ಆದಿಕಾಂಡ 43:6 - ಪರಿಶುದ್ದ ಬೈಬಲ್6 ಇಸ್ರೇಲನು, “ನಿಮಗೆ ಮತ್ತೊಬ್ಬ ಸಹೋದರನಿರುವುದಾಗಿ ನೀವು ಆ ಮನುಷ್ಯನಿಗೆ ಯಾಕೆ ಹೇಳಿದಿರಿ? ನೀವು ಅಂಥ ಕೆಟ್ಟದ್ದನ್ನು ಯಾಕೆ ಮಾಡಿದಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅದಕ್ಕೆ ಇಸ್ರಾಯೇಲನು, “ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ, ನೀವು ಯಾಕೆ ನನಗೆ ಕೇಡು ಮಾಡಿದಿರಿ?” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅದಕ್ಕೆ ಯಕೋಬನು, “ನಿಮಗೆ ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ ನನ್ನನ್ನೇಕೆ ಈ ಸಂಕಟಕ್ಕೆ ಗುರಿಮಾಡಿದಿರಿ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅದಕ್ಕೆ ಇಸ್ರಾಯೇಲನು - ಇನ್ನೊಬ್ಬ ತಮ್ಮನಿದ್ದಾನೆಂದು ಆ ಮನುಷ್ಯನಿಗೆ ಹೇಳಿ ನೀವು ಯಾಕೆ ನನಗೆ ಈ ಅಪಕಾರ ಮಾಡಿದಿರಿ ಎಂದು ಹೇಳಲು ಅವರು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇಸ್ರಾಯೇಲನು, “ನಿಮಗೆ ಇನ್ನೊಬ್ಬ ತಮ್ಮನು ಇದ್ದಾನೆಂದು ನೀವು ಏಕೆ ಆ ಮನುಷ್ಯನಿಗೆ ಹೇಳಿ ನನಗೆ ಕೇಡು ಮಾಡಿದ್ದೀರಿ?” ಎಂದನು. ಅಧ್ಯಾಯವನ್ನು ನೋಡಿ |
ಸಹೋದರರು, “ಆ ಮನುಷ್ಯನು ನಮ್ಮ ವಿಷಯವಾಗಿಯೂ ನಮ್ಮ ಕುಟುಂಬದ ವಿಷಯವಾಗಿಯೂ ತಿಳಿದುಕೊಳ್ಳಲು ಸೂಕ್ಷ್ಮವಾಗಿ ಪ್ರಶ್ನೆಗಳನ್ನು ಕೇಳಿದನು. ಅವನು ನಮಗೆ, ‘ನಿಮ್ಮ ತಂದೆಯು ಇನ್ನೂ ಜೀವಂತವಾಗಿರುವನೇ? ನಿಮಗೆ ಮನೆಯಲ್ಲಿ ಮತ್ತೊಬ್ಬ ಸಹೋದರನಿರುವನೇ?’ ಎಂದು ಕೇಳಿದನು. ನಾವು ಅವನ ಪ್ರಶ್ನೆಗಳಿಗೆ ಮಾತ್ರ ಉತ್ತರಕೊಟ್ಟೆವು. ನಮ್ಮ ಸಹೋದರನನ್ನು ತನ್ನ ಬಳಿಗೆ ಕರೆದುಕೊಂಡು ಬರಬೇಕೆಂದು ಅವನು ಹೇಳುತ್ತಾನೆಂದು ನಮಗೆ ತಿಳಿದಿರಲಿಲ್ಲ” ಎಂದು ಹೇಳಿದರು.