ಆದಿಕಾಂಡ 43:21 - ಪರಿಶುದ್ದ ಬೈಬಲ್21-22 ಮನೆಗೆ ಹೋಗುವಾಗ ದಾರಿಯಲ್ಲಿ ನಾವು ನಮ್ಮ ಚೀಲಗಳನ್ನು ಬಿಚ್ಚಿದಾಗ ಪ್ರತಿಯೊಂದು ಚೀಲದಲ್ಲಿಯೂ ನಾವು ಪಾವತಿಮಾಡಿದ್ದ ಹಣವನ್ನು ಕಂಡೆವು. ಆ ಹಣವು ಅಲ್ಲಿಗೆ ಹೇಗೆ ಬಂತೋ ನಮಗೆ ಗೊತ್ತಿಲ್ಲ. ಆದರೆ ಆ ಹಣವನ್ನು ನಿಮಗೆ ಕೊಡುವುದಕ್ಕಾಗಿ ನಮ್ಮೊಂದಿಗೆ ತೆಗೆದುಕೊಂಡು ಬಂದಿದ್ದೇವೆ. ಈ ಸಲ ನಾವು ಖರೀದಿ ಮಾಡಬೇಕೆಂದಿರುವ ಆಹಾರಕ್ಕೆ ಕೊಡಲು ಹೆಚ್ಚು ಹಣವನ್ನು ತಂದಿದ್ದೇವೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ನಮ್ಮ ನಮ್ಮ ಚೀಲದಲ್ಲೇ ಇತ್ತು. ಅದನ್ನು ಹಿಂತಿರುಗಿಸಲು ತಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಾವು ಹೊರಟುಹೋದ ನಂತರ ಚಾವಡಿಯೊಂದರಲ್ಲಿ ಇಳಿದುಕೊಂಡೆವು. ಅಲ್ಲಿ ನಮ್ಮ ಚೀಲಗಳನ್ನು ಬಿಚ್ಚಿನೋಡಿದಾಗ ಪ್ರತಿ ಒಬ್ಬನ ಹಣ, ತೂಕ ಕಿಂಚಿತ್ತೂ ಕಡಿಮೆಯಿಲ್ಲದೆ, ಅವನವನ ಚೀಲದಲ್ಲೇ ಇತ್ತು. ಅದನ್ನು ವಾಪಸ್ಸು ತಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನಾವು ಹೊರಟುಹೋದ ನಂತರ ಇಳಿದುಕೊಂಡಿದ್ದ ಒಂದು ಸ್ಥಳದಲ್ಲಿ ನಮ್ಮ ಚೀಲಗಳನ್ನು ಬಿಚ್ಚಿ ನೋಡಿದಾಗ ಪ್ರತಿಯೊಬ್ಬನ ಹಣವು ತೂಕದಲ್ಲಿ ಏನೂ ಕಡಿಮೆಯಿಲ್ಲದೆ ಅವನವನ ಚೀಲದಲ್ಲೇ ಇತ್ತು; ಅದನ್ನು ತಿರಿಗಿ ತಂದಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇದಾದ ಮೇಲೆ ನಾವು ವಸತಿಗೃಹಕ್ಕೆ ಬಂದು ನಮ್ಮ ಚೀಲಗಳನ್ನು ತೆರೆದಾಗ, ಪ್ರತಿಯೊಬ್ಬನ ಹಣವು ಅವನವನ ಚೀಲದ ಬಾಯಲ್ಲಿ ಇತ್ತು. ನಮ್ಮ ಕೈಗಳಲ್ಲಿ ಅದನ್ನು ತಿರುಗಿ ತೆಗೆದುಕೊಂಡು ಬಂದಿದ್ದೇವೆ. ಅಧ್ಯಾಯವನ್ನು ನೋಡಿ |