ಆದಿಕಾಂಡ 43:20 - ಪರಿಶುದ್ದ ಬೈಬಲ್20 ಅವರು, “ಸ್ವಾಮೀ, ನಾವು ಪ್ರಮಾಣಮಾಡಿ ಹೇಳುತ್ತೇವೆ. ಇದು ಸತ್ಯ. ಕಳೆದ ಸಲ ನಾವು ಆಹಾರವನ್ನು ಕೊಂಡುಕೊಳ್ಳಲು ಬಂದಿದ್ದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ಅಯ್ಯಾ, ಮೊದಲನೆಯ ಸಾರಿ ನಾವು ಆಹಾರ ಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೇವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಅಯ್ಯಾ, ಮೊದಲೊಂದು ಸಾರಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವುದಕ್ಕೆ ಬಂದಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅಯ್ಯಾ, ಮೊದಲು ಒಂದು ಸಾರಿ ಆಹಾರಪದಾರ್ಥಗಳನ್ನು ಕೊಂಡುಕೊಳ್ಳುವದಕ್ಕೆ ಬಂದಿದ್ದೆವು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಒಡೆಯಾ, ನಾವು ಆಹಾರವನ್ನು ಕೊಂಡುಕೊಳ್ಳುವುದಕ್ಕೆ ಮೊದಲನೆಯ ಸಾರಿ ಬಂದದ್ದು ನಿಜವೇ. ಅಧ್ಯಾಯವನ್ನು ನೋಡಿ |
ಸಹೋದರರು, “ಆ ಮನುಷ್ಯನು ನಮ್ಮ ವಿಷಯವಾಗಿಯೂ ನಮ್ಮ ಕುಟುಂಬದ ವಿಷಯವಾಗಿಯೂ ತಿಳಿದುಕೊಳ್ಳಲು ಸೂಕ್ಷ್ಮವಾಗಿ ಪ್ರಶ್ನೆಗಳನ್ನು ಕೇಳಿದನು. ಅವನು ನಮಗೆ, ‘ನಿಮ್ಮ ತಂದೆಯು ಇನ್ನೂ ಜೀವಂತವಾಗಿರುವನೇ? ನಿಮಗೆ ಮನೆಯಲ್ಲಿ ಮತ್ತೊಬ್ಬ ಸಹೋದರನಿರುವನೇ?’ ಎಂದು ಕೇಳಿದನು. ನಾವು ಅವನ ಪ್ರಶ್ನೆಗಳಿಗೆ ಮಾತ್ರ ಉತ್ತರಕೊಟ್ಟೆವು. ನಮ್ಮ ಸಹೋದರನನ್ನು ತನ್ನ ಬಳಿಗೆ ಕರೆದುಕೊಂಡು ಬರಬೇಕೆಂದು ಅವನು ಹೇಳುತ್ತಾನೆಂದು ನಮಗೆ ತಿಳಿದಿರಲಿಲ್ಲ” ಎಂದು ಹೇಳಿದರು.
ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು.