ಆದಿಕಾಂಡ 43:14 - ಪರಿಶುದ್ದ ಬೈಬಲ್14 ನೀವು ರಾಜ್ಯಪಾಲನ ಮುಂದೆ ನಿಂತುಕೊಂಡಾಗ ಸರ್ವಶಕ್ತನಾದ ದೇವರು ನಿಮಗೆ ಸಹಾಯ ಮಾಡುವಂತೆ ನಾನು ಪ್ರಾರ್ಥಿಸುತ್ತೇನೆ. ಬೆನ್ಯಾಮೀನನನ್ನೂ ಸಿಮೆಯೋನನನ್ನೂ ಕಳುಹಿಸಿಕೊಡುವಂತೆ ಮತ್ತು ನೀವು ಸುರಕ್ಷಿತವಾಗಿ ಮರಳಿಬರುವಂತೆ ನಾನು ಪ್ರಾರ್ಥಿಸುತ್ತೇನೆ. ಇಲ್ಲವಾದರೆ, ನನ್ನ ಮಗನನ್ನು ಕಳೆದುಕೊಂಡು ನಾನು ಮತ್ತೆ ದುಃಖಿತನಾಗುವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸರ್ವಶಕ್ತನಾದ ದೇವರು ನಿಮ್ಮ ಇನ್ನೊಬ್ಬ ಅಣ್ಣನನ್ನೂ, ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಕೊಡುವಂತೆ ನಿಮ್ಮ ಮೇಲೆ ಕರುಣೆ ತೋರುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕು ಎಂದರೆ ಹಾಗೆಯೇ ಆಗಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿಬಿಡುವಂತೆ ಸರ್ವವಲ್ಲಭರಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಬೇಕಾದರೆ ಹಾಗೆಯೇ ಆಗಲಿ!” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅವನು ನಿಮ್ಮ ಮೇಲೆ ಕನಿಕರವಿಟ್ಟು ನಿಮ್ಮ ಅಣ್ಣನನ್ನೂ ಬೆನ್ಯಾಮೀನನನ್ನೂ ನಿಮ್ಮೊಂದಿಗೆ ಕಳುಹಿಸಿ ಬಿಡುವಂತೆ ಸರ್ವಶಕ್ತನಾದ ದೇವರು ಅನುಗ್ರಹಿಸಲಿ; ನಾನಂತೂ ಮಕ್ಕಳನ್ನು ಕಳಕೊಂಡವನಾಗಬೇಕಾದರೆ ಹಾಗೆಯೇ ಆಗಲಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸರ್ವಶಕ್ತ ದೇವರು ನಿಮ್ಮ ಮತ್ತೊಬ್ಬ ಸಹೋದರನನ್ನೂ ಬೆನ್ಯಾಮೀನನನ್ನೂ ಕಳುಹಿಸಿಕೊಡುವ ಹಾಗೆ, ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳೆದುಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ,” ಎಂದನು. ಅಧ್ಯಾಯವನ್ನು ನೋಡಿ |
ಆದ್ದರಿಂದ ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲೈಸು. ನಾನು ನಿನ್ನ ಸೇವಕ. ನಿನ್ನ ಹೆಸರನ್ನು ಗೌರವಿಸುವ ನಿನ್ನ ಸೇವಕರ ಪ್ರಾರ್ಥನೆಗೆ ಕಿವಿಗೊಡು. ನಾನು ಅರಸನ ಪಾನದಾಯಕನಾಗಿದ್ದೇನೆಂದು ನೀನು ತಿಳಿದಿರುವೆ. ಆದ್ದರಿಂದ ಈ ಹೊತ್ತು ನನಗೆ ಸಹಾಯ ಮಾಡು. ಅರಸನಲ್ಲಿ ಸಹಾಯಕ್ಕಾಗಿ ಕೇಳಿಕೊಳ್ಳುವಾಗ ನನಗೆ ನೆರವು ನೀಡು; ನನಗೆ ಯಶಸ್ಸನ್ನು ದಯಪಾಲಿಸು; ರಾಜನಿಗೆ ನಾನು ಮೆಚ್ಚಿಕೆಯುಳ್ಳವನಾಗಿ ಕಂಡುಬರುವಂತೆ ಸಹಾಯಮಾಡು.”
ಯೋಸೇಫನಿಗೆ ಅಲ್ಲಿ ಅನೇಕ ತೊಂದರೆಗಳು ಬಂದವು. ಆದರೆ ದೇವರು ಆ ಎಲ್ಲಾ ತೊಂದರೆಗಳಿಂದ ಅವನನ್ನು ರಕ್ಷಿಸಿದನು. ಆಗ ಫರೋಹನು ಈಜಿಪ್ಟಿನ ರಾಜನಾಗಿದ್ದನು. ದೇವರು ಯೋಸೇಫನಿಗೆ ಕೊಟ್ಟ ಜ್ಞಾನದ ದೆಸೆಯಿಂದ ಫರೋಹನು ಯೋಸೇಫನನ್ನು ಇಷ್ಟಪಟ್ಟನು ಮತ್ತು ಗೌರವಿಸಿದನು. ಫರೋಹನು ಯೋಸೇಫನನ್ನು ಈಜಿಪ್ಟಿನ ರಾಜ್ಯಪಾಲನನ್ನಾಗಿಯೂ ತನ್ನ ಮನೆಯಲ್ಲಿದ್ದ ಎಲ್ಲಾ ಜನರ ಮೇಲೆ ಅಧಿಪತಿಯನ್ನಾಗಿಯೂ ಮಾಡಿದನು.