Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:1 - ಪರಿಶುದ್ದ ಬೈಬಲ್‌

1 ಬರಗಾಲವು ದೇಶದಲ್ಲಿ ತುಂಬ ಭೀಕರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಾನಾನ್ ದೇಶದಲ್ಲಿ ಬರವು ಬಹು ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬರವು ಕಾನಾನಿನಲ್ಲಿ ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆ ದೇಶದಲ್ಲಿ ಬರವು ಬಹುಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ದೇಶದಲ್ಲಿ ಬರವು ಘೋರವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:1
11 ತಿಳಿವುಗಳ ಹೋಲಿಕೆ  

ಈ ಕಾಲದಲ್ಲಿ ಭೂಮಿಯು ಒಣಗಿಹೋಗಿತ್ತು; ಮಳೆ ಇರಲಿಲ್ಲ. ಅಲ್ಲಿ ಆಹಾರವನ್ನು ಬೆಳೆಯಲು ಸಾಧ್ಯವಿರಲಿಲ್ಲ. ಆದ್ದರಿಂದ ಅಬ್ರಾಮನು ವಾಸಿಸುವುದಕ್ಕಾಗಿ ಈಜಿಪ್ಟಿಗೆ ಹೋದನು.


ನಮ್ಮ ಚರ್ಮವು ಒಲೆಯಂತೆ ಬಿಸಿಯಾಗಿದೆ. ಹಸಿವೆಯಿಂದಾಗಿ ಜ್ವರವು ನಮ್ಮನ್ನು ಸುಡುತ್ತಿದೆ.


ಕಾನಾನಿನಲ್ಲಿ ಬರಗಾಲ ಭೀಕರವಾಗಿತ್ತು. ಆದ್ದರಿಂದ ದವಸಧಾನ್ಯಗಳನ್ನು ಕೊಂಡುಕೊಳ್ಳಲು ಅನೇಕ ಜನರು ಕಾನಾನಿನಿಂದ ಈಜಿಪ್ಟಿಗೆ ಹೋದರು; ಇಸ್ರೇಲನ ಗಂಡುಮಕ್ಕಳೂ ಅವರೊಂದಿಗೆ ಹೋದರು.


ಆಗ ಯೆಹೋವನು ಅಬ್ರಹಾಮನಿಗೆ, “ನಾನು ಹೇಳುವುದನ್ನು ಸಾರಳು ನಂಬುತ್ತಿಲ್ಲ. ಆಕೆಯು ನಗುತ್ತಾ ತನ್ನೊಳಗೆ, ‘ನನಗೆ ಮಕ್ಕಳಾಗದಷ್ಟು ವಯಸ್ಸಾಗಿದೆ’ ಎಂದು ಹೇಳಿದ್ದೇಕೆ?


ಅಬ್ರಹಾಮನ ಕಾಲದಲ್ಲಿ ಬಂದಿದ್ದ ಕ್ಷಾಮದಂತೆ ಮತ್ತೊಂದು ಕ್ಷಾಮವು ಕಾನಾನ್ ದೇಶಕ್ಕೆ ಬಂದಿತು. ಆದ್ದರಿಂದ ಇಸಾಕನು ಫಿಲಿಷ್ಟಿಯರ ರಾಜನಾದ ಅಬೀಮೆಲೆಕನ ಬಳಿಗೆ ಹೋದನು. ಅಬೀಮೆಲೆಕನು ಗೆರಾರ್ ನಗರದಲ್ಲಿದ್ದನು.


ಅವರು ಈಜಿಪ್ಟಿನಿಂದ ತಂದಿದ್ದ ದವಸಧಾನ್ಯಗಳನ್ನೆಲ್ಲ ಊಟ ಮಾಡಿದರು. ದವಸಧಾನ್ಯಗಳು ಮುಗಿದು ಹೋದಾಗ ಯಾಕೋಬನು, ತನ್ನ ಗಂಡುಮಕ್ಕಳಿಗೆ, “ಈಜಿಪ್ಟಿಗೆ ಮತ್ತೆ ಹೋಗಿ ನಮಗೆ ಊಟಕ್ಕೆ ದವಸಧಾನ್ಯಗಳನ್ನು ಕೊಂಡುಕೊಂಡು ಬನ್ನಿ” ಎಂದು ಹೇಳಿದನು.


ಅವರು ಫರೋಹನಿಗೆ, “ಬರಗಾಲವು ಕಾನಾನ್ ದೇಶದಲ್ಲಿ ತುಂಬ ಘೋರವಾಗಿದೆ. ಯಾವ ಹೊಲದಲ್ಲಿಯೂ ನಮ್ಮ ಪಶುಗಳಿಗೆ ಹುಲ್ಲು ಉಳಿದಿಲ್ಲ. ಆದ್ದರಿಂದ ನಾವು ಈ ದೇಶದಲ್ಲಿ ವಾಸಿಸಲು ಬಂದಿದ್ದೇವೆ. ನಾವು ಗೋಷೆನ್ ಪ್ರಾಂತ್ಯದಲ್ಲಿ ವಾಸಿಸಲು ದಯವಿಟ್ಟು ನಮಗೆ ಅವಕಾಶ ಮಾಡಿಕೊಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ” ಎಂದು ಹೇಳಿದರು.


ಆಗ ನಿಮ್ಮ ದೇವರಾದ ಯೆಹೋವನ ಸನ್ನಿಧಾನದಲ್ಲಿ ನೀವು ಹೀಗೆ ಅರಿಕೆ ಮಾಡಬೇಕು: ‘ನಮ್ಮ ಪೂರ್ವಿಕರು ಊರೂರು ತಿರುಗುತ್ತಿದ್ದ ಅರಾಮ್ಯರಾಗಿದ್ದರು. ಅವರು ಈಜಿಪ್ಟನ್ನು ಸೇರಿ ಅಲ್ಲಿಯೇ ನೆಲೆಸಿದರು. ಅಲ್ಲಿಗೆ ಅವರು ಹೋದಾಗ ಅವರು ಕೆಲವರೇ ಆಗಿದ್ದರು. ಆದರೆ ಕಾಲಕ್ರಮೇಣ ಅವರು ದೊಡ್ಡ ಜನಾಂಗವಾಗಿ ಅಭಿವೃದ್ಧಿ ಹೊಂದಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು