Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 43:29 - ಪರಿಶುದ್ದ ಬೈಬಲ್‌

29 ಬಳಿಕ ಯೋಸೇಫನು ತನ್ನ ಸಹೋದರನಾದ ಬೆನ್ಯಾಮೀನನನ್ನು ನೋಡಿದನು. (ಬೆನ್ಯಾಮೀನ ಮತ್ತು ಯೋಸೇಫ ಒಂದೇ ತಾಯಿಯ ಮಕ್ಕಳು.) ಯೋಸೇಫನು, “ನೀವು ನನಗೆ ತಿಳಿಸಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿದನು. ಆಮೇಲೆ ಯೋಸೇಫನು ಬೆನ್ಯಾಮೀನನಿಗೆ “ಮಗನೇ, ದೇವರು ನಿನಗೆ ಒಳ್ಳೆಯದನ್ನು ಮಾಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ, “ನೀವು ಹೇಳಿದ ನಿಮ್ಮ ಕಿರಿಯ ತಮ್ಮನು ಇವನೋ?” ಎಂದು ಕೇಳಿ ಅವನಿಗೆ, “ಮಗನೇ, ದೇವರ ದಯೆ ನಿನ್ನ ಮೇಲೆ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಅನಂತರ ಕಣ್ಣೆತ್ತಿ, ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿದನು. “ನೀವು ಹೇಳಿದ ನಿಮ್ಮ ಕಿರಿಯ ತಮ್ಮ ಇವನೇನೋ?” ಎಂದು ಕೇಳಿ ಅವನಿಗೆ, “ಮಗು, ದೇವರ ಪ್ರೀತಿ ನಿನ್ನ ಮೇಲಿರಲಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆಗ ಅವನು ಕಣ್ಣೆತ್ತಿ ತನ್ನ ಒಡಹುಟ್ಟಿದ ತಮ್ಮನಾದ ಬೆನ್ಯಾಮೀನನನ್ನು ನೋಡಿ - ನೀವು ಹೇಳಿದ ನಿಮ್ಮ ಕಿರೀ ತಮ್ಮನು ಇವನೋ ಎಂದು ಕೇಳಿ ಅವನಿಗೆ - ಮಗನೇ, ದೇವರ ದಯೆ ನಿನ್ನ ಮೇಲಿರಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆಗ ಅವನು ತನ್ನ ದೃಷ್ಟಿಯಿಟ್ಟು, ತನ್ನ ತಾಯಿಯ ಮಗನೂ ತನ್ನ ತಮ್ಮನೂ ಆದ ಬೆನ್ಯಾಮೀನನನ್ನು ನೋಡಿ, “ನೀವು ನನಗೆ ಹೇಳಿದ ನಿಮ್ಮ ಚಿಕ್ಕ ತಮ್ಮನು ಇವನೋ?” ಎಂದು ಹೇಳಿ, “ನನ್ನ ಮಗನೇ, ದೇವರು ನಿನಗೆ ಕೃಪಾಳುವಾಗಿರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 43:29
22 ತಿಳಿವುಗಳ ಹೋಲಿಕೆ  

ಯೆಹೋವನು ನಿಮ್ಮನ್ನು ಕನಿಕರದಿಂದ ನೋಡಿ ನಿಮ್ಮ ಮೇಲೆ ದಯವಿಡಲಿ.


ಅದಕ್ಕೆ ಅವರು, “ಇಲ್ಲ, ನಾವೆಲ್ಲಾ ಸಹೋದರರು. ನಮ್ಮ ಕುಟುಂಬದಲ್ಲಿ ಹನ್ನೆರಡು ಮಂದಿ ಅಣ್ಣತಮ್ಮಂದಿರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಮ್ಮ ಕಿರಿಯ ತಮ್ಮನು ನಮ್ಮ ತಂದೆಯೊಂದಿಗೆ ಮನೆಯಲ್ಲಿದ್ದಾನೆ; ಇನ್ನೊಬ್ಬ ತಮ್ಮನು ಹೊರಟುಹೋದನು. ತಮ್ಮ ಸೇವಕರಾದ ನಾವು ಕಾನಾನ್ ದೇಶದಿಂದ ಬಂದವರು” ಎಂದು ಹೇಳಿದರು.


ನೀವು ಕ್ರಿಸ್ತನಲ್ಲಿ ಸಹೋದರ ಸಹೋದರಿಯರಾಗಿರುವುದರಿಂದ ಒಬ್ಬರನ್ನೊಬ್ಬರು ಪ್ರೀತಿಸಿರಿ.


ನೀನು ನಂಬಿಕೆ ಉಳ್ಳವನಾಗಿರುವುದರಿಂದ ನನಗೆ ನಿಜವಾದ ಮಗನಂತಿರುವೆ. ತಂದೆಯಾದ ದೇವರಿಂದ ಮತ್ತು ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನಿಂದ ಕೃಪೆಯೂ ಕರುಣೆಯೂ ಶಾಂತಿಯೂ ನಿನಗೆ ಲಭಿಸಲಿ.


ಯೇಸುವಿನ ಈ ಮಾತನ್ನು ಕೇಳಿ ಶಿಷ್ಯರು ಬೆರಗಾದರು. ಆದರೆ ಯೇಸು ಮತ್ತೆ, “ನನ್ನ ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ!


ಯೇಸು ಹಿಂತಿರುಗಿ ಆ ಹೆಂಗಸನ್ನು ನೋಡಿ, “ಮಗಳೇ, ಸಂತೋಷಪಡು! ನಿನ್ನ ನಂಬಿಕೆಯಿಂದಲೇ ನಿನಗೆ ಗುಣವಾಯಿತು” ಎಂದು ಹೇಳಿದನು. ಆಗ ಅವಳು ಗುಣಮುಖಳಾದಳು.


ಕೆಲವರು ಒಬ್ಬ ಪಾರ್ಶ್ವವಾಯು ರೋಗಿಯನ್ನು ಯೇಸುವಿನ ಬಳಿಗೆ ತಂದರು. ಅವನು ತನ್ನ ಹಾಸಿಗೆಯ ಮೇಲೆ ಮಲಗಿದ್ದನು. ಯೇಸು ಈ ಜನರಲ್ಲಿದ್ದ ದೊಡ್ಡ ನಂಬಿಕೆಯನ್ನು ಕಂಡು ಪಾರ್ಶ್ವವಾಯು ರೋಗಿಗೆ, “ಯುವಕನೇ, ಸಂತೋಷಪಡು. ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ” ಎಂದು ಹೇಳಿದನು.


“ಯಾಜಕರೇ, ಯೆಹೋವನು ನಮಗೆ ಶುಭವನ್ನು ಉಂಟುಮಾಡುವಂತೆ ಆತನನ್ನು ಕೇಳಿಕೊಳ್ಳಿರಿ. ಆದರೆ ಆತನು ನಿಮಗೆ ಕಿವಿಗೊಡುವುದಿಲ್ಲ. ನಿಮ್ಮ ತಪ್ಪು ದೋಷಗಳೇ ಅದಕ್ಕೆ ಕಾರಣ.” ಇದು ಸರ್ವಶಕ್ತನಾದ ಯೆಹೋವನ ನುಡಿ.


“ಯೆಹೋವನೇ, ನಮಗೆ ದಯೆತೋರು. ನಾವು ನಿನ್ನ ಸಹಾಯಕ್ಕಾಗಿ ಎದುರುನೋಡುತ್ತಿದ್ದೇವೆ. ಯೆಹೋವನೇ, ಪ್ರತಿಮುಂಜಾನೆ ನಮಗೆ ಶಕ್ತಿ ದಯಪಾಲಿಸು, ಕಷ್ಟದಲ್ಲಿರುವಾಗ ನಮ್ಮನ್ನು ರಕ್ಷಿಸು.


ಚೀಯೋನ್ ಪರ್ವತದಲ್ಲಿರುವ ಜೆರುಸಲೇಮಿನಲ್ಲಿ ಯೆಹೋವನ ಜನರು ವಾಸಿಸುವರು. ನೀವು ಇನ್ನು ಮೇಲೆ ಅಳುವದಿಲ್ಲ. ಯೆಹೋವನು ನಿಮ್ಮ ಅಳುವಿಕೆಯನ್ನು ನೋಡಿ ನಿಮ್ಮನ್ನು ಆದರಿಸುವನು. ಆತನು ನಿಮ್ಮ ಮೊರೆಯನ್ನು ಕೇಳಿ ನಿಮಗೆ ಸಹಾಯಿಸುವನು.


ಆತನು ನೀತಿವಂತರಿಗೆ ಕತ್ತಲೆಯಲ್ಲಿ ಪ್ರಕಾಶಿಸುವ ಬೆಳಕಿನಂತಿರುವನು. ಆತನು ಒಳ್ಳೆಯವನೂ ದಯಾಮಯನೂ ಕೃಪಾಮಯನೂ ಆಗಿದ್ದಾನೆ.


ದೇವರು ಅಮೋಘವಾದ ಕಾರ್ಯಗಳನ್ನು ಮಾಡುವುದರಿಂದ ಆತನ ದಯೆಯನ್ನೂ ಕೃಪೆಯನ್ನೂ ಜ್ಞಾಪಿಸಿಕೊಳ್ಳುತ್ತೇವೆ.


ದೇವರೇ, ನನ್ನನ್ನು ಕರುಣಿಸಿ ಆಶೀರ್ವದಿಸು. ಪ್ರಸನ್ನಮುಖದಿಂದ ನಮ್ಮನ್ನು ನೋಡು.


ಆದ್ದರಿಂದ ನನ್ನ ಪ್ರಿಯ ಮಕ್ಕಳೇ, ಉದಾಸೀನ ಮಾಡಬೇಡಿರಿ; ಸಮಯವನ್ನು ಹಾಳುಮಾಡಬೇಡಿ. ತನ್ನ ಸೇವೆಮಾಡುವದಕ್ಕಾಗಿ ಆತನು ನಿಮ್ಮನ್ನು ಆರಿಸಿರುತ್ತಾನೆ. ತನ್ನ ಆಲಯದಲ್ಲಿ ಸೇವೆಮಾಡುವುದಕ್ಕೂ ಧೂಪವನ್ನು ಆತನ ಮುಂದೆ ಸುಡುವದಕ್ಕೂ ನಿಮ್ಮನ್ನು ನೇಮಿಸಿರುತ್ತಾನೆ” ಎಂದು ಹೇಳಿದನು.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ಇಸ್ರೇಲಿನ ದೇವರಾದ ಯೆಹೋವನನ್ನು ಸನ್ಮಾನಿಸು; ಆತನಿಗೆ ಸ್ತೋತ್ರಸಲ್ಲಿಸು. ನಿನ್ನ ಪಾಪಗಳನ್ನು ಆತನಿಗೆ ಅರಿಕೆಮಾಡು. ನೀನು ಮಾಡಿದ್ದನ್ನು ನನಗೆ ಹೇಳು; ನನ್ನಿಂದ ಏನನ್ನೂ ಮುಚ್ಚಿಡಬೇಡ” ಎಂದನು.


ನನ್ನನ್ನು ಇಲ್ಲಿಗೆ ಕಳುಹಿಸಿದ್ದು ನಿಮ್ಮ ತಪ್ಪಲ್ಲ. ಅದು ದೇವರ ಯೋಜನೆ. ದೇವರು ನನ್ನನ್ನು ಫರೋಹನ ಅತ್ಯುನ್ನತವಾದ ಅಧಿಕಾರಿಯನ್ನಾಗಿ ಮಾಡಿದ್ದಾನೆ. ನಾನು ಅವನ ಮನೆಗೆಲ್ಲಾ ಮತ್ತು ಈಜಿಪ್ಟಿಗೆಲ್ಲಾ ರಾಜ್ಯಪಾಲನಾಗಿದ್ದೇನೆ” ಎಂದು ಹೇಳಿದನು.


ನಾವೆಲ್ಲರೂ ಸಹೋದರರು. ನಮ್ಮೆಲ್ಲರಿಗೂ ಒಬ್ಬನೇ ತಂದೆ. ನಾವು ಯಥಾರ್ಥವಾಗಿ ಬಂದವರೇ ಹೊರತು ಗೂಢಚಾರರಲ್ಲ” ಎಂದು ಹೇಳಿದರು.


ರಾಹೇಲಳ ಗಂಡುಮಕ್ಕಳು: ಯೋಸೇಫ ಮತ್ತು ಬೆನ್ಯಾಮೀನ್.


ಬಳಿಕ ನೀವು ನಮಗೆ, ‘ಹಾಗಾದರೆ ಆ ಸಹೋದರನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿ, ನಾನು ಅವನನ್ನು ನೋಡಬೇಕು’ ಎಂದು ಹೇಳಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು