ಆದಿಕಾಂಡ 43:16 - ಪರಿಶುದ್ದ ಬೈಬಲ್16 ಸಹೋದರರೊಂದಿಗೆ ಬೆನ್ಯಾಮೀನನು ಇರುವುದನ್ನು ಕಂಡ ಯೋಸೇಫನು ತನ್ನ ಸೇವಕನಿಗೆ, “ಈ ಜನರನ್ನು ನನ್ನ ಮನೆಯೊಳಗೆ ಕರೆದುಕೊಂಡು ಹೋಗು; ಕುರಿಯನ್ನು ಕೊಯ್ದು ಅಡಿಗೆ ಮಾಡು. ಈ ಜನರು ಈ ಹೊತ್ತು ಮಧ್ಯಾಹ್ನ ನನ್ನೊಂದಿಗೆ ಊಟಮಾಡುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಯೋಸೇಫನು ಕಂಡು ತನ್ನ ಗೃಹನಿರ್ವಾಹಕನನ್ನು ಕರೆಯಿಸಿ, “ಈ ಮನುಷ್ಯರನ್ನು ಮನೆಯೊಳಗೆ ಕರೆದುಕೊಂಡು ಹೋಗು, ಒಳ್ಳೆ ಕೊಬ್ಬಿದ ಪಶುವನ್ನು ಕೊಯ್ದು ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟ ಮಾಡುವರು” ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬೆನ್ಯಾಮೀನನು ಅವರ ಸಂಗಡ ಇರುವುದನ್ನು ಜೋಸೆಫನು ನೋಡಿದನು. ಕೂಡಲೆ ಗೃಹನಿರ್ವಾಹಕನನ್ನು ಕರೆದು, “ಈ ಜನರು ನನ್ನ ಸಂಗಡ ಈ ಮಧ್ಯಾಹ್ನ ಊಟಮಾಡಬೇಕಾಗಿ ಇದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗು. ಮಾಂಸದ ಅಡುಗೆ ಮಾಡಿ, ಎಲ್ಲವನ್ನು ಸಿದ್ಧಪಡಿಸು,” ಎಂದು ಅಪ್ಪಣೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬೆನ್ಯಾಮೀನನು ಅವರ ಸಂಗಡ ಇರುವದನ್ನು ಯೋಸೇಫನು ಕಂಡು ತನ್ನ ಮನೆವಾರ್ತೆಯವನನ್ನು ಕರಸಿ - ಈ ಮನುಷ್ಯರು ಈ ಹೊತ್ತು ಮಧ್ಯಾಹ್ನ ನನ್ನ ಸಂಗಡ ಊಟಮಾಡಬೇಕಾಗಿದೆ; ಇವರನ್ನು ಮನೆಯೊಳಗೆ ಕರೆದುಕೊಂಡು ಹೋಗಿ ಪಶುವನ್ನು ಕೊಯಿಸಿ ಎಲ್ಲಾ ಸಿದ್ಧಪಡಿಸು ಎಂದು ಅಪ್ಪಣೆಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಯೋಸೇಫನು ಬೆನ್ಯಾಮೀನನನ್ನು ಅವರ ಸಂಗಡ ಕಂಡಾಗ ತನ್ನ ಮನೆ ಉಗ್ರಾಣಿಕನಿಗೆ, “ಈ ಮನುಷ್ಯರನ್ನು ಮನೆಗೆ ಕರೆದುಕೊಂಡು ಹೋಗಿ, ಮಾಂಸದ ಅಡುಗೆ ಸಿದ್ಧಮಾಡು. ಏಕೆಂದರೆ ಈ ಮನುಷ್ಯರು ಮಧ್ಯಾಹ್ನದಲ್ಲಿ ನನ್ನ ಸಂಗಡ ಊಟಮಾಡಬೇಕು,” ಎಂದನು. ಅಧ್ಯಾಯವನ್ನು ನೋಡಿ |