ಆದಿಕಾಂಡ 43:18 - ಪರಿಶುದ್ದ ಬೈಬಲ್18 ಆಗ ಸಹೋದರರಿಗೆ ಭಯವಾಯಿತು. ಅವರು, “ಕಳೆದ ಸಲ ನಮ್ಮ ಚೀಲಗಳಿಗೆ ಮತ್ತೆ ಹಾಕಿದ್ದ ಹಣದ ಕಾರಣದಿಂದಾಗಿ ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದಿದ್ದಾರೆ. ನಮ್ಮನ್ನು ತಪ್ಪಿತಸ್ಥರೆಂದು ನಿರ್ಣಯಿಸಿ ನಮ್ಮ ಕತ್ತೆಗಳನ್ನು ವಶಮಾಡಿಕೊಳ್ಳುವರು; ನಮ್ಮನ್ನೂ ಗುಲಾಮರನ್ನಾಗಿ ಮಾಡಿಕೊಳ್ಳುವರು” ಎಂದು ಮಾತಾಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಮೊದಲನೆಯ ಸಾರಿ ನಮ್ಮ ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿಮಿತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ. ನಮ್ಮ ಮೇಲೆ ಫಕ್ಕನೆ ಬಿದ್ದು, ನಮ್ಮನ್ನೂ, ನಮ್ಮ ಕತ್ತೆಗಳನ್ನೂ ತೆಗೆದುಕೊಂಡು ನಮ್ಮನ್ನು ದಾಸರನ್ನಾಗಿ ಮಾಡಿಕೊಳ್ಳಲು ಇಲ್ಲಿಗೆ ಕರೆಸಿದ್ದಾನೆ” ಎಂದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಅಲ್ಲಿಗೆ ಹೋಗುತ್ತಿದ್ದ ಅವರಿಗೆ ಭಯವಾಯಿತು. “ಹಿಂದೆ ನಾವು ಚೀಲಗಳಲ್ಲಿ ವಾಪಸ್ಸು ತೆಗೆದುಕೊಂಡು ಹೋದ ಹಣದ ಪ್ರಯುಕ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ದಿಢೀರನೆ ನಮ್ಮ ಮೇಲೆ ಬಿದ್ದು ನಮ್ಮನ್ನು ಗುಲಾಮರನ್ನಾಗಿಸಿಕೊಳ್ಳಬಹುದು. ನಮ್ಮ ಕತ್ತೆಗಳನ್ನು ಹಿಡಿದುಕೊಳ್ಳಬಹುದು,” ಎಂಬುದಾಗಿ ತಮ್ಮ ತಮ್ಮೊಳಗೆ ಮಾತನಾಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಮುಂಚೆ ನಾವು ಚೀಲಗಳಲ್ಲಿ ಹಿಂದಕ್ಕೆ ತೆಗೆದುಕೊಂಡು ಹೋದ ಹಣದ ನಿವಿುತ್ತವೇ ಅವನು ನಮ್ಮನ್ನು ತನ್ನ ಮನೆಯೊಳಗೆ ಕರೆಸಿದ್ದಾನೆ; ನಮ್ಮ ಮೇಲೆ ಫಕ್ಕನೆ ಬಿದ್ದು ನಮ್ಮನ್ನು ಕತ್ತೆಗಳ ಸಹಿತವಾಗಿ ಹಿಡಿಸಿ ಗುಲಾಮರನ್ನಾಗಿ ಮಾಡಿಕೊಳ್ಳಬೇಕೆಂದಿದ್ದಾನೆ ಎಂಬದಾಗಿ ತಮ್ಮ ತಮ್ಮೊಳಗೆ ಮಾತಾಡಿಕೊಂಡು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಯೋಸೇಫನ ಮನೆಗೆ ಕರೆತಂದದ್ದರಿಂದ ಅವರು ಭಯಪಟ್ಟು, “ಹಿಂದೆ ನಮ್ಮ ಚೀಲಗಳಲ್ಲಿ ತಿರುಗಿ ಸೇರಿದ ಹಣಕ್ಕಾಗಿ ನಮ್ಮನ್ನು ಹಿಡಿದು, ನಮ್ಮ ಮೇಲೆ ಬಿದ್ದು, ನಮ್ಮನ್ನು ದಾಸರಾಗಿ ಮಾಡಿ, ನಮ್ಮ ಕತ್ತೆಗಳನ್ನು ತೆಗೆದುಕೊಳ್ಳುವುದಕ್ಕೆ ನಮ್ಮನ್ನು ಇಲ್ಲಿಗೆ ತಂದಿದ್ದಾನೆ,” ಎಂದರು. ಅಧ್ಯಾಯವನ್ನು ನೋಡಿ |
ಆದರೆ ಬೇರೆ ಮುಖ್ಯಾಧಿಕಾರಿಗಳು ಮತ್ತು ದೇಶಾಧಿಪತಿಗಳು ಈ ಸಮಾಚಾರವನ್ನು ತಿಳಿದು ಹೊಟ್ಟೆಕಿಚ್ಚುಪಟ್ಟರು. ಅವರು ದಾನಿಯೇಲನ ಮೇಲೆ ದೋಷಾರೋಪಣೆ ಮಾಡಲು ಕಾರಣಗಳನ್ನು ಹುಡುಕಲಾರಂಭಿಸಿದರು. ದಾನಿಯೇಲನು ಮಾಡುವ ರಾಜ್ಯದ ಎಲ್ಲ ಕೆಲಸಗಳ ಮೇಲೆ ಅವರು ಕಣ್ಣಿಟ್ಟರು. ಆದರೆ ದಾನಿಯೇಲನಲ್ಲಿ ಯಾವ ತಪ್ಪೂ ಅವರಿಗೆ ಸಿಕ್ಕಲಿಲ್ಲ. ಆದ್ದರಿಂದ ಅವರು ಅವನ ಮೇಲೆ ಯಾವ ದೋಷಾರೋಪಣೆಯನ್ನೂ ಮಾಡಲಾಗಲಿಲ್ಲ. ದಾನಿಯೇಲನು ಪ್ರಾಮಾಣಿಕನೂ ವಿಶ್ವಾಸಪಾತ್ರನೂ ಆಗಿದ್ದನು. ಅವನು ಬಹಳ ಕಷ್ಟಪಟ್ಟು ಕೆಲಸ ಮಾಡುತ್ತಿದ್ದನು; ಅರಸನಿಗೆ ಯಾವ ರೀತಿಯಲ್ಲೂ ವಂಚನೆ ಮಾಡುತ್ತಿರಲಿಲ್ಲ.