ಆದಿಕಾಂಡ 42:9 - ಪರಿಶುದ್ದ ಬೈಬಲ್9 ಆಗ ಯೋಸೇಫನು ತನ್ನ ಅಣ್ಣಂದಿರ ಬಗ್ಗೆ ತಾನು ಕಂಡಿದ್ದ ಕನಸುಗಳ ಬಗ್ಗೆ ಜ್ಞಾಪಿಸಿಕೊಂಡು ಅವರಿಗೆ, “ನೀವು ಆಹಾರವನ್ನು ಕೊಂಡುಕೊಳ್ಳಲು ಬಂದಿಲ್ಲ; ನೀವು ಗೂಢಚಾರರು. ನಮ್ಮ ದೇಶದ ದುರ್ಬಲ ಸ್ಥಳಗಳನ್ನು ತಿಳಿದುಕೊಳ್ಳಲು ಬಂದಿರುವಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಯೋಸೇಫನು ಅವರ ವಿಷಯದಲ್ಲಿ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡನು. ಅವರಿಗೆ ಅವನು, “ನೀವು ಗೂಢಚಾರರು. ನಮ್ಮ ದೇಶದ ಭದ್ರತೆಯಿಲ್ಲದ ಸ್ಥಳಗಳನ್ನು ನೋಡುವುದಕ್ಕಾಗಿ ಬಂದವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರ ವಿಷಯವಾಗಿ ತಾನು ಕಂಡಿದ್ದ ಕನಸುಗಳನ್ನು ಜೋಸೆಫನು ನೆನಪಿಗೆ ತಂದುಕೊಂಡನು. ಅವರನ್ನು ನೋಡಿ, “ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ಪತ್ತೆಹಚ್ಚುವುದಕ್ಕಾಗಿ ಬಂದವರು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅವನು ಅವರ ವಿಷಯ ತನಗೆ ಬಿದ್ದ ಕನಸುಗಳನ್ನು ನೆನಪಿಗೆ ತಂದುಕೊಂಡು ಅವರಿಗೆ - ನೀವು ಗೂಢಚಾರರು; ನಮ್ಮ ದೇಶದ ದುರ್ಬಲ ಸ್ಥಳಗಳನ್ನು ನೋಡಿಕೊಳ್ಳುವದಕ್ಕಾಗಿ ಬಂದವರು ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಯೋಸೇಫನು ತನ್ನ ಸಹೋದರರನ್ನು ನೋಡಿ ಅವರನ್ನು ಗುರುತಿಸಿದರೂ ಆಗ ಯೋಸೇಫನು ತಾನು ಅವರ ವಿಷಯದಲ್ಲಿ ಕಂಡ ಕನಸುಗಳನ್ನು ಜ್ಞಾಪಕಮಾಡಿಕೊಂಡು ಅವರಿಗೆ, “ನೀವು ಗೂಢಚಾರರು, ದೇಶದ ಒಳಗುಟ್ಟನ್ನು ನೋಡುವುದಕ್ಕೆ ಬಂದಿದ್ದೀರಿ,” ಎಂದನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಧರ್ಮೋಪದೇಶಕರು ಮತ್ತು ಯಾಜಕರು ಯೇಸುವನ್ನು ಬಂಧಿಸಲು ಸರಿಯಾದ ಸಮಯಕ್ಕಾಗಿ ಕಾಯತೊಡಗಿದರು. ಅವರು ಕೆಲವು ಜನರನ್ನು ಯೇಸುವಿನ ಬಳಿಗೆ ಕಳುಹಿಸಿದರು. ಒಳ್ಳೆಯವರಂತೆ ನಟಿಸಲು ಅವರು ಆ ಜನರಿಗೆ ಹೇಳಿಕೊಟ್ಟಿದ್ದರು. ಅವರು ಯೇಸುವಿನ ಮಾತಿನಲ್ಲಿ ಏನಾದರೂ ತಪ್ಪು ಕಂಡುಹಿಡಿಯಬೇಕೆಂದಿದ್ದರು. (ಅವರು ಏನಾದರೂ ತಪ್ಪು ಕಂಡುಹಿಡಿದರೆ, ಆಗ ಯೇಸುವನ್ನು ಆತನ ಮೇಲೆ ಅಧಿಕಾರವಿದ್ದ ರಾಜ್ಯಪಾಲನಿಗೆ ಒಪ್ಪಿಸಿಕೊಡಬಹುದಾಗಿತ್ತು.)
ನೂನನ ಮಗನಾದ ಯೆಹೋಶುವನು ಮತ್ತು ಎಲ್ಲಾ ಜನರು ಆಕಾಶಿಯಾದಲ್ಲಿ ಬಿಡಾರ ಮಾಡಿದ್ದರು. ಯೆಹೋಶುವನು ಇಬ್ಬರು ಗೂಢಚಾರರನ್ನು ಜೆರಿಕೊ ಪಟ್ಟಣದ ಬಗ್ಗೆ ತಿಳಿದುಕೊಳ್ಳಲು ಕಳುಹಿಸಿದನು. ಈ ಜನರನ್ನು ಯೆಹೋಶುವನು ಕಳುಹಿಸಿದ ಸಂಗತಿ ಬೇರೆ ಯಾರಿಗೂ ತಿಳಿದಿರಲಿಲ್ಲ. “ಹೋಗಿ ಆ ಜೆರಿಕೊ ನಗರವನ್ನು ಬಹಳ ಸೂಕ್ಷ್ಮವಾಗಿ ಪರೀಕ್ಷಿಸಿರಿ” ಎಂದು ಯೆಹೋಶುವನು ಆ ಗೂಢಚಾರರಿಗೆ ಹೇಳಿದ್ದನು. ಅವರಿಬ್ಬರು ಜೆರಿಕೊ ನಗರಕ್ಕೆ ಹೋಗಿ ಒಬ್ಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು. ಆ ಹೆಂಗಸಿನ ಹೆಸರು “ರಾಹಾಬ.”
ಆದರೆ ಅಮ್ಮೋನಿಯರ ನಾಯಕರು ತಮ್ಮ ಪ್ರಭುವಾದ ಹಾನೂನನಿಗೆ, “ನಿನ್ನನ್ನು ಸಂತೈಸಲು ಕೆಲವು ಜನರನ್ನು ಕಳುಹಿಸುವುದರ ಮೂಲಕ ದಾವೀದನು ನಿನ್ನ ತಂದೆಯನ್ನು ಗೌರವಿಸಲು ಪ್ರಯತ್ನಿಸುತ್ತಿರುವನೆಂದು ನೀನು ಭಾವಿಸಿರುತ್ತಿಯಲ್ಲವೇ? ಇಲ್ಲ! ನಿನ್ನ ನಗರದ ಸಂಗತಿಗಳನ್ನು ರಹಸ್ಯವಾಗಿ ಕಂಡುಕೊಳ್ಳಲು ಮತ್ತು ತಿಳಿದುಕೊಳ್ಳಲು ದಾವೀದನು ಈ ಜನರನ್ನು ಕಳುಹಿಸಿದ್ದಾನೆ. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡಲು ಯೋಜನೆ ಮಾಡುತ್ತಿದ್ದಾರೆ” ಎಂದು ಹೇಳಿದರು.