ಆದಿಕಾಂಡ 43:12 - ಪರಿಶುದ್ದ ಬೈಬಲ್12 ಈ ಸಲ ಎರಡರಷ್ಟು ಹಣವನ್ನು ನಿಮ್ಮೊಂದಿಗೆ ತೆಗೆದುಕೊಂಡು ಹೋಗಿ. ಕಳೆದ ಸಲ ನೀವು ಪಾವತಿ ಮಾಡಿದ್ದರೂ ಹಿಂತಿರುಗಿಸಲಾದ ಹಣವನ್ನು ತೆಗೆದುಕೊಂಡು ಹೋಗಿ. ಒಂದುವೇಳೆ ರಾಜ್ಯಪಾಲನು ತಪ್ಪು ಮಾಡಿದ್ದಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಇದ್ದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅದೂ ಅಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳಿಸಿದ ಹಣವನ್ನು ತೆಗೆದುಕೊಂಡು ಹೋಗಿ; ಬಹುಶಃ ಅವರಿಗೆ ತಿಳಿಯದೆ ಅದು ನಿಮ್ಮ ಕೈಗೆ ಬಂದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ; ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನು ತೆಗೆದುಕೊಂಡು ಹೋಗಿರಿ; ಒಂದು ವೇಳೆ ಅದು ಅವರಿಗೆ ತಿಳಿಯದೆ ನಿಮ್ಮ ಕೈಗೆ ಬಂದಿರಬಹುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಇದಲ್ಲದೆ ಎರಡರಷ್ಟು ಹಣವನ್ನು ಕೈಯಲ್ಲಿ ತೆಗೆದುಕೊಂಡು ಹೋಗಿರಿ. ಅವರು ನಿಮ್ಮ ಚೀಲಗಳ ಬಾಯಲ್ಲಿ ಹಾಕಿ ಹಿಂದಕ್ಕೆ ಕಳುಹಿಸಿದ ಹಣವನ್ನೂ ತೆಗೆದುಕೊಂಡು ಹೋಗಿರಿ. ಒಂದು ವೇಳೆ ಅದು ಅವರಿಗೆ ತಿಳಿಯದೆ ಬಂದಿರಬಹುದು. ಅಧ್ಯಾಯವನ್ನು ನೋಡಿ |
ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು.