ಆದಿಕಾಂಡ 43:15 - ಪರಿಶುದ್ದ ಬೈಬಲ್15 ಆದ್ದರಿಂದ ಸಹೋದರರು ರಾಜ್ಯಪಾಲನಿಗೆ ಕೊಡಲು ಉಡುಗೊರೆಗಳನ್ನು ತೆಗೆದುಕೊಂಡರು; ಮೊದಲನೆ ಸಲ ತೆಗೆದುಕೊಂಡು ಹೋಗಿದ್ದ ಹಣಕ್ಕಿಂತ ಎರಡರಷ್ಟು ಹೆಚ್ಚಾಗಿ ತೆಗೆದುಕೊಂಡರು. ಬೆನ್ಯಾಮೀನನು ಸಹೋದರರೊಂದಿಗೆ ಈಜಿಪ್ಟಿಗೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆಗ ಆ ಮನುಷ್ಯರು ಕಾಣಿಕೆಯನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನೂ ತೆಗೆದುಕೊಂಡು, ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತ ದೇಶಕ್ಕೆ ಹೋಗಿ ಯೋಸೇಫನ ಎದುರಿನಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅವರು ಆ ಕಾಣಿಕೆ ವಸ್ತುಗಳನ್ನು ಸಿದ್ಧಮಾಡಿಕೊಂಡು, ಎರಡರಷ್ಟು ಹಣವನ್ನು ತೆಗೆದುಕೊಂಡು ಹಾಗೂ ಬೆನ್ಯಾಮೀನನನ್ನು ಜೊತೆಯಲ್ಲಿ ಕರೆದುಕೊಂಡು ಹೊರಟರು. ಈಜಿಪ್ಟನ್ನು ಸೇರಿ, ಜೋಸೆಫನ ಸಮ್ಮುಖದಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಮನುಷ್ಯರು ಆ ಕಾಣಿಕೆಯ ವಸ್ತುಗಳನ್ನು ಸಿದ್ಧಪಡಿಸಿ ಎರಡರಷ್ಟು ಹಣವನ್ನು ತೆಗೆದುಕೊಂಡು ಬೆನ್ಯಾಮೀನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೊರಟು ಐಗುಪ್ತದೇಶಕ್ಕೆ ಸೇರಿ ಯೋಸೇಫನೆದುರಿನಲ್ಲಿ ನಿಂತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆಗ ಅವರು ಆ ಕಾಣಿಕೆಯನ್ನು ತೆಗೆದುಕೊಂಡು, ತಮ್ಮ ಕೈಯಲ್ಲಿ ಎರಡರಷ್ಟು ಹಣವನ್ನೂ, ಬೆನ್ಯಾಮೀನನನ್ನೂ ಕರೆದುಕೊಂಡು ಈಜಿಪ್ಟಿಗೆ ಹೋಗಿ, ಯೋಸೇಫನ ಮುಂದೆ ನಿಂತರು. ಅಧ್ಯಾಯವನ್ನು ನೋಡಿ |
ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು.