರರು ನೆಲದ ಮೇಲೆ ಬಿದ್ದು ತಲೆಬಾಗಿ ನಮಸ್ಕರಿಸಿದರು.


ಆ ಸಾಯಂಕಾಲ, ದೇವದೂತರಿಬ್ಬರು ಸೊದೋಮ್ ನಗರಕ್ಕೆ ಬಂದರು. ನಗರದ ಬಾಗಿಲುಗಳ ಬಳಿ ಕುಳಿತುಕೊಂಡಿದ್ದ ಲೋಟನು ದೇವದೂತರನ್ನು ಕಂಡು, ಅವರ ಬಳಿಗೆ ಹೋಗಿ ನಮಸ್ಕರಿಸಿದನು.


ಅಬ್ರಹಾಮನು ದೃಷ್ಟಿಸಿ ನೋಡಿದಾಗ ತನ್ನ ಮುಂದೆ ಮೂವರು ಪುರುಷರು ನಿಂತಿರುವುದನ್ನು ಕಂಡನು. ಕೂಡಲೇ ಅವರ ಬಳಿಗೆ ಓಡಿಹೋಗಿ ಅವರಿಗೆ ಸಾಷ್ಟಾಂಗನಮಸ್ಕಾರ ಮಾಡಿ ಅವರಿಗೆ,


ಯಾಕೋಬನು ತಾನೇ ಮುಂದಾಗಿ ಏಸಾವನ ಬಳಿಗೆ ನಡೆದುಹೋಗುತ್ತಾ ಏಳು ಸಲ ನೆಲದ ತನಕ ಬಗ್ಗಿ ನಮಸ್ಕರಿಸಿದನು.


ಫರೋಹನು ಯೋಸೇಫನಿಗೆ ಎರಡನೆಯ ರಾಜರಥವನ್ನು ಸಂಚಾರಕ್ಕಾಗಿ ಕೊಟ್ಟನು. ವಿಶೇಷಕಾವಲುಗಾರರು ಅವನ ರಥದ ಮುಂದೆ ನಡೆದುಹೋಗುತ್ತಾ “ಪ್ರಜೆಗಳೇ, ಯೋಸೇಫನಿಗೆ ತಲೆಬಾಗಿ ನಮಸ್ಕರಿಸಿರಿ” ಎಂದು ಪ್ರಕಟಿಸಿದರು. ಹೀಗೆ ಯೋಸೇಫನು ಈಜಿಪ್ಟಿಗೆಲ್ಲಾ ರಾಜ್ಯಪಾಲನಾದನು.


ಆಗ ಯೋಸೇಫನು ಇಸ್ರೇಲನ ತೊಡೆಯ ಮೇಲೆ ಕುಳಿತಿದ್ದ ತನ್ನ ಗಂಡುಮಕ್ಕಳನ್ನು ಎತ್ತಿಕೊಂಡನು. ಬಳಿಕ ಅವರು ಇಸ್ರೇಲನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.


ಬಾಲಕನು ಹೊರಟುಹೋದನು. ದಾವೀದನು ತಾನು ಅಡಗಿದ್ದ ಬೆಟ್ಟದ ಮತ್ತೊಂದು ಕಡೆಯ ಸ್ಥಳದಿಂದ ಹೊರಬಂದನು. ದಾವೀದನು ಯೋನಾತಾನನ ಮುಂದೆ ಬಂದು ಮೂರು ಸಲ ತನ್ನ ಮುಖವನ್ನು ನೆಲದವರೆಗೂ ಬಗ್ಗಿಸಿ ನಮಸ್ಕರಿಸಿದನು. ನಂತರ ದಾವೀದ ಮತ್ತು ಯೋನಾತಾನರು ಪರಸ್ಪರ ಮುದ್ದಿಟ್ಟರು, ಅವರಿಬ್ಬರೂ ಒಟ್ಟಾಗಿ ಅತ್ತರು. ದಾವೀದನು ಯೋನಾತಾನನಿಗಿಂತ ಹೆಚ್ಚು ಅತ್ತನು.


ಧಾನ್ಯವನ್ನು ಮಾರದೆ ಕೂಡಿಟ್ಟುಕೊಳ್ಳುವವನನ್ನು ಜನರು ಶಪಿಸುವರು. ಧಾನ್ಯ ಮಾರುವವನನ್ನು ಜನರು ಆಶೀರ್ವದಿಸುವರು.


ಹಿಂದಿನ ದಿವಸಗಳಲ್ಲಿ ಜನರು ನಿನಗೆ ಹಿಂಸೆ ಕೊಟ್ಟರು. ಆ ಜನರು ಈಗ ನಿನ್ನ ಮುಂದೆ ಅಡ್ಡಬೀಳುವರು. ಗತಿಸಿದ ದಿವಸಗಳಲ್ಲಿ ಜನರು ನಿನ್ನನ್ನು ದ್ವೇಷಿಸಿದರು. ಆದರೆ ಈಗ ಅವರು ನಿನ್ನ ಕಾಲಿನ ಮುಂದೆ ಬೀಳುವರು. ಅವರು ನಿನ್ನನ್ನು ‘ಯೆಹೋವನ ಪಟ್ಟಣ,’ ‘ಇಸ್ರೇಲಿನ ಪರಿಶುದ್ಧನಾದ ಯೆಹೋವನ ಚೀಯೋನ್’ ಎಂದು ಕರೆಯುವರು.


ಯೋಸೇಫನು ಹೇಳಿದ್ದಂತೆಯೇ ಕ್ಷಾಮದ ಏಳು ವರ್ಷಗಳು ಆರಂಭಗೊಂಡವು. ಕ್ಷಾಮವು ಸುತ್ತಮುತ್ತಲಿನ ಪ್ರದೇಶಗಳಿಗೆಲ್ಲಾ ಹಬ್ಬಿಕೊಂಡಿತು. ಈಜಿಪ್ಟಿನಲ್ಲಿ ಮಾತ್ರ ಆಹಾರ ದೊರಕುತ್ತಿತ್ತು.


ಭೂಲೋಕದಲ್ಲೆಲ್ಲಾ ಕ್ಷಾಮವು ಭಯಂಕರವಾಗಿದ್ದುದರಿಂದ ಎಲ್ಲಾ ದೇಶಗಳವರು ಯೋಸೇಫನಿಂದ ಆಹಾರವನ್ನು ಪಡೆದುಕೊಳ್ಳುವುದಕ್ಕಾಗಿ ಈಜಿಪ್ಟಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು